Yuvavahini

JUN 21, 2026 8.00 PM IST

ಯುವವಾಹಿನಿ ಶಕ್ತಿನಗರ ಘಟಕದಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಶಕ್ತಿನಗರ ಜೂನ್ 21 : ಯುವವಾಹಿನಿ (ರಿ.) ಶಕ್ತಿನಗರ ಘಟಕ, ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಸೇವಾ ಟ್ರಸ್ಟ್ (ರಿ.) ಶಕ್ತಿನಗರ ಕುಂಟಲ್ಪಾಡಿ ಹಾಗೂ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಸಹಯೋಗದಲ್ಲಿ ಅಂತರಾಷ್ಟ್ರೀಯ 12ನೇ ವಿಶ್ವ ಯೋಗ ದಿನಾಚರಣೆಯನ್ನು ಜೂನ್ 21ರಂದು ಬ್ರಹ್ಮಶ್ರೀ ನಾರಾಯಣ ಗುರು ಮಂದಿರ, ಕುಂಟಲ್ಪಾಡಿ ಇಲ್ಲಿ ಆಚರಿಸಲಾಯಿತು.

ಅಂತರಾಷ್ಟ್ರೀಯ ಯೋಗ ದಿನಾಚರಣೆಯು ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮಹತ್ವವನ್ನು ಸಾರುವ ದಿನವಾಗಿದ್ದು, ಯೋಗದ ಮೂಲಕ ಆರೋಗ್ಯಕರ ಜೀವನ ಹಾಗೂ ಯೋಗಕ್ಷೇಮವನ್ನು ಕಾಪಾಡಿಕೊಳ್ಳುವ ಸಂದೇಶವನ್ನು ಈ ಕಾರ್ಯಕ್ರಮದ ಮೂಲಕ ನೀಡಲಾಯಿತು. ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ.) ಕರ್ನಾಟಕದ ಹಿರಿಯ ಶಿಕ್ಷಕರಾದ ರಾಮಕೃಷ್ಣ ಅವರು ಉಸಿರಾಟದ ಕ್ರಿಯೆಗಳ ನಿತ್ಯಾಭ್ಯಾಸವನ್ನು ನಡೆಸಿಕೊಟ್ಟರು. ತುಳುವರೇ ಕೂಟದ ಸದಸ್ಯರಾದ ಜಯರಾಮ್ ಹಾಗೂ ಯುವವಾಹಿನಿ ಶಕ್ತಿನಗರ ಘಟಕದ ಕೋಶಾಧಿಕಾರಿ ಯೋಗೇಂದ್ರ ಕೋಟ್ಯಾನ್ ಅವರು ಯೋಗಾಭ್ಯಾಸದ ವಿವಿಧ ವಿಧಾನಗಳನ್ನು ಪರಿಚಯಿಸಿ ಪ್ರಾಯೋಗಿಕ ತರಬೇತಿ ನೀಡಿದರು. ಜಿಲ್ಲಾ ಹಿರಿಯ ಶಿಕ್ಷಕಿ ಹಾಗೂ ಘಟಕದ ಮಾಜಿ ಅಧ್ಯಕ್ಷೆ ಭಾರತಿ ಜಿ. ಅಮೀನ್ ಅವರು ಅನ್ನಪೂರ್ಣೇಶ್ವರಿ ಮಂತ್ರವನ್ನು ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಯೋಗ ಶಿಕ್ಷಕರಾದ ರಾಮಕೃಷ್ಣ ಅವರನ್ನು ಯುವವಾಹಿನಿ ಘಟಕದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.ಕಾರ್ಯಕ್ರಮದ ಸಂಚಾಲಕರಾಗಿ ಮಾಜಿ ಅಧ್ಯಕ್ಷೆ ಭಾರತಿ ಜಿ. ಅಮೀನ್ ಹಾಗೂ ಸಹ ಸಂಚಾಲಕರಾಗಿ ಕಾರ್ಯದರ್ಶಿ ಯೋಗೇಂದ್ರ ಕೋಟ್ಯಾನ್ ಕಾರ್ಯನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಘಟಕದ ಪದಾಧಿಕಾರಿಗಳು, ಸದಸ್ಯರು ಹಾಗೂ ಭಕ್ತಾದಿಗಳು ಭಾಗವಹಿಸಿದ್ದರು. ಘಟಕದ ಅಧ್ಯಕ್ಷರಾದ ತೇಜಸ್ ವಿ. ಪೂಜಾರಿ ಧನ್ಯವಾದ ಅರ್ಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!