Yuvavahini

MAY 15, 2017 7.19 AM IST

ಯುವವಾಹಿನಿ(ರಿ) ಯಡ್ತಾಡಿ ಘಟಕ

ಯಡ್ತಾಡಿ ಯುವವಾಹಿನಿಯ ಪದಗ್ರಹಣ ಸಮಾರಂಭ

ಯುವವಾಹಿನಿ (ರಿ) ಯಡ್ತಾಡಿ ಘಟಕದ 2017-18 ನೇ ಸಾಲಿನ    ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 15.05.2017 ರಂದು ಜರುಗಿತು.ಬಿಲ್ಲವ ಒಕ್ಕೂಟ ಕೋಟ ಹೋಬಳಿಯ ಪೂರ್ವಾಧ್ಯಕ್ಷರಾದ ರತ್ನಾ ಜೆ.ರಾಜ್ ದೀಪ ಪ್ರಜ್ವಲನೆ ಮಾಡುವ ಮೂಲಕ ಸಮಾರಂಭ ಉದ್ಗಾಟಿಸಿದರು.ಕರ್ನಾಟಕ ಸರಕಾರದ ಮಾಜಿ ಸಚಿವರು ವಿದಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ, ಸಾಫ್ಟವೇರ್ ಇಂಜಿನಿಯರ್ ಸತೀಶ್ ಪೂಜಾರಿ, ಮಾಧವ ಪೂಜಾರಿ,ಸಾಲಿಗ್ರಾಮ ಪಟ್ಟಣ ಪಂಚಾಯತ್ ಸದಸ್ಯರಾದ ಅಚ್ಚುತ ಪೂಜಾರಿ, ಕೋಟ ಹೋಬಳಿಯ ಬಿಲ್ಲವ ಒಕ್ಕೂಟದ ಅಧ್ಯಕ್ಷರಾದ ಶೇಖರ ಪೂಜಾರಿ, ಜೇಸಿ ನರೇಂದ್ರ ಕುಮಾರ್ ಕೋಟ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಮರೋಳಿ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಭೋದಿಸಿದರು.

2016-17 ನೇ ಯಡ್ತಾಡಿ ಯುವವಾಹಿನಿಯ ಅಧ್ಯಕ್ಷರಾಗಿ ಉತ್ತಮ ಕಾರ್ಯ ನಿರ್ವಹಿಸಿದ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ತಿಳಿಸಿದರು.

2017-18 ನೇ ಸಾಲಿನ ನೂತನ ಅಧ್ಯಕ್ಷರಾಗಿ ಶಂಕರ ಪೂಜಾರಿ,ಕಾರ್ಯದರ್ಶಿಯಾಗಿ ಮಂಜುನಾಥ ಪೂಜಾರಿ ನೇತ್ರತ್ವದ ಯಡ್ತಾಡಿ ಯುವವಾಹಿನಿಯ ಕ್ರಿಯಾಶೀಲ ತಂಡವು ಪ್ರಮಾಣ ವಚನ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಬ್ರಹ್ಮಾವರ ತಾಲೂಕು ರಚನಾ ಸಮಿತಿಯ ಅಧ್ಯಕ್ಷರಾದ ಸತೀಶ್ ಪೂಜಾರಿ ಹಾಗೂ ಜಾನಪದ ಸಾಹಿತ್ಯ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ ಪುರಸ್ಕೃತರಾದ ಬೆಳ್ಳಿ ಬಾಯಿ ಇವರುಗಳನ್ನು ಸನ್ಮಾನಿಸಲಾಯಿತು.

SSLC ಹಾಗೂ PUC ಶೈಕ್ಷಣಿಕ ಸಾಧಕರನ್ನು ಪುರಸ್ಕರಿಸಲಾಯಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!