ಮೂಲ್ಕಿ : ಯುವವಾಹಿನಿ (ರಿ.) ಮೂಲ್ಕಿ ಘಟಕ, ಬಿಲ್ಲವ ಸಮಾಜ ಸೇವಾ ಸಂಘ ಮೂಲ್ಕಿ, ಬಿರುವೆರ್ ಕುಡ್ಲ (ರಿ.) ಮೂಲ್ಕಿ ಘಟಕ, ಪ್ರೆಸ್ ಕ್ಲಬ್ ಮೂಲ್ಕಿ ಹಾಗೂ ಲಯನ್ಸ್ ಕ್ಲಬ್ ಮೂಲ್ಕಿ ಇವರ ಸಂಯುಕ್ತ ಆಶ್ರಯದಲ್ಲಿ, ಟೀಮ್ ಈಶ್ವರ್ ಮಲ್ಪೆ ಅವರ ಸಹಯೋಗದೊಂದಿಗೆ ಉಚಿತ ಕಿವಿ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಗಳಿಗೆ ಸಹಾಯಧನ ವಿತರಣೆ ಕಾರ್ಯಕ್ರಮವು ಏಪ್ರಿಲ್ 13, 2026 ರಂದು ಮೂಲ್ಕಿ ಬಿಲ್ಲವ ಸಂಘದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಬಿಲ್ಲವ ಸಂಘದ ಅಧ್ಯಕ್ಷ ವಾಮನ್ ಕೋಟ್ಯಾನ್ ಉದ್ಘಾಟಿಸಿದರು. ಯುವವಾಹಿನಿ (ರಿ.) ಮೂಲ್ಕಿ ಘಟಕದ ಅಧ್ಯಕ್ಷ ವಿನಯ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಟೀಮ್ ಈಶ್ವರ್ ಮಲ್ಪೆಯ ಸಂಯೋಜಕ ಲವ ಬಂಗೇರ, ವೈದ್ಯರಾದ ಡಾ. ಅಂಕಿತಾ ಕಲ್ಮಾಡಿ, ಲಯನ್ಸ್ ಕ್ಲಬ್ ಅಧ್ಯಕ್ಷ ಹರ್ಷರಾಜ್ ಶೆಟ್ಟಿ, ಬಿರುವೆರ್ ಕುಡ್ಲ ಮೂಲ್ಕಿ ಘಟಕದ ಉಪಾಧ್ಯಕ್ಷ ಉಮೇಶ್ ಮಾನಂಪಾಡಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಉಮೇಶ್ ಮಾನಂಪಾಡಿ ಸ್ವಾಗತಿಸಿದರು. ಉದಯ ಅಮೀನ್ ಮಟ್ಟು ಕಾರ್ಯಕ್ರಮವನ್ನು ನಿರೂಪಿಸಿದರು. ಕೊನೆಯಲ್ಲಿ ಅಧ್ಯಕ್ಷ ವಿನಯ್ ಕುಮಾರ್ ಧನ್ಯವಾದ ಸಮರ್ಪಿಸಿದರು.


