Yuvavahini

APR 24, 2026 10.00 PM IST

ಉಪ್ಪಿನಂಗಡಿ ಘಟಕದ ವತಿಯಿಂದ

ಯುವ ಬಾಂಧವ್ಯ : 2026 ಸರಣಿ ಕಾರ್ಯಕ್ರಮ.

ಉಪ್ಪಿನಂಗಡಿ : ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ಮಹತ್ವಾಕಾಂಕ್ಷಿ ಕಾರ್ಯಕ್ರಮ “ಯುವಬಾಂಧವ್ಯ..2026” ದಿನಾಂಕ 25-04-2026 ನೇ ಶನಿವಾರದಂದು ಬಿಳಿಯೂರು ಗ್ರಾಮದ ಪೂಜಾರಿಪಾಲು ಹೊಸಮನೆಯಲ್ಲಿ ಸಂಜೆ 6.30ಕ್ಕೆ ನಡೆಯಿತು.
ಗುರುಸ್ತುತಿಯೊಂದಿಗೆ ಪ್ರಾರಂಭವಾದ ಯುವ ಬಾಂಧವ್ಯದ ಸಭಾಧ್ಯಕ್ಷತೆ ವಹಿಸಿದ್ದ ಘಟಕದ ಅಧ್ಯಕ್ಷರಾದ ಮನೋಜ್ ಸಾಲ್ಯಾನ್ ಸ್ವಾಗತಿಸಿದರು, ಘಟಕದ ಕಾರ್ಯಚಟುವಟಿಕೆಗಳ ಬಗ್ಗೆ ವಿವರವಾಗಿ ತಿಳಿಸಿದರು.

ಆತಿಥ್ಯ ವಹಿಸಿ ವೇದಿಕೆಯಲ್ಲಿ ಉಪಸ್ಥಿತರಿದ್ದ ಹಿರಿಯರೂ , ಸಮಾಜಸೇವಕರಾದ ತನಿಯಪ್ಪ ಪೂಜಾರಿಯವರು ಯುವಬಾಂಧವ್ಯ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ನಮ್ಮ ಸಮಾಜದ ಸಂಘಟನೆಗಳು ಯಾವುದೇ ಇದ್ದರೂ ಸೇವಾ ಮನೋಭಾವದ ಜೊತೆಗೆ ನಾವೆಲ್ಲ ಬಿಲ್ಲವರು ಎಂದು ಅರಿತು ಸೇರಬೇಕು ಎಂದು ತಿಳಿಸಿದರು. ಕಾರ್ಯದರ್ಶಿ ರಮೇಶ್ ಎಸ್ ಸಾಂತ್ಯರವರು ಕಾರ್ಯಕ್ರಮಗಳ ವರದಿ ಮಂಡಿಸಿದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಮಾಜಿ ಅಧ್ಯಕ್ಷರಾದ ಕುಶಾಲಪ್ಪ ಹತ್ತುಕಳಸೆ ಯವರು ಮಾತನಾಡುತ್ತಾ, ಗ್ರಾಮಮಟ್ಟದಲ್ಲಿ ಪ್ರತಿ ಮನೆಗೂ ಯುವವಾಹಿನಿಯ ಧ್ಯೇಯೋದ್ದೇಶವನ್ನು ತಿಳಿಸಿಕೊಟ್ಟು ಯುವಕರನ್ನು ಸಮಾಜದ ಮುನ್ನಲೆಗೆ ತರುವುದು ಉತ್ತಮವಾದ ವಿಚಾರ ಎಂದು ತಿಳಿಸಿದರು. ವೇದಿಕೆಯಲ್ಲಿ ಉಪಾಧ್ಯಕ್ಷರಾದ ಅಂಕಿತ್ ಎಮ್. ಜೆ, ನಿಕಟಪೂರ್ವ ಅಧ್ಯಕ್ಷರಾದ ನಾಣ್ಯಪ್ಪ ಕೋಟ್ಯಾನ್ ಉಪಸ್ಥಿತರಿದ್ದರು.

ಸಭೆಯಲ್ಲಿ ಮಾಜಿ ಅಧ್ಯಕ್ಷರುಗಳಾದ ಡೀಕಯ್ಯ ಗೌಂಡತ್ತಿಗೆ, ಕೃಷ್ಣಪ್ಪ ಪೂಜಾರಿ, ನಿರ್ದೇಶಕರುಗಳು, ಸಂಘಟನಾ ಕಾರ್ಯದರ್ಶಿಗಳು, ಸದಸ್ಯರುಗಳು, ಮತ್ತು ಸಮಾಜ ಬಂಧುಗಳು ಉಪಸ್ಥಿತರಿದ್ದರು. ರಾಜೀವ ಪೂಜಾರಿ ಧನ್ಯವಾದ ಗೈದರು. ವನಿತಾ ಕೃಷ್ಣಪ್ಪ ಸಹಕರಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!