Yuvavahini

AUG 24, 2026 11.30 AM IST

ಯುವವಾಹಿನಿ (ರಿ) ಕೇಂದ್ರ ಸಮಿತಿಯು ಆಶ್ರಯದಲ್ಲಿ ಮಾಣಿ ಘಟಕದ ಆತಿಥ್ಯದಲ್ಲಿ ಯುವ ದಿಕ್ಸೂಚಿ 2026

ಜೀವನದಲ್ಲಿ ಕಠಿಣ ಪರಿಶ್ರಮ ಅಗತ್ಯ: ಪ್ರತಿಮ್ ಕುಮಾರ್ ಕೆ.ಎಸ್.

ಮಂಗಳೂರು ಅಗಸ್ಟ್ 24 : ಆಧುನಿಕ ಯುಗದಲ್ಲಿ ಯುವಜನರು ಉನ್ನತ ವ್ಯಾಸಂಗ ಹಾಗೂ ಉದ್ಯೋಗ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಕಠಿಣ ಪರಿಶ್ರಮದೊಂದಿಗೆ ನಿಗದಿತ ಗುರಿಯನ್ನು ಹೊಂದಿ ಮುನ್ನಡೆಯುವುದು ಅಗತ್ಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಕಾರ್ಯದರ್ಶಿ ಪ್ರತಿಮ್ ಕುಮಾರ್ ಕೆ.ಎಸ್. ಅಭಿಪ್ರಾಯಪಟ್ಟರು. ಅವರು ಆ. 24ರಂದು ಮಂಗಳೂರಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಆಯೋಜಿಸಲಾಗಿದ್ದ “ಯುವ ದಿಕ್ಸೂಚಿ–2026” ಮೂರು ದಿನಗಳ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ, ಯುವವಾಹಿನಿ (ರಿ.) ಮಾಣಿ ಘಟಕದ ಆತಿಥ್ಯದಲ್ಲಿ ಹಾಗೂ B.E.W.S., ಮಂಗಳೂರು ಮತ್ತು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ಗಳ ಸಹಯೋಗದಲ್ಲಿ ಕಾರ್ಯಾಗಾರ ಆಯೋಜಿಸಲಾಗಿತ್ತು.

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಯುವಜನರಿಗೆ ಅಗತ್ಯವಾದ ಮಾರ್ಗದರ್ಶನ, ಪರೀಕ್ಷಾ ತಂತ್ರಗಳು ಹಾಗೂ ವಿಷಯಾಧಾರಿತ ತರಬೇತಿ ನೀಡುವುದು ಕಾರ್ಯಾಗಾರದ ಮುಖ್ಯ ಉದ್ದೇಶವಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ.) ಮಾಣಿ ಘಟಕದ ಅಧ್ಯಕ್ಷ ಗಣೇಶ್ ಪೂಜಾರಿ ವಹಿಸಿದ್ದರು. ಬ್ಯಾಂಕಿಂಗ್ ತರಬೇತುದಾರ ಹಾಗೂ ವೃತ್ತಿ ಮಾರ್ಗದರ್ಶಕ ಆರ್.ಕೆ. ಬಾಲಚಂದ್ರ, ಬೆಂಗಳೂರು, ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ತರಬೇತಿ ನೀಡಿದರು.

ಮುಖ್ಯ ಅತಿಥಿಯಾಗಿ B.E.W.S. (ರಿ.), ಮಂಗಳೂರು ಇದರ ಅಧ್ಯಕ್ಷ ರಾಜೇಶ್ ಬಿ. ಉಪಸ್ಥಿತರಿದ್ದರು. ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಗೌರವ ಉಪಸ್ಥಿತರಿದ್ದರು. ಕೇಂದ್ರ ಸಮಿತಿಯ ದ್ವಿತೀಯ ಉಪಾಧ್ಯಕ್ಷ ಸುರೇಶ್ ಪೂಜಾರಿ ಪಣಂಬೂರು, ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್, ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕ ಕೇಶವ ಅಂಚನ್, ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

ತರಬೇತಿಯಲ್ಲಿ ಬ್ಯಾಂಕಿಂಗ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ಅಭ್ಯರ್ಥಿಗಳಿಗೆ ಪರೀಕ್ಷಾ ತಂತ್ರಗಳು, ಸಮಯ ನಿರ್ವಹಣೆ, ಪ್ರಶ್ನೆಗಳನ್ನು ವೇಗವಾಗಿ ಹಾಗೂ ನಿಖರವಾಗಿ ಪರಿಹರಿಸುವ ವಿಧಾನಗಳು ಮತ್ತು ನಿರಂತರ ಅಭ್ಯಾಸದ ಮಹತ್ವದ ಕುರಿತು ಮಾರ್ಗದರ್ಶನ ನೀಡಲಾಯಿತು. ಯುವಜನರಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಆಸಕ್ತಿ ಮೂಡಿಸುವುದರ ಜೊತೆಗೆ, ಅವರ ಶೈಕ್ಷಣಿಕ ಹಾಗೂ ವೃತ್ತಿ ಭವಿಷ್ಯಕ್ಕೆ ಸೂಕ್ತ ದಿಕ್ಕು ತೋರಿಸುವ ನಿಟ್ಟಿನಲ್ಲಿ ಕಾರ್ಯಾಗಾರ ಮಹತ್ವದ ಹೆಜ್ಜೆಯಾಯಿತು. ಉದ್ಯೋಗಾವಕಾಶಗಳತ್ತ ಮುನ್ನಡೆಯಲು, ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸಮರ್ಥವಾಗಿ ಎದುರಿಸಲು ಯುವಜನರಿಗೆ ಇದು ಉತ್ತಮ ವೇದಿಕೆಯಾಯಿತು.

ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್ ವಂದಿಸಿದರು. ಮಾಣಿ ಘಟಕದ ರಾಜೇಶ್ ಬಲ್ಯ ಕಾರ್ಯಕ್ರಮ ನಿರೂಪಿಸಿದರು. ಒಟ್ಟಾರೆಯಾಗಿ, “ಯುವ ದಿಕ್ಸೂಚಿ–2026” ತರಬೇತಿ ಕಾರ್ಯಾಗಾರವು ಯುವಜನರ ಶೈಕ್ಷಣಿಕ ಹಾಗೂ ವೃತ್ತಿ ಭವಿಷ್ಯ ನಿರ್ಮಾಣಕ್ಕೆ ಪೂರಕವಾದ ಅರ್ಥಪೂರ್ಣ ಮತ್ತು ಯಶಸ್ವಿ ಕಾರ್ಯಕ್ರಮವಾಗಿ ಮೂಡಿಬಂದಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ : 2026ನೇ ಅಗಸ್ಟ್16 ಬೆಳಗ್ಗೆ ಗಂಟೆ 09.30 ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕದ ನಿರೆಲ್‌ಡ್

ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!