ಮಂಗಳೂರು : ಮಹಿಳೆಯರು ಪುರುಷರಿಗೆ ಸಮಾನವಾಗಿ ಸಮಾಜದಲ್ಲಿ ಸಾಧನೆ ಮಾಡುತ್ತಿದ್ದಾರೆ, ಕರಾವಳಿಯ ಹೆಚ್ಚಿನ ಮಹಿಳೆಯರು ಕ್ರೀಡಾ ಚಟುವಟಿಕೆಗಳ ಮೂಲಕ ದೇಶಕ್ಕೆ ಗೌರವ ತಂದಿದ್ದಾರೆ, ಒಂದೇ ಸಮನಾದ ತರಬೇತಿ ಮತ್ತು ಶಿಕ್ಷಣ ನೀಡಿದರೆ ಹೆಣ್ಣು ಗಂಡಿಗೆ ಎಲ್ಲಾ ರೀತಿಯಲ್ಲಿ ಸರಿಸಮಾನರು ಎಂದು ಕೆನರಾ ಪ್ರೌಢ ಶಾಲೆಯ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಯು.ಮಾಧವ ಸುವರ್ಣ ತಿಳಿಸಿದರು.
ಅವರು ದಿನಾಂಕ 11.03.2018 ರಂದು ಯುವವಾಹಿನಿ(ರಿ) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಕುದ್ರೋಳಿ ಗೋಕರ್ಣನಾಥೇಶ್ವರ ಕಾಲೇಜಿನಲ್ಲಿ ಜರುಗಿದ ಯುವವಾಹಿನಿ ಅಂತರ್ ಘಟಕ ಮಹಿಳೆಯರ ಹಗ್ಗಜಗ್ಗಾಟ ಸ್ಪರ್ಧೆ ಬೈದಶ್ರೀ ಕ್ರೀಡಾಕೂಟ 2018ರ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಏಕಲವ್ಯ ಪ್ರಶಸ್ತಿ ವಿಜೇತ ಕ್ರೀಡಾಪಟು ಸತೀಶ್ ಕುಮಾರ್ ಕುದ್ರೋಳಿ ಕ್ರೀಡಾಕೂಟ ಉದ್ಘಾಟಿಸಿದರು. ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.
ಯಾವುದೇ ಆತಂಕ , ಒತ್ತಡಗಳಿಲ್ಲದೆ ಎಲ್ಲಾ ವಯೋಮಾನದ ಮಹಿಳೆಯರು ಕ್ರೀಡಾ ಮನೋಭಾವದಿಂದ ಭಾಗವಹಿಸಿರುವುದು ವಿಶ್ವ ಮಹಿಳಾ ದಿನಾಚರಣೆಗೆ ಉತ್ತಮ ಸಂದೇಶ ನೀಡಿದಂತಾಗಿದೆ, ಈ ನಿಟ್ಟಿನಲ್ಲಿ ಯುವವಾಹಿನಿಯ ಮಹಿಳೆಯರು ಅಭಿನಂದನಾರ್ಹರು ಎಂದು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ರೇಣುಕಾ ಅಭಿಪ್ರಾಯ ಪಟ್ಟರು.
ಶ್ರೀ ವೆಂಕಟೇಶ ಶಿವಭಕ್ತಿ ಯೋಗ ಸಂಘದ ಪ್ರಧಾನ ಕಾರ್ಯದರ್ಶಿ ವಸಂತ ಕಾರಂದೂರು, ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಸಲಹೆಗಾರರಾದ ಪರಮೇಶ್ವರ ಪೂಜಾರಿ, ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಜೇಶ್ ಸುವರ್ಣ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು ಕ್ರೀಡಾಕೂಟದ ಸಂಚಾಲಕರಾದ ರೇಖಾಗೋಪಾಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಅಧ್ಯಕ್ಷರಾದ ಸುಪ್ರೀತಾ ಪೂಜಾರಿ ಸ್ವಾಗತಿಸಿದರು, ಕಾರ್ಯದರ್ಶಿ ಸುನೀತಾ ಗೋಪಾಲಕೃಷ್ಣ ವಂದಿಸಿದರು. ನರೇಶ್ ಕುಮಾರ್ ಸಸಿಹಿತ್ಲು ಹಾಗೂ ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು.
ಫಲಿತಾಂಶ :
ಪ್ರಥಮ : ಮೂಡಬಿದ್ರೆ ಘಟಕ ಎ
ದ್ವಿತೀಯ : ಬಂಟ್ವಾಳ ಘಟಕ
ತೃತೀಯ : ಮೂಡಬಿದ್ರೆ ಘಟಕ ಬಿ
ಚತುರ್ಥ : ಸುರತ್ಕಲ್ ಘಟಕ
ಪಂಚಮ : ಶಕ್ತಿನಗರ ಘಟಕ
ಉತ್ತಮ ಕ್ರೀಡಾಪಡು : ಮಲ್ಲಿಕಾ ಬಂಟ್ವಾಳ ಘಟಕ
Nice prgrm