ಕುಪ್ಪೆಪದವು : ಸತ್ ಚಿಂತನೆಯನ್ನು ರೂಪಿಸಿಕೊಳ್ಳುವ ಮೂಲಕ ಯುವ ಸಮುದಾಯದ ಶಕ್ತಿ ಸಾರ್ಥಕತೆಯನ್ನು ಪಡೆಯುತ್ತದೆ, ಸಮಾಜಮುಖಿ ಕಾರ್ಯಗಳ ಮೂಲಕ ಶೋಷಿತ ಜನಾಂಗವನ್ನು ಮುಖ್ಯ ವಾಹಿನಿಗೆ ತರುವಂತಹ ಯುವವಾಹಿನಿ ಸಮಾಜದ ಆಶ್ರಯ ವಾಹಿನಿಯಾಗಿದೆ, ಬಿಲ್ಲವ ಸಮಾಜದ ಆದರ್ಶದ ದಾರಿದೀಪವಾಗಿದೆ ಎಂದು ಶ್ರೀ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ತಿಳಿಸಿದರು
ಅವರು ದಿನಾಂಕ 01.04.2018 ರಂದು ಯುವವಾಹಿನಿಯ 30 ನೇ ನೂತನ ಘಟಕ ಯುವವಾಹಿನಿ (ರಿ) ಕುಪ್ಪೆಪದವು ಘಟಕ ಉದ್ಘಾಟಿಸಿ ಆಶೀರ್ವಚನ ನೀಡಿದರು.
ಬ್ರಹ್ಮಶ್ರೀ ನಾರಾಯಣಗುರುಗಳ ಸಂದೇಶಗಳನ್ನು ಅಕ್ಷರಶಃ ಪಾಲಿಸುತ್ತಿರುವ ಯುವವಾಹಿನಿ ದ್ವಿತೀಯ ಹಂತದ ನಾಯಕರನ್ನು ಸೃಷ್ಟಿಸುವ ಕಾರ್ಖಾನೆಯಾಗಿದೆ ಎಂದು ಪ್ರಧಾನ ಭಾಷಣ ಮಾಡಿದ ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷರಾದ ಸಂಪತ್ ಬಿ.ಸುವರ್ಣ ತಿಳಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ ಅರುಣ್ ಕುಮಾರ್ ಅಂಬೆಲೊಟ್ಟು ನೇತ್ರತ್ವದ ಯುವವಾಹಿನಿ (ರಿ) ಕುಪ್ಪೆಪದವು ಘಟಕದ ಪ್ರಪ್ರಥಮ ತಂಡಕ್ಕೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಕುಪ್ಪೆಪದವು ದುರ್ಗೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಉಮೇಶ್ ಅಮೀನ್, ಕುಪ್ಪೆಪದವು ನಾರಾಯಣಗುರು ಸೇವಾ ಸಮಿತಿಯ ಕೋಶಾಧಿಕಾರಿ ಪುರುಷೋತ್ತಮ ಕೆ, ಪ್ರಗತಿಪರ ಕೃಷಿಕರಾದ ವಿಶ್ವನಾಥ ಕಲ್ಪನೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಯುವವಾಹಿನಿ ಕುಪ್ಪೆಪದವು ಘಟಕವನ್ನು ಗುರುಹಿರಿಯರ ಮಾರ್ಗದರ್ಶನ, ಯುವವಾಹಿನಿ ಸದಸ್ಯರ ಸಹಕಾರದ ಮೂಲಕ ಸಮರ್ಥವಾಗಿ ಮುನ್ನಡೆಸುವ ಆತ್ಮವಿಶ್ವಾಸ ಇದೆ ಎಂದು ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಅರುಣ್ ಕುಮರ್ ಅಭಿಪ್ರಾಯ ಪಟ್ಟರು.
ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಪ್ರದೀಪ್ ಅಮೀನ್ , ನೂತನ ಕಾರ್ಯದರ್ಶಿ ರಿತೇಶ್ ನೆಲ್ಲಚ್ಚಿಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು
ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಸುನೀಲ್ ಕೆ ಅಂಚನ್ ಪ್ರಾಸ್ತಾವಿಕ ಭಾಷಣ ಮಾಡಿದರು, ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಜೇಶ್ ಸುವರ್ಣ ನೂತನ ಪದಾಧಿಕಾರಿಗಳನ್ನು ಪರಿಚಯಿಸಿದರು, ಯುವವಾಹಿನಿ ಬಜಪೆ ಘಟಕದ ಅಧ್ಯಕ್ಷರಾದ ದೇವರಾಜ್ ಅಮೀನ್ ಸ್ವಾಗತಿಸಿದರು, ಯುವವಾಹಿನಿ ಕುಪ್ಪೆಪದವು ಘಟಕದ ಉಪಾಧ್ಯಕ್ಷರಾದ ಅಜಯ್ ಅಮೀನ್ ಧನ್ಯವಾದ ನೀಡಿದರು, ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ನರೇಶ್ ಕುಮಾರ್ ಸಸಿಹಿತ್ಲು ಕಾರ್ಯಕ್ರಮ ನಿರೂಪಿಸಿದರು
Great achievement.keep it up