ಸಮಾಜದಲ್ಲಿ ಪರಸ್ಪರ ಪ್ರೀತಿ, ವಿಶ್ವಾಸ, ಶಾಂತಿ,ನೆಮ್ಮದಿಯನ್ನು ಬಲಪಡಿಸುವಲ್ಲಿ ಯುವಕರ ಪಾತ್ರ ಮಹತ್ತರವಾದುದು, ಈ ನಿಟ್ಟಿನಲ್ಲಿ ಯುವಕರನ್ನು ಕ್ರೀಡೆಯ ಮೂಲಕ ಸಂಘಟಿಸುವ ಯುವವಾಹಿನಿಯ ಕಾರ್ಯ ಶ್ಲಾಘನೀಯವಾದುದು ಎಂದು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಅದ್ಯಕ್ಷರಾದ ಶ್ರೀ ಅಶೋಕ್ ಎಂ.ಸುವರ್ಣ ತಿಳಿಸಿದರು.
ಅವರು ದಿನಾಂಕ 07.05.2017ನೇ ಆದಿತ್ಯವಾರ ಉಡುಪಿಯ ಉದ್ಯಾವರದಲ್ಲಿ ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ ಆತಿಥ್ಯದಲ್ಲಿ ಜರುಗಿದ ಯುವವಾಹಿನಿ ಅಂತರ್ ಘಟಕ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಸ್ಪರ್ಧೆ ಯುವಕ್ರೀಡಾ ಸಂಗಮ 2017 ಉದ್ಘಾಟಿಸಿ ಮಾತನಾಡಿದರು.
ಯುವವಾಹಿನಿ (ರಿ) ಉಡುಪಿ ಘಟಕದ ಅಧ್ಯಕ್ಷರಾದ ರಮೇಶ್ ಕುಮಾರ್ ಸಮಾರಂಭದ ಅದ್ಯಕ್ಷತೆ ವಹಿಸಿದ್ದರು.
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಮರೋಳಿ, ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುಗಂಧಿ ಶೇಖರ್, ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಅಧ್ಯಕ್ಷರಾದ ಶ್ರೀ ಗೋಪಾಲ್ ಸಿ.ಬಂಗೇರ, ಕುತ್ಪಾಡಿ ಬಿಲ್ಲವ ಸೇವಾ ಸಂಘದ ಅಧ್ಯಕ್ಷರಾದ ಶ್ರೀ ಅಶೋಕ್ ಎನ್.ಪೂಜಾರಿ, ಉಡುಪಿ ನಗರಸಭೆ ಅಧ್ಯಕ್ಷೆ ಶ್ರೀಮತಿ ಮೀನಾಕ್ಷಿ ಮಾಧವ ಬನ್ನಂಜೆ, ಉದ್ಯಾವರ ತಾಲೂಕು ಪಂಚಾಯತ್ ಸದಸ್ಯರಾದ ಶ್ರೀಮತಿ ರಜನಿ ಆರ್.ಅಂಚನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿತೇಶ್ ಜೆ.ಕರ್ಕೆರಾ, ಆರೋಗ್ಯ ಮತ್ತು ಕ್ರೀಡಾ ನಿರ್ದೇಶಕರಾದ ರಘುನಾಥ ಮಾಬಿಯಾನ್, ಯುವಕ್ರೀಡಾ ಸಂಗಮದ ಸಂಚಾಲಕರಾದ ಅಶೋಕ್ ಕೋಟ್ಯಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು
ಉಡುಪಿ ಯುವವಾಹಿನಿ ಮಾಜಿ ಅಧ್ಯಕ್ಷರಾದ ಭಾಸ್ಕರ್ ಸುವರ್ಣ ಪ್ರಾಸ್ತಾವಿಕ ಮಾತನಾಡಿದರು ಕಾರ್ಯದರ್ಶಿ ಭಾರತಿ ಭಾಸ್ಕರ್ ಸುವರ್ಣ ಧನ್ಯವಾದ ನೀಡಿದರು,ದಯಾನಂದ ಉಪ್ಪೂರು ಕಾರ್ಯಕ್ರಮ ನಿರ್ವಹಿಸಿದರು.