Yuvavahini

APR 26, 2026 1.00 PM IST

ಯುವವಾಹಿನಿ ಬಜಪೆ ಘಟಕದ “ಬಿಸು ಪರ್ಬ–2026” ಸಂಭ್ರಮಾಚರಣೆ

“ಬಿಸು ಪರ್ಬದಂತಹ ಹಬ್ಬಗಳು ನಮ್ಮ ಪರಂಪರೆಯನ್ನು ಜೀವಂತವಾಗಿರಿಸುತ್ತವೆ”

ಬಜಪೆ: ಯುವವಾಹಿನಿ ಬಜಪೆ ಘಟಕವು ಹತ್ತು ಹಲವು ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳುವುದರ ಜೊತೆಗೆ ಪ್ರತಿ ವರ್ಷವೂ ಹಿಂದೂ ಸಂಪ್ರದಾಯದ ಬಿಸು ಹಬ್ಬವನ್ನು ಆಚರಿಸುತ್ತ ಬರುತ್ತಿರುವುದು ಮುಂದಿನ ಪೀಳಿಗೆಗೆ ಸಂಸ್ಕೃತಿಯನ್ನು ತಿಳಿಸುವಲ್ಲಿ ಉತ್ತೇಜನ ನೀಡುವಂತಾಗಿದೆ. ಬಿಸು ಪರ್ಬದಂತಹ ಹಬ್ಬಗಳು ನಮ್ಮ ಪರಂಪರೆಯನ್ನು ಜೀವಂತವಾಗಿರಿಸುತ್ತವೆ ಎಂದು ಬಜಪೆ ಶನೀಶ್ವರ ದೇವಸ್ಥಾನದ ಅರ್ಚಕರಾದ ಅಭಿಜಿತ್ ಆನಂದ್ ಅವರು ಹೇಳಿದರು.

ಅವರು ಏಪ್ರಿಲ್ 26, 2026 ರಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ, ಬಜಪೆ ಇಲ್ಲಿ ಯುವವಾಹಿನಿ ಬಜಪೆ ಘಟಕದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಬಜಪೆ–ಕರಂಬಾರು ಸಹಯೋಗದೊಂದಿಗೆ ನಡೆದ “ಬಿಸು ಪರ್ಬ–2026” ಸಮಾರಂಭವನ್ನು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿ ಮಾತನಾಡಿದರು.

ಯುವವಾಹಿನಿ ಬಜಪೆ ಘಟಕದ ಅಧ್ಯಕ್ಷರಾದ ರೋಹಿತ್ ಪೂಜಾರಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ನಿರೂಪಕರು ಹಾಗೂ ರಂಗಭೂಮಿ ಕಲಾವಿದರಾದ ಕಿರಣ್ ಶೆಟ್ಟಿ ಅತ್ತೂರು ಅವರು ತಮ್ಮ ಉಪನ್ಯಾಸದಲ್ಲಿ ಹಿಂದೂ ಸಂಪ್ರದಾಯದ ಹೊಸ ವರ್ಷದ ಬಿಸು ಆಚರಣೆಯ ವಿಧಿ-ವಿಧಾನಗಳ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು. ಯುವವಾಹಿನಿ ಬಜಪೆ ಘಟಕವು ಅಸ್ತಿತ್ವಕ್ಕೆ ಬಂದ ನಂತರ ಪ್ರತಿ ವರ್ಷವೂ ಬಿಸು ಪರ್ಬವನ್ನು ಆಚರಿಸುತ್ತಿರುವುದು ಹಿಂದೂ ಸಂಸ್ಕೃತಿಯನ್ನು ಉಳಿಸುವಲ್ಲಿ ಶ್ಲಾಘನೀಯ ಕಾರ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಯುವವಾಹಿನಿ ಕೇಂದ್ರ ಸಮಿತಿಯ ದ್ವಿತೀಯ ಉಪಾಧ್ಯಕ್ಷರಾದ ಸುರೇಶ್ ಪೂಜಾರಿ ಅವರು ಬಜಪೆ ಘಟಕದ ಕಾರ್ಯವೈಖರಿಯನ್ನು ಶ್ಲಾಘಿಸಿದರು. ವೇದಿಕೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಬಜಪೆ–ಕರಂಬಾರು ಅಧ್ಯಕ್ಷರಾದ ಶಿವರಾಮ್ ಪೂಜಾರಿ ಉಪಸ್ಥಿತರಿದ್ದರು. ಸದಸ್ಯರು ತಮ್ಮ ಮನೆಯಲ್ಲಿ ಬೆಳೆದ ತರಕಾರಿ ಹಾಗೂ ಫಲವಸ್ತುಗಳನ್ನು ತಂದು ಬಿಸು ಕಣಿ ಇಟ್ಟು, ಸಂಪ್ರದಾಯಿಕ ಉಡುಗೆ ತೊಟ್ಟು ಕಾರ್ಯಕ್ರಮಕ್ಕೆ ವಿಶಿಷ್ಟ ಮೆರುಗು ತಂದರು. ಸದಸ್ಯರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಬಳಿಕ ಬಿಸುವಿನ ವಿಶೇಷ ಊಟೋಪಚಾರವನ್ನು ಎಲ್ಲರೂ ಸವಿದರು.
ಕಾರ್ಯಕ್ರಮದಲ್ಲಿ ಬಿಂದಿಯ ಪ್ರಾರ್ಥನೆ ನಡೆಸಿ, ಚಂದ್ರಶೇಖರ ಪೂಜಾರಿ ಹಾಗೂ ಪೂಜಾ ಕಿರಣ್ ನಿರೂಪಣೆ ಮಾಡಿದರು. ದೇವರಾಜ್ ಅಮೀನ್ ಸ್ವಾಗತಿಸಿ, ಸುಚಿತ ದೇವರಾಜ್ ಧನ್ಯವಾದ ಅರ್ಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!