ರಕ್ತದಾನ ಶ್ರೇಷ್ಠ ದಾನಗಳಲ್ಲಿ ಒಂದಾಗಿದೆ . ನಾವು ದಾನ ಮಾಡುವ ರಕ್ತದಿಂದ ಜೀವ ಉಳಿಸಬಹುದಾಗಿದೆ ;ರಕ್ತದಾನದಿಂದ ಆರೋಗ್ಯವೂ ಉಲ್ಲಾಸಮಯವಾಗಿರುತ್ತದೆ . ಯುವವಾಹಿನಿ ಪುತ್ತೂರು ಘಟಕವು ಇಂತಹ ಶಿಬಿರಗಳನ್ನು ನಿರಂತರವಾಗಿ ನಡೆಸುತ್ತಾ ವರ್ಷ 365 ದಿನಗಳಲ್ಲಿ ಕೂಡ ರಕ್ತದ ಅವಶ್ಯಕತೆ ಇದ್ದವರಿಗೆ ಸೂಕ್ತವಾಗಿ ಸ್ಪಂದಿಸುತ್ತಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷರು ಹಾಗೂ ರೋಟರಿ ಕ್ಲಬ್ ಪುತ್ತೂರು ಪೂರ್ವ ಇದರ ಅಧ್ಯಕ್ಷರಾದ ಜಯಂತ ನಡುಬೈಲ್ ತಿಳಿಸಿದರು
ದಿನಾಂಕ 01.10.2017 ರಂದು ಯುವವಾಹಿನಿ (ರಿ ) ಪುತ್ತೂರು ಘಟಕದ ಆಶ್ರಯದಲ್ಲಿ , ರೋಟರಿ ಕ್ಲಬ್ ಪುತ್ತೂರು , ರೋಟರಿ ಕ್ಲಬ್ ಪುತ್ತೂರು ಪೂರ್ವ , ರೆಡ್ ಕ್ರಾಸ್ ಸೊಸೈಟಿ ಇದರ ಸಹಯೋಗದೊಂದಿಗೆ ಪುತ್ತೂರು ಬ್ಲಡ್ ಬ್ಯಾಂಕ್ ಇಲ್ಲಿ ಜರುಗಿದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು .
ಬ್ಲಡ್ ಬ್ಯಾಂಕ್ ವೈದ್ಯಾಧಿಕಾರಿ ಡಾ. ರಾಮಚಂದ್ರ ಭಟ್ ರಕ್ತದಾನದ ಮಹತ್ವವನ್ನು ತಿಳಿಸಿದರು . ರೋಟರಿ ಕ್ಲಬ್ ಪುತ್ತೂರು ಅಧ್ಯಕ್ಷರಾದ ಎ.ಜೆ.ರೈ , ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಚೇರಮಾನ್ ಆಸ್ಕರ್ ಆನಂದ್ , ಯುವವಾಹಿನಿ ಸಂಚಾಲಕ ಜಯಂತ ಬಾಯಾರು ಸಲಹೆಗಾರರಾದ ಡಾ. ಸದಾನಂದ ಕುಂದರ್, ಕಾರ್ಯದರ್ಶಿ ವಿಶ್ವಜಿತ್ ಅಮ್ಮು೦ಜ , ವೇದಿಕೆಯಲ್ಲಿ ಉಪಸ್ಥಿತರಿದ್ದರು ಯುವವಾಹಿನಿ ಪುತ್ತೂರು ಘಟಕದ ಅಧ್ಯಕ್ಷರಾದ ಉದಯ ಕುಮಾರ್ ಕೋಲಾಡಿ ಸ್ವಾಗತಿಸಿದರು, ಆರೋಗ್ಯ ನಿರ್ದೇಶಕರಾದ ತಿಮ್ಮಪ್ಪ ಸುವರ್ಣ ವಂದಿಸಿದರು, ಯುವವಾಹಿನಿ ಕೇಂದ್ರ ಸಮಿತಿಯ ನಿರ್ದೇಶಕರಾದ ಶಶಿಧರ ಕಿನ್ನಿಮಜಲು ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮ ನಿರೂಪಿಸಿದರು
Goodwork
Good program all the best