Yuvavahini

JUL 30, 2017 11.23 AM IST

ಯುವವಾಹಿನಿ (ರಿ) ಹಳೆಯಂಗಡಿ ಘಟಕ

ನಾಳಿನ ಸದೃಢ ಸಮಾಜಕ್ಕೆ, ಇಂದು ಸನ್ನದ್ಧರಾಗೋಣ : ಕವಿತಾ ಸನಿಲ್

ನಾಳಿನ ಸದೃಢ ಸಮಾಜಕ್ಕೆ ಇಂದು ಸನ್ನದ್ಧರಾದಲ್ಲಿ ಮಾತ್ರ ಯುವ ಸಮುದಾಯವನ್ನು ಸಂಸ್ಕøತಿ ಸಂಸ್ಕಾರಗಳ ಮೂಲಕ ಅದರ ಬಗ್ಗೆ ತಿಳುವಳಿಕೆ ನೀಡುವ ಕಾರ್ಯ ನಿರಂತರವಾಗಿ ನಡೆಯಬೇಕು ಎಂದು ಮಂಗಳೂರು ಮೇಯರ್ ಕವಿತಾ ಸನಿಲ್ ಹೇಳಿದರು.
ಹಳೆಯಂಗಡಿಯ ಬಿಲ್ಲವ ಸಮಾಜ ಸೇವಾ ಸಂಘ ಮತ್ತು ಯುವವಾಹಿನಿ ಘಟಕದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸಭಾಗೃಹದಲ್ಲಿ ನಡೆದ ಆಟಿ ಆನಿ-ಇನಿ-ಎಲ್ಲೆ ಕಾರ್ಯಕ್ರಮವನ್ನು ಬತ್ತ ಕುಟ್ಟುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಚಂದ್ರಶೇಖರ ನಾನಿಲ್ ಅಧ್ಯಕ್ಷತೆಯನ್ನು ವಹಿಸಿದ್ದರು. ಆಟಿ ಆಚರಣೆಗಳ ಬಗ್ಗೆ ವಿಶೇಷವಾಗಿ ಪರಿಸರವಾದಿ ದಿನೇಶ್ ಹೊಳ್ಳ ಮಾತನಾಡಿ, ಹಿರಿಯರಿಂದ ಬಂದಂತಹ ಆಚರಣೆಗಳಲ್ಲಿ ವೈಜ್ಞಾನಿಕವಾಗಿಯೂ ಚಿಂತಿಸಬೇಕಾಗಿದೆ. ಪಶ್ಚಿಮ ಘಟ್ಟಗಳು ಹಾಗೂ ಹಿಮಾಲಯ ಪರ್ವತ ಶ್ರೇಣಿಗಳು ಜೀವ ಸಂಕುಲದ ರಕ್ಷಣೆಯ ಹೆಬ್ಬಾಗಿಲು. ಸಿಹಿ ನೀರು ನೀಡುವ ನದಿಗಳು ಹುಟ್ಟುವಿದೇ ಇಲ್ಲಿಂದ. ಗಿಡ ಮೂಲಿಕೆಗಳು ಹಾಗೂ ಅಹಾರ ವಸ್ತುಗಳು ಪ್ರಕೃತಿಯ ಔಷಧೀಯ ಗುಣಗಳನ್ನು ಹೊಂದಿದೆ ಎಂದರು. ಹಿರಿಯ ಪ್ರಗತಿ ಪರ ಕೃಷಿಕ ಕರಿಯಪ್ಪ ಕುಕ್ಯಾನ್ ಅವರನ್ನು ಸಮ್ಮಾನಿಸಲಾಯಿತು. ಯಕ್ಷಗಾನ ತರಬೇತುದಾರ ರಾಮಚಂದ್ರರನ್ನು ಸಂಘದ ವತಿಯಿಂದ ಜಿ.ಪಂ ಸದಸ್ಯ ವಿನೋದ್ ಕುಮಾರ್ ಬೊಳ್ಳೂರು ಗೌರವಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿ, ಹಳೆಯಂಗಡಿ ಸಂಘದ ಗೌ.ಅಧ್ಯಕ್ಷ ಗಣೇಶ ಜಿ. ಬಂಗೇರ, ಕಟ್ಟಡ ಸಮಿತಿ ಅಧ್ಯಕ್ಷ ಮೋಹನ್ ಎಸ್. ಸುವರ್ಣ, ಯುವವಾಹಿನಿ ಹಳೆಯಂಗಡಿ ಘಟಕದ ಅಧ್ಯಕ್ಷ ಶರತ್ ಪಿ. ಉಪಸ್ಥಿತರಿದ್ದರು. ಭಾಸ್ಕರ ಸಾಲ್ಯಾನ್ ಸ್ವಾಗತಿಸಿ ಪ್ರಸ್ತಾಸನೆಗೈದರು, ಹಿಮಕರ ಕೋಟ್ಯಾನ್ ಮತ್ತು ಬ್ರಿಜೇಶ್ ಕುಮಾರ್ ನಿರೂಪಿಸಿದರು.

ಆಟಿ ವಿಶೇಷ:
* ಗುತ್ತಿನ ಮನೆಯ ದೈವದ ಆಲಯದ ವೇದಿಕೆ.
* ಒನಕೆಯಲ್ಲಿ ಬತ್ತ ಕುಟ್ಟುವ ಉದ್ಘಾಟನೆ.
* ತೆಲಿಕೆದ ಗೊಂಚಿಲ್, ನೃತ್ಯ ವೈಭವ.
* ತುಳುನಾಡಿನ ತಿನಸುಗಳು.

ಚಿತ್ರ _ ವರದಿ : ನರೇಂದ್ರ ಕೆರೆಕಾಡು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!