ಹಕ್ಕು ಮತ್ತು ಸ್ವಾತಂತ್ರ್ಯ ವನ್ನು ಕಾಯ್ದುಕೊಳ್ಳುವಲ್ಲಿ ಬದುಕಿನ ಅನಿವಾರ್ಯ ಪರಿಸ್ಥಿತಿಗಳಲ್ಲಿ ಕುಟುಂಬದ ಪ್ರೀತಿ ಮತ್ತು ಜವಾಬ್ದಾರಿಯಿಂದ ಮಹಿಳೆ ವಂಚಿತಳಾಗುತ್ತಿದ್ದಾಳೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಮಹಿಳಾ ಸಂಘಟನಾ ನಿರ್ದೇಶಕಿ ಸಂದ್ಯಾ ಕೋಟ್ಯಾನ್ ತಿಳಿಸಿದರು
ಅವರು ದಿನಾಂಕ 10.03.2018 ರಂದು ಯುವವಾಹಿನಿ (ರಿ) ಮುಲ್ಕಿ ಘಟಕದ ಆಶ್ರಯದಲ್ಲಿ , ಮುಲ್ಕಿ ಬಿಲ್ಲವ ಸಂಘದಲ್ಲಿ ಜರುಗಿದ ಭೂಮಿಕಾ – ಮಾರ್ಗದರ್ಶನದೊಂದಿಗೆ ಸ್ತ್ರೀ ಸಂವೇದನೆ , ಸಾಂಸ್ಕೃತಿಕದೊಂದಿಗೆ ಸನ್ಮಾನ ಗೌರವ ಕಾರ್ಯಕ್ರಮ ಉದ್ಘಾಟಿಸಿದರು.
ಯುವವಾಹಿನಿ ಮುಲ್ಕಿ ಘಟಕದ ಅಧ್ಯಕ್ಷರಾದ ರಕ್ಷಿತಾ ವೈ ಕೋಟ್ಯಾನ್ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮುಲ್ಕಿ ಬಿಲ್ಲವ ಸಂಘದ ಅಧ್ಯಕ್ಷರಾದ ಗೋಪಿನಾಥ್ ಪಡಂಗ ಮಾತನಾಡಿ ಮಹಿಳೆಯರು ಸಂಘಟಿತರಾಗಿ ಒಂದು ವಿಚಾರವನ್ನು ಯೋಜನೆಯಾಗಿ ಮಾರ್ಪಾಡು ಮಾಡುವ ಮೂಲಕ ಯುವ ಶಕ್ತಿಯನ್ನು ಸಂಪೂರ್ಣವಾಗಿ ಸುಸ್ಥಿತಿಗೆ ತರುವ ಶಕ್ತಿ ಉಳ್ಳವರು, ದೊರೆತ ಅವಕಾಶವನ್ನು ಸದುಪಯೋಗ ಪಡುಸಿಕೊಳ್ಳುವ ಮೂಲಕ ಸಮಾಜಕ್ಕೆ ಶಕ್ತಿ ತುಂಬುವಂತಾಗಬೇಕು ಎಂದರು. ಮಹಿಳಾ ಶಕ್ತಿ ಸಕ್ರೀಯವಾದಾಗ ಎಲ್ಲಾ ವ್ಯವಸ್ಥೆ ಸುಧಾರಣೆ ಸಾಧ್ಯ ಈ ನಿಟ್ಟಿನಲ್ಲಿ ಯುವವಾಹಿನಿ ಮುಲ್ಕಿ ಘಟಕದ ಕಾರ್ಯ ಶ್ಲಾಘನೀಯ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ ಅಭಿಪ್ರಾಯ ಪಟ್ಟರು.
ಹಳೆಯಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಮೀನಾ ಕೋಟ್ಯಾನ್, ಸಮಾಜ ಸೇವಕಿ ಕಲ್ಯಾಣಿ ಶೆಟ್ಟಿ ಅವರಿಗೆ ಸಾಧನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಆಳ್ವಾಸ್ ಕಾಲೇಜಿನ ಉಪನ್ಯಾಸಕರಾದ ಸುಧಾರಾಣಿ, ಮಂಗಳೂರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ಮೇಲ್ವಿಚಾರಕಿ ನಾಗಾರತ್ನ , ಪಿಡಿಒ ಅನಿತಾ ಕ್ಯಾಥರಿನ್ ಇವರುಗಳು ಸಂವಾದ ಕಾರ್ಯಕ್ರಮ ನಡೆಸಿಕೊಟ್ಟರು.
ಕಾರ್ಯಕ್ರಮ ಸಂಚಾಲಕರಾದ ಸುಲೋಚನಾ , ಚರಿಷ್ಮಾ ಕೋಶಾಧಿಕಾರಿ ಭಾರತಿ ಭಾಸ್ಕರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಯುವವಾಹಿನಿ ಮುಲ್ಕಿ ಘಟಕದ ಅಧ್ಯಕ್ಷರಾದ ರಕ್ಷಿತಾ ವೈ ಕೋಟ್ಯಾನ್ ಸ್ವಾಗತಿಸಿದರು, ಕಾರ್ಯದರ್ಶಿ ಸತೀಶ್ ಕಿಲ್ಪಾಡಿ ವಂದಿಸಿದರು. ಜಾಹ್ನವಿ ಮೋಹನ್ ಹಾಗೂ ರಾಜೇಶ್ವರಿ ನಿತ್ಯಾನಂದ ಕಾರ್ಯಕ್ರಮ ನಿರೂಪಿಸಿದರು.
ಅರ್ಥ ಪೂರ್ಣ ಕಾರ್ಯಕ್ರಮ….