“ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಟಾಪರ್ಸ್ ಎಲ್ಲಿದ್ದಾರೆ? ಜೀವನದಲ್ಲಿ ಯಶಸ್ವಿಗೊಂಡರೇ.? ಟಾಪರ್ಸ್ ಎನಿಸಿಕೊಂಡಿರುವ ಕರಾವಳಿಯ ವಿದ್ಯಾರ್ಥಿಗಳು ನಮ್ಮ ಸಮಾಜದಲ್ಲಿ ಗುರುತಿಸಿಕೊಳ್ಳುತ್ತಿಲ್ಲ. ಐಎಎಸ್, ಐಪಿಎಸ್, ಇನ್ನಿತರ ಸಮಾಜದ ಉನ್ನತ ವiಟ್ಟದ ಕ್ಷೇತ್ರಗಳಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಮತ್ತು ಶಿಕ್ಷಣ ಸಂಸ್ಥೆಗಳು ಈ ಬಗ್ಗೆ ಯೋಚಿಸುವ ಅಗತ್ಯವಿದೆ” ಎಂದು ನಗರದ ಶ್ರೀ ನಾರಾಯಣಗುರು ಕಾಲೇಜಿನ ಉಪನ್ಯಾಸಕರಾದ ಕೇಶವ ಬಂಗೇರರವರು ಅಭಿಪ್ರಾಯ ವ್ಯಕ್ತ ಪಡೆಸಿದರು. ಅವರು ದಿನಾಂಕ ಮಂಗಳೂರು ಉಜ್ಜೋಡಿಯ ಶ್ರೀ ಮಹಾಂಕಾಳಿ ದೈವಸ್ಥಾನ ವಠಾರದಲ್ಲಿ ಯುವವಾಹಿನಿ ಕಂಕನಾಡಿ ಘಟಕದ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು. ಬಡತನ ಶಾಪವಲ್ಲ – ಅಂಬೇಡ್ಕರ್, ಕಲಾಂ ರಂತೆ ಕಠಿಣ ಪರಿಶ್ರಮದೊಂದಿಗೆ ವಿದ್ಯಾರ್ಜನೆ ಮಾಡಿ ಸಮಾಜದಲ್ಲಿ ಗುರುತಿಸಿಕೊಳ್ಳಬೇಕು. ದೇಶಾಭಿಮಾನ, ನಂಬಿಕೆ, ಗುರು ಭಕ್ತಿಯೊಂದಿಗೆ ಸಾಧನೆ ಮಾಡಬೇಕೆಂದು ಸನ್ಮಾನಿಸಲ್ಪಟ್ಟ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಉಜ್ಜೋಡಿ ಶ್ರೀ ಮಹಾಂಕಾಳಿ ದೈವಸ್ಥಾನದ ಅದ್ಯಕ್ಷರು ಶ್ರೀ ಶ್ರೀನಿವಾಸ ಬಂಗೇರ ಕಾರ್ಯಕ್ರಮ ಉದ್ಘಾಟಿಸಿದರು. ಯುವವಾಹಿನಿ ಕಂಕನಾಡಿ ಘಟಕದ ಅಧ್ಯಕ್ಷರಾದ ಶ್ರೀ ಗೋಪಾಲ ಪೂಜಾರಿ ಅಧ್ಯಕ್ಷತೆ ವಹಿಸಿದರು. ಮುಖ್ಯ ಅತಿಥಿಯಾಗಿ ಗುರುಪುರ ಸಹಕಾರಿ ಸಂಘದ ನಿವೃತ್ತ ಶಾಖಾ ಪ್ರಬಂಧಕರಾದ ಶ್ರೀಮತಿ. ನಿರಂಜಯ ನಾರಯಣ ಹಾಗು ಯುವವಾಹಿನಿ ಮಂಗಳೂರು ಘಟಕದ ಅಧ್ಯಕ್ಷರಾದ ರವೀಶ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸ್ಥಳೀಯ ಹನ್ನೊಂದು ವಿದ್ಯಾರ್ಥಿಗಳನ್ನು ಗುರುತಿಸಿ ಅಭಿನಂದಿಸಲಾಯಿತು . ಪ್ರತಿಭಾ ಪುರಸ್ಕಾರ ಸ್ವೀಕರಿಸಿ ನವ್ಯ ಮೋಕ್ಷ ಹಾಗೂ ಜೀತೇಶ್ ಅನ್ನಿಸಿಕೆ ವ್ಯಕ್ತಪಡಿಸಿ ಕೃತಜ್ಞತೆ ಸಲ್ಲಿಸಿದರು. ಯುವವಾಹಿನಿಯ ಸಿ. ದೇವಕಿ ಕಿಶೋರ್ ವಂದಿಸಿದರು. ಅಶ್ವಿತಾ ಕಾರ್ಯಕ್ರಮ ನಿರೂಪಿಸಿದರು.
Meaning ful program