Yuvavahini

JUL 31, 2017 9.23 AM IST

ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕ

ಕು| ಕಾವ್ಯಾಳ ಸಂಶಯಾಸ್ಪದ ಸಾವಿನ ಬಗ್ಗೆ ಸೂಕ್ತ ತನಿಖೆಗೆ ಬಂಟ್ವಾಳ ಯುವವಾಹಿನಿ ಅಗ್ರಹ

ದ.ಕ. ಜಿಲ್ಲೆಯ ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿನಿ 15 ವರ್ಷ ಪ್ರಾಯದ ರಾಷ್ಟ್ರೀಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಆಟಗಾರ್ತಿಯಾಗಿರುವ ಪ್ರತಿಭಾನ್ವಿತೆ ಕು| ಕಾವ್ಯ ಎಂಬಾಕೆಯು ದಿನಾಂಕ 20.7.2017 ರಂದು ಸಾವಿಗೀಡಾಗಿರುವುದು ಹಲವಾರು ರೀತಿಯ ಸಂಶಯವನ್ನು ಹುಟ್ಟು ಹಾಕಿದೆ.ಆದ್ದರಿಂದ ಈ ಬಗ್ಗೆ ಸೂಕ್ತವಾದ ರೀತಿಯಲ್ಲಿ ತನಿಖೆಯಾಗಬೇಕು ಹಾಗೂ ವಿದ್ಯಾರ್ಥಿಯ ಹೆತ್ತವರಿಗೆ ನ್ಯಾಯ ಒದಗಬೇಕು. ಒಂದು ವೇಳೆ ಸೂಕ್ತವಾದ ತನಿಖೆಯಾಗದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ರೀತಿಯ ಹೋರಾಟ ಹಮ್ಮಿಕೊಳ್ಳಲಾಗುವುದು ಅನಿವಾರ್ಯವಾಗುತ್ತದೆ ಎಂಬ ಮನವಿ ಪತ್ರವನ್ನು ಬಂಟ್ವಾಳ ತಾಲೂಕಿನ ತಹಶೀಲ್ದಾರರ ಮೂಲಕ ದ.ಕ. ಜಿಲ್ಲಾಧಿಕಾರಿಯವರಿಗೆ ಸಲ್ಲಿಸಲಾಯಿತು.

ವಿಷಾದದ ಸಂಕೇತವಾಗಿ ಬಂಟ್ವಾಳ ಯುವವಾಹಿನಿ ಸುಮಾರು 75 ಸದಸ್ಯರು ಕಪ್ಪುಪಟ್ಟಿ ಧರಿಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾದ ಲೋಕೇಶ್ ಸುವರ್ಣ ಅಲೆತ್ತೂರು, ಕಾರ್ಯದರ್ಶಿ ದಿನೇಶ್ ಸುವರ್ಣ ರಾಯಿ, ಕೋಶಾಧಿಕಾರಿ ಲೋಕೇಶ್ ಪೂಜಾರಿ ಪಿ.ಜೆ., ಸಲಹೆಗಾರರಾದ ಬಿ, ತಮ್ಮಯ, ಮಾಜಿ ಅಧ್ಯಕ್ಷರಾದ ಭುವನೇಶ್ ಪಚ್ಚಿನಡ್ಕ, ಬಿ. ಶ್ರೀಧರ್ ಅಮೀನ್, ರಾಜೇಶ್ ಸುವರ್ಣ, ರಾಮಚಂದ್ರ ಸುವರ್ಣ, ಪ್ರೇಮನಾಥ ಕೆ., ಬಿಲ್ಲವ ಮುಖಂಡರಾದ ಬಿ. ವಿಶ್ವನಾಥ, ನೋಣಯ್ಯ ಪೂಜಾರಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ. ತುಂಗಪ್ಪ ಬಂಗೇರ, ಸಾಮಾಜಿಕ ಕಾರ್ಯಕರ್ತರಾದ ಪ್ರಭಾಕರ ದೈವಗುಡ್ಡೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!