ಪುತ್ತೂರು : ಯುವವಾಹಿನಿ (ರಿ) ಪುತ್ತೂರು ಘಟಕದ 2017-18 ನೇ ಸಾಲಿನ ವಾರ್ಷಿಕ ಮಹಾಸಭೆಯು ಪುತ್ತೂರು ಬಿಲ್ಲವ ಸಂಘದ ಸಭಾಂಗಣದಲ್ಲಿ ದಿನಾಂಕ 17.06.2018 ನೇ ಆದಿತ್ಯವಾರ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಪುತ್ತೂರು ಘಟಕದ ಅಧ್ಯಕ್ಷ ಉದಯ ಕುಮಾರ್ ಕೋಲಾಡಿ ಮಾತನಾಡಿ ಕಳೆದ ಒಂದು ವರ್ಷದಲ್ಲಿ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಕಾರ್ಯದರ್ಶಿ ಸತ್ಯಜಿತ್ ಅಮ್ಮುಂಜೆ ವಾರ್ಷಿಕ ವರದಿ ಹಾಗೂ ಕೋಶಾಧಿಕಾರಿ ವಾರ್ಷಿಕ ಲೆಕ್ಕಪತ್ರ ಮಂಡಿಸಿ ಅನುಮೋದನೆ ಪಡೆಯಲಾಯಿತು.
ಚುನಾವಣಾ ಅಧಿಕಾರಿ ಹಾಗೂ ನಿಕಟಪೂರ್ವ ಅಧ್ಯಕ್ಷ ಜಯಂತ ಕೆಂಗುಡೇಲು ನೂತನ ಪದಾಧಿಕಾರಿಗಳನ್ನು ಸಭೆಗೆ ಪರಿಚಯಿಸಿದರು. ಪುತ್ತೂರು ಘಟಕದ ಸಲಹೆಗಾರ ಹಾಗೂ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಡಾ.ಸದಾನಂದ ಕುಂದರ್ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಭೋಧಿಸಿದರು. ನಿರ್ಗಮನ ಅಧ್ಯಕ್ಷ ಉದಯ ಕೋಲಾಡಿ ಕಡತ ನೀಡುವ ಮೂಲಕ ನೂತನ ಅಧ್ಯಕ್ಷ ಹರೀಶ್ ಶಾಂತಿ ಯವರಿಗೆ ಅಧಿಕಾರ ಹಸ್ತಾಂತರಿಸಿದರು. ನಿರ್ಗಮನ ಕಾರ್ಯದರ್ಶಿ ಸತ್ಯಜಿತ್ ಅಮ್ಮಂಜ ನೂತನ ಕಾರ್ಯದರ್ಶಿ ಅನೂಪ್ ಇವರಿಗೆ ಅಧಿಕಾರ ಹಸ್ತಾಂತರ ಮಾಡಿದರು
ಎಲ್ಲರ ಸಲಹೆ, ಸೂಚನೆ ಮಾರ್ಗದರ್ಶನ ಪಡೆದು ಪುತ್ತೂರು ಘಟಕವನ್ನು ಯಶಸ್ವಿಯಾಗಿ ಮುನ್ನಡೆಸುವುದಾಗಿ ನೂತನ ಅಧ್ಯಕ್ಷರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಹರೀಶ್ ಶಾಂತಿ ತಿಳಿಸಿದರು. ನೂತನ ಕಾರ್ಯದರ್ಶಿ ಅನೂಪ್ ಧನ್ಯವಾದ ನೀಡಿದರು.
All the best to new team .