ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಹೊಸ್ಮಾರು ಬಲ್ಯೊಟ್ಟು ಶ್ರೀ ವಿಖ್ಯಾತನಂದ ಸ್ವಾಮೀಜಿಯವರು ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಸಂದೇಶ ಹಾಗೂ ವಿದ್ಯಾನಿಧಿ ವಿತರಣಾ ಕಾರ್ಯಕ್ರಮ ದಿನಾಂಕ 09.07.2017 ನೇ ಆದಿತ್ಯವಾರ ನಡ್ಪಿಕಲ್ಲು ಶ್ರೀ ರಾಮ ಭಜನಾ ಮಂದಿರದಲ್ಲಿ ಜರುಗಿತು.
ಕಾರ್ಯಕ್ರಮದಲ್ಲಿ ಬಲ್ಯೊಟ್ಟು ಕ್ಷೇತ್ರದ ಶ್ರೀ ವಿಖ್ಯಾತನಂದ ಸ್ವಾಮೀಜಿ ಆಶೀರ್ವಚನ ನೀಡಿ ವಿದ್ಯೆಯಿಂದ ಸ್ವತಂತ್ರರಾಗಿ ಸಂಘಟನೆಯಿಂದ ಬಲಯುತರಾಗಿ ಎಂಬ ಗುರು ಸಂದೇಶವನ್ನು ಯುವವಾಹಿನಿ ಅಕ್ಷರಶಃ ಪಾಲಿಸುತ್ತಿದೆ. ಬಡ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ನೀಡುವ ಮೂಲಕ ಅಕ್ಷರ ಕ್ರಾಂತಿಗೆ ಮುನ್ನುಡಿ ಬರೆದಿದೆ ಎಂದು ನುಡಿದರು.
ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷರಾದ ಸಂಪತ್ ಬಿ.ಸುವರ್ಣ ಕಾರ್ಯಕ್ರಮ ಉದ್ಘಾಟಿಸಿದರು. ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಸದಾನಂದ ಪೂಜಾರಿ ಉಂಗಿಲಬೈಲು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಅಖಿಲ ಭಾರತ ಬಿಲ್ಲವರ ಮಹಾಮಂಡಲದ ಉಪಾಧ್ಯಕ್ಷರಾದ ಪಿತಾಂಬರ ಹೇರಾಜೆ, ನಾರಾವಿ ಜಿಲ್ಲಾಪಂಚಾಯತ್ ಸದಸ್ಯರಾದ ಪಿ.ಧರಣೇಂದ್ರ ಕುಮಾರ್, ಬೆಳ್ತಂಗಡಿ APMC ಅಧ್ಯಕ್ಷರಾದ ಸತೀಶ್ ಕುಮಾರ್ ಕಾಶಿಪಟ್ಲ, ಬೆಳ್ತಂಗಡಿ ಗೆಜ್ಜೆಗಿರಿ ಸೇವಾ ಸಮಿತಿಯ ಅಧ್ಯಕ್ಷರಾದ ಸೋಮನಾಥ ಬಂಗೇರ ವರ್ಪಾಳೆ, ಆತ್ಮೀಯ ಯುವಕ ಮಂಡಲದ ಅಧ್ಯಕ್ಷರಾದ ಸಚಿನ್ ಕುಮಾರ್ ನೂಜೋಡಿ, ದ.ಕ.ಜಿಲ್ಲಾ ಯುವಜನ ಜಕ್ಕೂಟದ ಉಪಾಧ್ಯಕ್ಷರಾದ ಸುಧಾಮಣಿ ರಮಾನಂದ ಸಾಲ್ಯಾನ್, ವೇಣೂರು ಲಯನ್ಸ್ ಕ್ಲಬ್ ಅಧ್ಯಕ್ಷರಾದ ನಿತೀಶ್ ಎಚ್, ವೇಣೂರು ಗುರುನಾರಾಯಣ ಸ್ವಾಮೀ ಸೇವಾ ಸಂಘದ ಅಧ್ಯಕ್ಷರಾದ ಪೂವಪ್ಪ ಪೂಜಾರಿ ಪರನೀರು, ಬೆಳ್ತಂಗಡಿ ಯುವವಾಹಿನಿ ಕಾರ್ಯದರ್ಶಿ ಪ್ರಶಾಂತ್ ಮಚ್ಚಿನ, ನವೀನ್ ಪಚ್ಚೇರಿ, ಸುರೇಂದ್ರ ಸಾಲ್ಯಾನ್, ಗಣೇಶ್ ಶಾಂತಿ ಮತ್ತಿತರರು ಉಪಸ್ಥಿತರಿದ್ದರು.
ಸನ್ಮಾನ
ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾದ ಮನೋಹರ್ ಬಳಂಜ,ಹಾಗೂ ವೇಣೂರು ಲಯನ್ಸ್ ಕ್ಲಬ್ ಅಧ್ಯಕ್ಷರಾದ ನಿತೀಶ್ ಎಚ್ ಇವರನ್ನು ಸನ್ಮಾನಿಸಲಾಯಿತು.
ಬಿಲ್ಲವ ಸಮಾಜದ ಆಯ್ದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ವಿತರಿಸಲಾಯಿತು.
ಸನ್ಮಾನಿತರ ಪರಿಚಯವನ್ನು ದೈಹಿಕ ಶಿಕ್ಷಣ ಶಿಕ್ಷಕರಾದ ರಾಜೇಶ್ ಕುಮಾರ್, ಮತ್ತು ಕರಿಮಣೇಲು ಗುರುನಾರಾಯಣ ಸೇವಾ ಸಂಘದ ಅಧ್ಯಕ್ಷರಾದ ಸತೀಶ್ ಉಜಿರಡ್ಜ ವಾಚಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ನಿರ್ದೇಶಕರಾದ ರಾಕೇಶ್ ಕುಮಾರ್ ಮೂಡುಕೋಡಿ ಪ್ರಸ್ತಾವನೆ ಮಾಡಿ ಸ್ವಾಗತಿಸಿದರು.
ಅರುಣ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು
Attachments area