Yuvavahini

APR 19, 2026 2.00 PM IST

ಯುವಸಿಂಚನ : ಎಪ್ರಿಲ್ 2026

ಯುವಸಿಂಚನ ಪತ್ರಿಕೆ ಬಿಡುಗಡೆ

ಬಂಟ್ವಾಳ : ಎಪ್ರಿಲ್ 19 ರಂದು ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ‌ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ ಸಮಾರಂಭದಲ್ಲಿ ಯುವವಾಹಿನಿಯ ಮುಖವಾಣಿ ‘ಯುವಸಿಂಚನ’ದ ಎಪ್ರಿಲ್ ಸಂಚಿಕೆಯನ್ನು ದಕ್ಷಿಣ ಕನ್ನಡ ಸಂಸದರಾದ ಬ್ರಿಜೇಶ್ ಚೌಟ ಅವರು ಬಿಡುಗಡೆಗೊಳಿಸಿದರು,

ದೇಶದ ಸಾಂಸ್ಕೃತಿಕ ವೈಭವದ ಮಹತ್ವವನ್ನು ಒತ್ತಿ ಹೇಳಿ, ಯುವಜನತೆ ಭಾರತೀಯ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕೆಂದು ಕರೆ ನೀಡಿದರು. ಯುವವಾಹಿನಿ ಸಂಸ್ಥೆಯು ಈ ನಿಟ್ಟಿನಲ್ಲಿ ಕೈಗೊಂಡಿರುವ ಸಾಂಸ್ಕೃತಿಕ ಚಟುವಟಿಕೆಗಳು ಶ್ಲಾಘನೀಯವಾಗಿದ್ದು, ಸಮಾಜದಲ್ಲಿ ಉತ್ತಮ ಮೌಲ್ಯಗಳನ್ನು ಬಿತ್ತುವಲ್ಲಿ ಮಹತ್ವದ ಕೊಡುಗೆಯನ್ನು ನೀಡುತ್ತಿದೆ ಎಂದು ಅವರು ಪ್ರಶಂಸಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ವಹಿಸಿದ್ದರು. ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್, ಅಗ್ರಜ ಬಿಲ್ಡರ್ಸ ಮಾಲಕರಾದ ಸಂದೇಶ್ ಶೆಟ್ಟಿ, ಸೇವ್ ಲೈಫ್ ಚಾರಿಟಬಲ್ ಸಂಸ್ಥಾಪಕರಾದ ಅರ್ಜುನ್ ಭಂಡಾರ್ಕರ್ ಉದ್ಯಮಿಗಳಾದ ಪ್ರಿಯದರ್ಶಿನಿ ಸುನೀಲ್ ಬಜ್ಪೆ, ಮನೋಜ್ ಶರ್ಮ, ಗೋಪಾಲ್ ಮೂಲ್ಯ, ರಾಜಶೇಖರ್ ಕೋಟ್ಯಾನ್ ಪುತ್ತೂರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಯುವಸಿಂಚನ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ಹರೀಶ್ ವಿ ಪಚ್ಚನಾಡಿ, ಉಪಸಂಪಾದಕ ರಾಜೇಶ್ ಸುವರ್ಣ, ಸಂಪಾದಕ ಮಂಡಲಿಯ ಸದಸ್ಯರಾದ ಉಷಾ ಕೆ, ಲತೀಶ್ ಸಂಕೊಳಿಗೆ, ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು, ಕಾರ್ಯದರ್ಶಿ ಮಧುಸೂದನ್ ಮದ್ವ, ಸಾಂಸ್ಕೃತಿಕ ನಿರ್ದೇಶಕ ಶೈಲೇಶ್ ಕುಚ್ಚಿಗುಡ್ಡೆ, ಹಾಗೂ ಕೇಂದ್ರ ಸಮಿತಿಯ ಸಾಂಸ್ಕೃತಿಕ ನಿರ್ದೇಶಕ ದಿನೇಶ್ ಸುವರ್ಣ ರಾಯಿ, ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್ ಪ್ರಧಾನ ಸಂಚಾಲಕರಾದ ಶ್ರೀನಿವಾಸ ಪೂಜಾರಿ ಮೆಲ್ಕಾರ್, ಸಂಚಾಲಕರಾದ ಗೀತಾ ಜಗದೀಶ್, ಉದಯ ಮೇನಾಡು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!