Yuvavahini

OCT 23, 2016 5.54 AM IST

ಯುವವಾಹಿನಿ(ರಿ) ಕೂಳೂರು ಘಟಕ

ಸಾರ್ವಜನಿಕ ಸಂವಹನ ತರಬೇತಿ ಶಿಬಿರ

ದಿನಾಂಕ 23-10-2016 ರಂದು ಕೂಳೂರು ಘಟಕದ ವತಿಯಿಂದ ಕೂಳೂರಿನ ಬ್ರಹ್ಮಶ್ರೀ ನಾರಾಯಣಗುರು ಸೇವಾ ಮಂದಿರದ ಸಭಾಂಗಣದಲ್ಲಿ ಘಟಕದ ಸದಸ್ಯರಿಗಾಗಿ ಒಂದು ದಿನದ ಸಾರ್ವಜನಿಕ ಸಂವಹನ ತರಬೇತಿ ಶಿಬಿರವನ್ನು ಆಯೋಜಿಸಲಾಗಿತ್ತು. ಬೆಳಿಗ್ಗೆ 9 ಗಂಟೆಯಿಂದ 2.30 ರ ತನಕ ಜರಗಿದ ತರಬೇತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಜೇಸೀ ಅಂತಾರಾಷ್ಟ್ರೀಯ ತರಬೇತುದಾರ ರಾಮಚಂದ್ರ ರಾವ್‌ರವರು ಸದಸ್ಯರು ಸಭೆಯಲ್ಲಿ ಮಾತನಾಡುವಾಗ ಯಾವ ರೀತಿ ಪೂರ್ವ ತಯಾರಿ ಮಾಡಬೇಕು, ಯಾವೊಂದು ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳಬೇಕೆಂಬ ವಿಷಯವನ್ನು ತಿಳಿಸಿದರು. ನಂತರ ೨೫ ಮಂದಿಯ ಗುಂಪನ್ನು ಎರಡು ತಂಡಗಳಾಗಿ ವಿಂಗಡಿಸಿ ಎಲ್ಲಾ ಪಾತ್ರಗಳ ಅಭಿನಯವನ್ನು ಮಾಡಿಸಿದರು. ಅಭಿನಯದ ನಂತರ ಸದಸ್ಯರಲ್ಲಾದ ಲೋಪದೋಷಗಳನ್ನು ಯಾವ ರೀತಿ ತಿದ್ದಬಹುದೆಂಬುದರ ಬಗ್ಗೆ ತರಬೇತಿ ನೀಡಿದರು.

ಅಪರಾಹ್ನ 3 ರಿಂದ 4 ಗಂಟೆಯ ತನಕ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಕೆ. ರಾಜೀವ ಪೂಜಾರಿಯವರು ಯುವವಾಹಿನಿಯ ಬೈಲಾದ ಬಗ್ಗೆ, ಯುವವಾಹಿನಿ ಮುಖ್ಯ ಉದ್ದೇಶ ಹಾಗೂ ಯುವವಾಹಿನಿಯು ಯಾವ ರೀತಿಯಲ್ಲಿ ಕೆಲಸ ನಿರ್ವಹಿಸುತ್ತದೆ ಹಾಗೂ ಪ್ರತಿಯೊಬ್ಬ ಸದಸ್ಯನ ಜವಾಬ್ದಾರಿಗಳನ್ನು ಸದಸ್ಯರಿಗೆ ತಿಳಿಹೇಳಿದರು. ಘಟಕದ ಸಲಹೆಗಾರರಾದ ಪರಮೇಶ್ವರ ಪೂಜಾರಿ ಹಾಗೂ ಕೇಂದ್ರ ಸಮಿತಿಯ ಸ್ಥಾಪಕ ಅಧ್ಯಕ್ಷ ಸಂಜೀವ ಪೂಜಾರಿ ಯವರು ಭಾಗವಹಿಸಿದ್ದರು.

ಕಾರ್ಯಕ್ರಮದ ಸಂಚಾಲಕತ್ವವನ್ನು ವ್ಯಕ್ತಿತ್ವ ವಿಕಸನ ನಿರ್ದೇಶಕರಾದ ಶ್ರೀಮತಿ ರೇಣುಕಾ ತಾರನಾಥ್ ಇವರು ವಹಿಸಿದ್ದರು. ಶ್ರೀ ಲೋಕೇಶ್ ಕೋಟ್ಯಾನ್ ವಂದಿಸಿದರು. ಘಟಕದ ಸರ್ವ ಸದಸ್ಯರು ಈ ಕಾರ್ಯಾಗಾರದ ಪ್ರಯೋಜನವನ್ನು ಪಡೆದುಕೊಂಡರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!