ಸರಕಾರ ಮಾಡುವ ಕೆಲಸವನ್ನು ಯುವವಾಹಿನಿ ಮಾಡುತ್ತಿದೆ, ಉಚಿತ ವಿದ್ಯುತ್ ಕಲ್ಪಿಸುವ ಮೂಲಕ ಬಡವರ ಬಾಳಿಗೆ ಬೆಳಕು ನೀಡಿದಂತಾಗಿದೆ, ಎಂದು ಶಿವಗಿರಿ ಮಠದ ಶ್ರೀ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿ ತಿಳಿಸಿದರು.
ಅವರು ದಿನಾಂಕ 09.03.2018 ರಂದು ಯುವವಾಹಿನಿ (ರಿ) ಮುಲ್ಕಿ ಘಟಕದ ಆಶ್ರಯದಲ್ಲಿ ಮುಲ್ಕಿಯ ಚಿತ್ರಾಪು ನಿವಾಸಿ ದೇವದಾಸ್ ಮನೆಯ ಉಚಿತ ವಿದ್ಯುತ್ ಸಂಪರ್ಕವನ್ನು ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ, ಯುವವಾಹಿನಿ ಮುಲ್ಕಿ ಘಟಕದ ಅಧ್ಯಕ್ಷರಾದ ರಕ್ಷಿತಾ ವೈ ಕೋಟ್ಯಾನ್, ಕಾರ್ಯದರ್ಶಿ ಸತೀಶ್ ಕಿಲ್ಪಾಡಿ, ಮಾಜಿ ಅಧ್ಯಕ್ಷರಾದ ಹರೀಂದ್ರ ಸುವರ್ಣ, ಜಯ ಪೂಜಾರಿ, ಪ್ರಕಾಶ್ ಸುವರ್ಣ, ಯೋಗೀಶ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.
ಮನೆ ಬೆಳಗಿಸಿದ ಯುವವಾಹಿನಿ….. ಸದಾ ನೆನಪಲ್ಲಿ ಉಳಿಯುವ ಕೆಲಸ…
good job