Yuvavahini

JUL 26, 2026 2.00 PM IST

ಯುವವಾಹಿನಿ ಮೂಡುಬಿದಿರೆ ಘಟಕದಿಂದ

ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ಮೂಡುಬಿದಿರೆ, ಜುಲೈ 26: ಯುವವಾಹಿನಿ (ರಿ.) ಮೂಡುಬಿದಿರೆ ಘಟಕ, ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ (ರಿ.) ಶಿರ್ತಾಡಿ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ಘಟಕ ಶಿರ್ತಾಡಿ ಇವರ ಸಹಯೋಗದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸಭಾಂಗಣ, ಶಿರ್ತಾಡಿಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು.

ಶಿಬಿರದಲ್ಲಿ ಪ್ರಸಾದ್ ನೇತ್ರಾಲಯ, ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಮಂಗಳೂರು–ಮೂಡುಬಿದಿರೆ ವತಿಯಿಂದ ಉಚಿತ ನೇತ್ರ ತಪಾಸಣೆ, ಆಳ್ವಾಸ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಶೋಭಾವನ, ಮಿಜಾರು ವತಿಯಿಂದ ಉಚಿತ ಆರೋಗ್ಯ ಮಾಹಿತಿ ಹಾಗೂ ಚಿಕಿತ್ಸಾ ಶಿಬಿರ ಮತ್ತು ಆಳ್ವಾಸ್ ಹೆಲ್ತ್ ಸೆಂಟರ್, ಮೂಡುಬಿದಿರೆ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ (ರಿ.) ಶಿರ್ತಾಡಿ ಅಧ್ಯಕ್ಷ ಸೋಮನಾಥ ಶಾಂತಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಇಂತಹ ಉಚಿತ ಆರೋಗ್ಯ ಶಿಬಿರಗಳು ಸಾರ್ವಜನಿಕರಿಗೆ ಅತ್ಯಂತ ಉಪಯುಕ್ತವಾಗಿದ್ದು, ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು. ಇದೇ ಸಂದರ್ಭದಲ್ಲಿ ಯುವವಾಹಿನಿಯ ಸಮಾಜಮುಖಿ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿ ಶುಭ ಹಾರೈಸಿದರು.

ಪ್ರಸಾದ್ ನೇತ್ರಾಲಯದ ಡಾ. ರಶ್ಮಿತಾ ಸಿ.ಎನ್. ನೇತ್ರ ಆರೋಗ್ಯದ ಮಹತ್ವವನ್ನು ವಿವರಿಸಿದರೆ, ಆಳ್ವಾಸ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜಿನ ಡಾ. ಸುಧಾಮತಿ ಹೋಮಿಯೋಪಥಿ ಚಿಕಿತ್ಸಾ ಪದ್ಧತಿಯ ಕುರಿತು ಮಾಹಿತಿ ನೀಡಿದರು. ಡಾ. ಅರುಣ್ ರಕ್ತದಾನದ ಅಗತ್ಯತೆ ಹಾಗೂ ಅದರ ಮಹತ್ವವನ್ನು ವಿವರಿಸಿ ಸಾರ್ವಜನಿಕರು ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರದ ಪ್ರಯೋಜನ ಪಡೆಯುವಂತೆ ಮನವಿ ಮಾಡಿದರು. ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ಅಧ್ಯಕ್ಷ ಗಿರೀಶ್ ಕೋಟ್ಯಾನ್ ಮಾತನಾಡಿ, ಮಳೆಗಾಲದಲ್ಲಿ ಇಂತಹ ಉಚಿತ ಆರೋಗ್ಯ ತಪಾಸಣಾ ಶಿಬಿರಗಳು ಜನರ ಆರೋಗ್ಯ ಕಾಪಾಡಲು ಬಹಳ ಸಹಕಾರಿಯಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆಯಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ (ರಿ.) ಶಿರ್ತಾಡಿ ಆರೋಗ್ಯ ಸಂಚಾಲಕ ಲಕ್ಷಣ್ ಪೂಜಾರಿ, ಉಪಾಧ್ಯಕ್ಷ ಸುರೇಂದ್ರ ಪಿದಾಮಾಲೆ, ಆಳ್ವಾಸ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಡಾ. ಸುಶೀಕ್ಷಿತಾ, ಡಾ. ಕಲ್ಪನಾ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಶಿಬಿರದಲ್ಲಿ ನೂರಾರು ಸಾರ್ವಜನಿಕರು ಭಾಗವಹಿಸಿ ನೇತ್ರ ತಪಾಸಣೆ, ಆರೋಗ್ಯ ತಪಾಸಣೆ, ವೈದ್ಯಕೀಯ ಸಲಹೆ ಹಾಗೂ ರಕ್ತದಾನ ಶಿಬಿರದ ಸೌಲಭ್ಯವನ್ನು ಪಡೆದುಕೊಂಡರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!