ಬೆಳ್ತಂಗಡಿ : ಸಮಾಜದ ಅಭಿವೃಧ್ಧಿಗೆ ಯುವವಾಹಿನಿಯ ಪೂರಕ ಕೆಲಸ ಶ್ಲಾಘನೀಯ, ಯುವವಾಹಿನಿಯು ಯುವಜನತೆಗೆ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುತ್ತಿದೆ ಎಂದು ಶಾಸಕ ಕೆ ವಸಂತ ಬಂಗೇರ ಹೇಳಿದರು .
ಅವರು ದಿನಾಂಕ 17.12.2017 ರಂದು ಬೆಳ್ತಂಗಡಿ ಗುರುನಾರಾಯಣ ವಾಣಿಜ್ಯ ಸಂಕೀರ್ಣದ ಆಶಾ ಸಾಲಿಯಾನ್ ಕಲ್ಯಾಣ ಮಂಟಪದಲ್ಲಿ ಯುವವಾಹಿನಿ(ರಿ) ಬೆಳ್ತಂಗಡಿ ಘಟಕದ 2017-18 ನೆೇ ಸಾಲಿನ ಪದಪ್ರಧಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ(ರಿ) ಬೆಳ್ತಂಗಡಿ ಘಟಕದ ಅಧ್ಯಕ್ಷ ಸದಾನಂದ ಉಂಗಿಲಬೈಲು ಅಧ್ಯಕ್ಷತೆ ವಹಿಸಿದ್ದರು. ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ದಿಕ್ಸೂಚಿ ಭಾಷಣ ಮಾಡಿದರು.
ಯುವವಾಹಿನಿ(ರಿ) ಕೇಂದ್ರ ಸಮಿತಿಯ ಉಪಾಧ್ಯಕ್ಷ ಜಯಂತ ನಡುಬೈಲು ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಭೋಧಿಸಿದರು , ಮಾಜಿ ಶಾಸಕ ಕೆ ಪ್ರಭಾಕರ ಬಂಗೇರ, ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಸೋಮನಾಥ ಬಂಗೇರ ವರ್ಪಾಳೆ, ಬಿಲ್ಲವ ಮಹಾಮಂಡಲದ ಉಪಾಧ್ಯಕ್ಷ ಬಿ. ಪೀತಾಂಬರ ಹೇರಾಜೆ, ತಾ. ಪಂ. ಸ್ಥಾಯೀ ಸಮಿತಿ ಅಧ್ಯಕ್ಷ ಸುಧೀರ್ ಆರ್ ಸುವರ್ಣ, ಯುವವಾಹಿನಿ(ರಿ) ಕೇಂದ್ರ ಸಮಿತಿಯ ಸಂಘಟನ ಕಾರ್ಯದರ್ಶಿ ರಮಾನಂದ ಸಾಲಿಯಾನ್ ಮುಂಡೂರು, ಯುವವಾಹಿನಿ(ರಿ) ಬೆಳ್ತಂಗಡಿ ಘಟಕದ ನೂತನ ಅಧ್ಯಕ್ಷ ಪ್ರಶಾಂತ್ ಮಚ್ಚಿನ, ಕಾರ್ಯದರ್ಶಿ ಜಯರಾಜ್ ನಡಕ್ಕರ ಮತ್ತಿತರರು ಉಪಸ್ಥಿತರಿದ್ದರು.
ಕುಮಾರಿ ಹವ್ಯಶ್ರೀಗೆ ವಿಧ್ಯಾನಿಧಿ ವಿತರಿಸಲಾಯಿತು. ಶಾಸಕ ಕೆ ವಸಂತ ಬಂಗೇರ, ಪತ್ರಕರ್ತರ ಸಂಘದ ಅಧ್ಯಕ್ಷ ಮನೋಹರ್ ಬಳಂಜ ಬೀಟ್ ರಾಕರ್ಸ್ ಅಕಾಡೆಮಿಯ ಜಿತೇಶ್ ಅವರನ್ನು ಸಮ್ಮಾನಿಸಲಾಯಿತು. ವಿಮರ್ಶಾ ಬಳಂಜ ಅವರಿಗೆ ಪ್ರತಿಭಾ ಪುರಸ್ಕಾರ ನಡೆಸಲಾಯಿತು. ಯುವವಾಹಿನಿ(ರಿ) ಬೆಳ್ತಂಗಡಿ ಘಟಕದ ನಿರ್ದೇಶಕ ಸ್ಮಿತೇಶ್ ಬಾರ್ಯ ಸ್ವಾಗತಿಸಿ, ಚಂದ್ರಹಾಸ್ ಬಳಂಜ, ಸುಧಾಮಣಿ ರಮಾನಂದ್ ಕಾರ್ಯಕ್ರಮ ನಿರೂಪಿಸಿದರು.
ಯುವವಾಹಿನಿ(ರಿ) ಬೆಳ್ತಂಗಡಿ ಘಟಕದ ಉಪಾಧ್ಯಕ್ಷ ಅಶ್ವತ್ಥ್ ಕುಮಾರ್ ವಂದಿಸಿದರು.
ಶ್ರೀ ಗುರು ಮಿತ್ರ ಸಮೂಹದ ನೃತ್ಯ ವೈಭವ, ತ್ರಿಲೋಕ್ ಡ್ಯಾನ್ಸ್ ಇನ್‌ಸ್ಟಿಟ್ಯೂಟ್ ಉಜಿರೆ ಅವರಿಂದ ಗಾನಮಿತ್ರ ಸಂಗಮ ನಡೆಯಿತು.