ಉಡುಪಿ : ಸಾಮೂಹಿಕ ಪ್ರಯತ್ನದಿಂದ ಮಾತ್ರ ಮಾದರಿ ಸಂಘಟನೆ ನಿರ್ಮಾಣ ಸಾಧ್ಯ, ಹಾಗೂ ಯುವವಾಹಿನಿ ಎಂಬ ದೇವಾಲಯದಲ್ಲಿ ಅಧ್ಯಕ್ಷರು ಅರ್ಚಕರಾಗಿ ಸದಸ್ಯರು ಭಕ್ತಾದಿಗಳೆಂಬ ಪರಿಕಲ್ಪನೆಯಲ್ಲಿ ಯುವವಾಹಿನಿ ಸಾಗುತ್ತಿರುವುದು ಶ್ಲಾಘನೀಯ ಎಂದು ಮೆಸ್ಕಾಮ್ ಕಾರ್ಯಪಾಲಕ ಇಂಜಿನಿಯರ್ ಜಯಾನಂದ ಎಮ್ ತಿಳಿಸಿದರು
ಅವರು ದಿನಾಂಕ 10.06.2018 ರಂದು ಉದ್ಯಾವರ ಬಲಾಯಿಪಾದೆ ಯುವವಾಹಿನಿ ಸಭಾಭವನದಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ 2018-19 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ನಿಕಟಪೂರ್ವ ಅಧ್ಯಕ್ಷ ಗಣೇಶ್ ಕುಮಾರ್ ನೂತನ ಪದಾಧಿಕಾರಿಗಳನ್ನು ಸಭೆಗೆ ಪರಿಚಯಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ನೂತನ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ ಅಶೋಕ್ ಕೋಟ್ಯಾನ್ ಮಾತನಾಡಿ ಎಲ್ಲರ ಸಲಹೆ, ಸೂಚನೆ ಮಾರ್ಗದರ್ಶನದ ಮೂಲಕ ಯುವವಾಹಿನಿಯನ್ನು ಯಶಸ್ವಿಯಾಗಿ ಮುನ್ನಡೆಸುವುದಾಗಿ ತಿಳಿಸಿದರು.
ಕಟಪಾಡಿ ರೋಟರಿ ಕ್ಲಬ್ ಅಧ್ಯಕ್ಷ ಶ್ರೀಕರ ಅಂಚನ್ , ಸಲಹೆಗಾರರಾದ ಶಂಕರ ಪೂಜಾರಿ, ವಿಜಯಕುಮಾರ್ ಕುಬೆವೂರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷ ರಮೇಶ್ ಕುಮಾರ್ ಸ್ವಾಗತಿಸಿದರು, ಕಾರ್ಯದರ್ಶಿ ಭಾರತಿ ಭಾಸ್ಕರ್ ವಾರ್ಷಿಕ ವರದಿ ಮಂಡಿಸಿದರು. ನೂತನ ಕಾರ್ಯದರ್ಶಿ ಪ್ರವೀಣ್ ಪೂಜಾರಿ ವಂದಿಸಿದರು, ಅಮಿತಾಂಜಲಿ ಕಿರಣ್ ಕಾರ್ಯಕ್ರಮ ನಿರೂಪಿಸಿದರು