Yuvavahini

OCT 30, 2016 6.01 AM IST

ಯುವವಾಹಿನಿ(ರಿ) ಮೂಲ್ಕಿ ಘಟಕ

ತುಳುವೆರೆ ತುಡರ್ ಪರ್ಬ ಕಾರ್ಯಕ್ರಮ

ದಿನಾಂಕ 30-10-2016 ರಂದು ಮೂಲ್ಕಿ ಘಟಕದ ವತಿಯಿಂದ ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ 14 ನೇ ವರ್ಷದ ತುಳುವೆರೆ ತುಡರ್ ಪರ್ಬ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿ ಯವರು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಬಿಲ್ಲವ ಸಂಘ ಮುಲ್ಕಿ ಇದರ ಅಧ್ಯಕ್ಷ ಗೋಪಿನಾಥ ಪಡಂಗ, ಶ್ರೀ ಹೊಳೆ ಬದಿ ಮಸೀದಿ ಇದರ ಅಧ್ಯಕ್ಷ ಅಬ್ಬಾಸ್ ಹಾಜಿ, ರೋಟರಿ ವಿದ್ಯಾಸಂಸ್ಥೆ ಮೂಡಬಿದ್ರೆ ಇದರ ಪ್ರಾಂಶುಪಾಲರಾದ ವಿನ್ಸೆಂಟ್ ಡಿ’ ಕೋಸ್ತಾ ಭಾಗವಹಿಸಿದ್ದರು. ಅತಿಥಿ ಗಣ್ಯರೆಲ್ಲ ಸೇರಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಎಲ್ಲರಿಗೂ ದೀಪಾವಳಿ ಸಂದೇಶ ಹಾಗೂ ಶುಭಾಶಯ ತಿಳಿಸಿದರು. ವೇದಿಕೆಯಲ್ಲಿ ಅಧ್ಯಕ್ಷ ಚೇತನ್‌ಕುಮಾರ್, ಕಾರ್ಯದರ್ಶಿ ಸತೀಶ್ ಕಿಲ್ಪಾಡಿ ಕಾರ್ಯಕ್ರಮ ನಿರ್ದೇಶಕರುಗಳಾದ ಶ್ರೀ ಪ್ರವೀದ್ ಸಾಲ್ಯಾನ್, ಸವಿತಾ ಪ್ರಭಾಕರ್ ಉಪಸ್ಥಿತರಿದ್ದರು. ಸಮಾರಂಭದಲ್ಲಿ ನಾಟಕ ರಚನೆಕಾರ, ಕಲಾವಿದ ಕೆ.ಕೆ. ಟೈಲರ್‌ರವರಿಗೆ ’ಪರ್ಬದ ತಮ್ಮನ’ವನ್ನು ನೀಡಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಗೋವು ಪೂಜೆಯನ್ನು ಸಾಂಪ್ರದಾಯಿಕ ರೀತಿಯಲ್ಲಿ ನೆರವೇರಿಸಲಾಯಿತು. ಬಂದಿರುವ ಎಲ್ಲರಿಗೂ ಪರ್ಬದ ಗಟ್ಟಿ ಬಜಿಲ್ ಪಾನಕವನ್ನು ವಿತರಿಸಲಾಯಿತು. ಕಾರ್ಯದರ್ಶಿ ಸತೀಶ್ ಕಿಲ್ಪಾಡಿಯವರು ವಂದಿಸಿದರು. ನಂತರ ’ತುಳುನಾಡ ರತ್ನ’ ದಿನೇಶ್ ಅತ್ತಾವರ ಹಾಗೂ ’ತುಳುನಾಡ ವೈಭವ’ದ ಕಲಾವಿದರಿಂದ ತೆಲಿಕೆ-ನಲಿಕೆ ಕಾರ್ಯಕ್ರಮ ಜರಗಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!