ಪಡುಬಿದ್ರಿ : ಸಮಾಜದಲ್ಲಿ ಯುವಜನಾಂಗವು ದಾರಿ ತಪ್ಪುತ್ತಿರುವ ಸಂದರ್ಭದಲ್ಲಿ ಸಂಘಟನೆಗಳ ಮೂಲಕ ಜಾಗೃತಿ ಮೂಡಿಸುವುದು ಅನಿವಾರ್ಯ. ಹಲವಾರು ಸಮಸ್ಯೆಗಳ ನಿವಾರಣೆಗೆ ಸಂಘಟನೆಗಳ ಪಾತ್ರ ಮಹತ್ವದ್ದಾಗಿದೆ ಎಂದು ಬಿಲ್ಲವರ ಯೂನಿಯನ್, ಕುದ್ರೊಟ್ಟು, ಬ್ರಹ್ಮ ಬೈದರ್ಕಳ ಗರಡಿ ಎರ್ಮಾಳ್ ಬಡಾದ ಕಾರ್ಯದರ್ಶಿ ರಮೇಶ್ ಅಂಚನ್ ತಿಳಿಸಿದರು.
ಅವರು ಪಡುಬಿದ್ರಿ ಬಿಲ್ಲವ ಸಂಘದ ಸಭಾ ಭವನದಲ್ಲಿ ಜರಗಿದ ಯುವವಾಹಿನಿ ಪಡುಬಿದ್ರಿ ಘಟಕದ 2018 ನೇ ಸಾಲಿನ ಪದಗ್ರಹಣದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಜಯಂತ ನಡುಬೈಲು ಮಾತನಾಡಿ ಸಮಾಜದ ಸಾಮರಸ್ಯ ಕಾಪಾಡುವಲ್ಲಿ ಸಂಘಟನೆಗಳ ಪಾತ್ರ ಅಮೂಲ್ಯವಾದುದು. ಯುವವಾಹಿನಿ ಸಂಸ್ಥೆಯು ಯುವಜನರಿಗೆ ಪ್ರಾಶಸ್ತ್ಯ ನೀಡುತ್ತಿದೆ. ಆ ಮೂಲಕ ಸಮಾಜಕ್ಕೆ ತನ್ನಿಂದಾದ ಸಹಾಯ ನೀಡುತ್ತಿದೆ. ಇದರೊಂದಿಗೆ ದಕ್ಷಿಣಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನೂ ಮುಡಿಗೇರಿಸಿಕೊಂಡಿದೆ ಎಂದರು.
ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ವೈ. ಸುಧೀರ್ ಕುಮಾರ್ ಪಡುಬಿದ್ರಿ ಯುವವಾಹಿನಿ ಘಟಕದ ಕಾರ್ಯ ಶ್ಲಾಘನೀಯ.ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕಾರ್ಯಗಳನ್ನು ಮಾಡಲಿ ಎಂದು ಶುಭ ಹಾರೈಸಿದರು. ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿವೇತನವನ್ನು ನೀಡಲಾಯಿತು. ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದ ಶ್ರಾವ್ಯ ಗುರುರಾಜ್ ಮತ್ತು ಶ್ರಾವ್ಯ ರವಿರಾಜ್ ರನ್ನು ಸಮ್ಮಾನಿಸಲಾಯಿತು.
ನೂತನ ಪದಾಧಿಕಾರಿಗಳಿಗೆ ಕೇಂದ್ರ ಸಮಿತಿಯ ಉಪಾಧ್ಯಕ್ಷ ರಾದ ಜಯಂತ ನಡುಬೈಲು ಪ್ರತಿಜ್ಞಾ ವಿಧಿ ಬೋಧಿಸಿದರು.
ಘಟಕದ ಅಧ್ಯಕ್ಷರಾದ ಸಂತೋಷ್ ಎಸ್. ಪೂಜಾರಿ ನಿಯೋಜಿತ ಅಧ್ಯಕ್ಷರಾದ ದೀಪಕ್ ಕೆ. ಬೀರರಿಗೆ ಮತ್ತು ಕಾರ್ಯದರ್ಶಿ ನಿಶ್ಮಿತಾ ಪಿ.ಎಚ್ ನಿಯೋಜಿತ ಕಾರ್ಯದರ್ಶಿ ಶೈಲಜಾರವರಿಗೆ ಅಧಿಕಾರ ಹಸ್ತಾಂತರಿಸಿದರು. ಸಮಾರಂಭದಲ್ಲಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು ಹಾಗೂ ಪಡುಬಿದ್ರಿ ಘಟಕದ ಸಲಹೆಗಾರರಾದ ರಾಜೀವ ಪೂಜಾರಿ, ಕೇಂದ್ರ ಸಮಿತಿಯ ಪದಾಧಿಕಾರಿಗಳು, ವಿವಿಧ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸಮಾರಂಭದ ಅಧ್ಯಕ್ಷತೆಯನ್ನು ಯುವವಾಹಿನಿ ಪಡುಬಿದ್ರಿ ಘಟಕದ ಸಂತೋಷ್ ಎಸ್. ಪೂಜಾರಿ ವಹಿಸಿದ್ದರು. ಸಮಾರಂಭದಲ್ಲಿ ಪರಿಸರ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಯುಪಿಸಿಎಲ್ ಅದಾನಿ ಸಂಸ್ಥೆ ಕೊಡಮಾಡಿದ ಸಸಿಗಳನ್ನು ವಿತರಿಸಲಾಯಿತು.
ಘಟಕದ ಮಾಜಿ ಅಧ್ಯಕ್ಷರಾದ ಸುಜಿತ್ ಕುಮಾರ್ ಪ್ರಸ್ತಾವಿಸಿ, ಕಾರ್ಯದರ್ಶಿ ನಿಶ್ಮಿತಾ ಪಿ.ಎಚ್ ವರದಿ ವಾಚಿಸಿ, ನಿಯೋಜಿತ ಕಾರ್ಯದರ್ಶಿ ಶೈಲಜಾ ವಂದಿಸಿದರು.ಕಾರ್ಯಕ್ರಮವನ್ನು ಯಶೋಧ, ಸುಶ್ಮಾ ಮತ್ತು ಸುದರ್ಶನ್ ನಿರೂಪಿಸಿದರು.
Congrats