ಕುಪ್ಪೆಪದವು: ಯುವವಾಹಿನಿ (ರಿ.) ಕುಪ್ಪೆಪದವು-ಎಡಪದವು ಘಟಕದ ವತಿಯಿಂದ ಸರಕಾರಿ ಪ್ರಾಥಮಿಕ ಶಾಲೆ ಕಲ್ಲಾಡಿ ಕಿಲೆಂಜಾರು, ಕುಪ್ಪೆಪದವು ಇಲ್ಲಿ ಪರಿಸರ ಸ್ವಚ್ಛತಾ ಹಾಗೂ ವೃಕ್ಷಾರೋಪಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಂಗವಾಗಿ ಶಾಲಾ ವಠಾರದ ಸ್ವಚ್ಛತಾ ಕಾರ್ಯವನ್ನು ಕೈಗೊಂಡು, ಪರಿಸರ ಸಂರಕ್ಷಣೆಯ ಸಂದೇಶ ಸಾರುವ ಉದ್ದೇಶದಿಂದ ವಿವಿಧ ಗಿಡಗಳನ್ನು ನೆಟ್ಟು ಶ್ರಮದಾನ ನಡೆಸಲಾಯಿತು. ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವು ಅರ್ಥಪೂರ್ಣವಾಗಿ ನೆರವೇರಿತು.

ಕಾರ್ಯಕ್ರಮದಲ್ಲಿ ಯುವವಾಹಿನಿ ಕುಪ್ಪೆಪದವು-ಎಡಪದವು ಘಟಕದ ಅಧ್ಯಕ್ಷರಾದ ಶ್ರೀಧರ ಪೂಜಾರಿ, ಕಾರ್ಯದರ್ಶಿ ಅಕ್ಷತಾ, ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಆಕ್ಷಿತ್ ಕುಮಾರ್, ಘಟಕದ ಮಾಜಿ ಅಧ್ಯಕ್ಷರಾದ ಅಜಯ್ ಅಮೀನ್, ಸೌಮ್ಯ ಕೋಟ್ಯಾನ್, ಜಗದೀಶ್ ದುರ್ಗಾಕೊಡಿ ಹಾಗೂ ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರು ಸಕ್ರಿಯವಾಗಿ ಭಾಗವಹಿಸಿ ಶ್ರಮದಾನ ಮಾಡಿದರು.
ಪರಿಸರ ಸಂರಕ್ಷಣೆ ಮತ್ತು ಸಮಾಜಮುಖಿ ಚಟುವಟಿಕೆಗಳಿಗೆ ಯುವವಾಹಿನಿಯ ಬದ್ಧತೆಯನ್ನು ಈ ಕಾರ್ಯಕ್ರಮ ಮತ್ತೊಮ್ಮೆ ಅನಾವರಣಗೊಳಿಸಿತು.


