ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ, ಸುಂಕದಕಟ್ಟೆ, ಬಜಪೆ ಇಲ್ಲಿ ನಡೆಯುತ್ತಿರುವ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಭಜನಾ ಸಂಕೀರ್ತನೆ ಕಾರ್ಯಕ್ರಮವು ಭಕ್ತಿ ಭಾವದಿಂದ ನೆರವೇರಿತು. ದಿನಾಂಕ 28-04-2026, ಮಂಗಳವಾರ ಸಂಜೆ 5.00ರಿಂದ 8.00 ಗಂಟೆಯವರೆಗೆ ನಡೆದ ಭಜನಾ ಸಂಕೀರ್ತನೆಯಲ್ಲಿ ಘಟಕದ ಸದಸ್ಯರು ಭಕ್ತಿಪೂರ್ವಕವಾಗಿ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರಾದ ರೋಹಿತ್ ಪೂಜಾರಿ, ಭಜನಾ ಸಂಚಾಲಕರಾದ ದಿವ್ಯ ಸುನಿಲ್, ಸಹ ಸಂಚಾಲಕರಾದ ವಿನೋದ ಪೂಜಾರಿ, ಮಾಜಿ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದು ಶ್ರೀ ದೇವರ ಕೃಪೆಗೆ ಪಾತ್ರರಾದರು. ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರರಾದ ನಾರಾಯಣ ಪೂಜಾರಿ ಅವರ ಉಪಸ್ಥಿತಿಯಲ್ಲಿ ಅತಿಥಿ ಸತ್ಕಾರ ಹಾಗೂ ಪ್ರಸಾದ ವಿತರಣೆ ನಡೆಯಿತು.


