ಶಕ್ತಿನಗರ : ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ 4ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ‘ಜೋಡು ಜೀಟಿಗೆ’ ನಾಟಕ ಪ್ರದರ್ಶನವು ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಸೇವಾ ಟ್ರಸ್ಟ್ (ರಿ.) ಕುಂಟಲ್ಪಾಡಿ ಹಾಗೂ ಯುವವಾಹಿನಿ (ರಿ.) ಶಕ್ತಿನಗರ ಘಟಕದ ಜಂಟಿ ಆಶ್ರಯದಲ್ಲಿ ಏಪ್ರಿಲ್ 11, 2026 ರಂದು ಕುವೆಂಪು ನಾಲ್ಯ ಪದವು ಶಾಲಾ ಮೈದಾನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂದಿರ ಸೇವಾ ಟ್ರಸ್ಟ್‌ನ ಅಧ್ಯಕ್ಷ ತುಕಾರಾಮ್ ಪೂಜಾರಿ ವಹಿಸಿದ್ದರು. ಕಲ್ಲಿಮಾರ್ ಕ್ಲಿನಿಕ್‌ನ ವೈದ್ಯರಾದ ಡಾ. ಸತೀಶ್ ಕಲ್ಲಿಮಾರ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ವಿಶ್ವ ಹಿಂದೂ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹೆಚ್. ಕೆ. ಪುರುಷೋತ್ತಮ್, ಯುವ ಉದ್ಯಮಿ ಅಶ್ವಿತ್ ಕೊಟ್ಟಾರಿ, ಫಾಲ್ಗುಣಿ ಕನ್ಸ್ಟ್ರಕ್ಷನ್‌ನ ಮಾಲಕರಾದ ಶೇಖರ್ ಪೂಜಾರಿ, ಹಿಂದೂ ಸೇವಾ ಸಮಿತಿ ಕುಲಶೇಖರ ಅಧ್ಯಕ್ಷ ರವಿ ಉಮಿಕಾನ್ ಹಾಗೂ ಗ್ಲೋಬಲ್ ಲಿಫ್ಟ್ ಸರ್ವಿಸ್‌ನ ಮಾಲಕರಾದ ಕಿರಣ್ ಕುಮಾರ್ ಭಾಗವಹಿಸಿದ್ದರು.
ವೇದಿಕೆಯಲ್ಲಿ ಯುವವಾಹಿನಿ (ರಿ.) ಶಕ್ತಿನಗರ ಘಟಕದ ಅಧ್ಯಕ್ಷ ತೇಜಸ್ ವಿ. ಪೂಜಾರಿ, ವೈದ್ಯರು ಮತ್ತು ಸಮಾಜಸೇವಕರಾದ ಡಾ. ಸತೀಶ್ ಕಲ್ಲಿಮಾರ್, ಅಂತರಾಷ್ಟ್ರೀಯ ಕ್ರೀಡಾಪಟು ರಕ್ಷಾ ಪೂಜಾರಿ ರೆಂಜಾಳ, ಗಾಂಧಾರಿ ವಿದ್ಯೆಯಲ್ಲಿ ಏಷ್ಯನ್ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪಡೆದ ಶಮಿಕಾ ಎಂ.ಕೆ., ಹಾಗೂ ಟ್ರಸ್ಟ್ ಕಾರ್ಯದರ್ಶಿ ಭಾರತಿ ಜಿ. ಅಮೀನ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಡಾ. ಸತೀಶ್ ಕಲ್ಲಿಮಾರ್, ರಕ್ಷಾ ಪೂಜಾರಿ ರೆಂಜಾಳ ಮತ್ತು ಶಮಿಕಾ ಎಂ.ಕೆ. ಅವರ ಸಾಧನೆಗಳನ್ನು ಗುರುತಿಸಿ ಸನ್ಮಾನಿಸಲಾಯಿತು.
ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಿ. ವೇದವ್ಯಾಸ ಕಾಮತ್ ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಹಾರೈಸಿದರು.
ಮಂದಿರ ಸೇವಾ ಟ್ರಸ್ಟ್ ಅಧ್ಯಕ್ಷ ತುಕಾರಾಮ್ ಪೂಜಾರಿ ಮಾತನಾಡಿ, ಶೀಘ್ರದಲ್ಲೇ ಮಂದಿರ ಕಟ್ಟಡ ನಿರ್ಮಾಣ ಕಾರ್ಯ ಆರಂಭಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸ್ವಾಗತವನ್ನು ತುಕಾರಾಮ್ ಪೂಜಾರಿ ನೆರವೇರಿಸಿದರು. ನಿರೂಪಣೆಯನ್ನು ಸತೀಶ್ ನಿರ್ವಹಿಸಿದರು. ಯುವವಾಹಿನಿ ಶಕ್ತಿನಗರ ಘಟಕದ ಅಧ್ಯಕ್ಷ ತೇಜಸ್ ವಿ. ಪೂಜಾರಿ ಧನ್ಯವಾದ ಸಮರ್ಪಿಸಿದರು.


