Yuvavahini

JUL 08, 2018 5.13 PM IST

ಯುವ ವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ಕ್ಷೇತ್ರ ದರ್ಶನ

ಕೂಳೂರು : ಯುವ ವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ಕ್ಷೇತ್ರ ದರ್ಶನ ದಿನಾಂಕ 08/07/2018 ರಂದು ಒಂದು ದಿನದ *ಕ್ಷೇತ್ರ ದರ್ಶನ* ಪ್ರವಾಸವನ್ನು ಏರ್ಪಡಿಸಲಾಗಿದ್ದು 120 ಮಂದಿ ಸದಸ್ಯರನ್ನು ಒಳಗೊಂಡ ತಂಡವು ಯುವವಾಹಿನಿ(ರಿ) ಕೂಳೂರು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಇವರು ಇದಕ್ಕೆ ಚಾಲನೆ ನೀಡಿದರು…
6 ಗಂಟೆಗೆ ಸರಿಯಾಗಿ ಕೂಳೂರಿನಿoದ ಹೊರಟು 7.15ಕ್ಕೆ ಪಾಜಕ ಕ್ಷೇತ್ರವನ್ನು ತಲುಪಿ ದೇವರ ದರ್ಶನದ ನಂತರ ಅಲ್ಲಿಂದ ಹೊರಟು 8.45 ಕ್ಕೆ ಆನೆಗುಡ್ಡೆ ಕುಂಭಾಶಿ ದೇವಸ್ಥಾನಕ್ಕೆ ತಲುಪಿದೆವು .ಅಲ್ಲಿ ದೇವರ ದರ್ಶನದ ನಂತರ ಚಹಾ ತಿಂಡಿಯ ವ್ಯವಸ್ಥೆ ಮಾಡಲಾಯಿತು. ಎಲ್ಲಾ ಸದಸ್ಯರ ಚಹಾ ವಿರಾಮದ ನಂತರ ಅಲ್ಲಿಂದ ಹೊರಟು 10.40 ಕ್ಕೆ ಕೊಲ್ಲೂರು ಮೂಕಾಂಬಿಕಾ ಸನ್ನಿಧಾನಕ್ಕೆ ತಲುಪಿದೆವು . ದೇವಿಯ ದರ್ಶನದ ನಂತರ ಅಲ್ಲಿಂದ ಹೊರಟು 12.30ಕ್ಕೆ ಸರಿಯಾಗಿ ಕಮಲಶಿಲೆಯ ದೇವರ ಸನ್ನಿಧಾನಕ್ಕೆ ತಲುಪಿದೆವು. ಬಸ್ಸಿನ ಎಲ್ಲಾ ಸದಸ್ಯರ ದೇಣಿಗೆ ಒಟ್ಟುಗೂಡಿಸಿ 2500 ರೂಪಾಯಿ ಅನ್ನದಾನದ ಸೇವೆಯನ್ನು ಸನ್ನಿದಾನದಲ್ಲಿ ಸಲ್ಲಿಸಲಾಯಿತು . ಅಲ್ಲಿಯ ದೇವರ ಅನ್ನಪ್ರಸಾದ ನಂತರ ಸ್ವಲ್ಪ ವಿಶ್ರಾಂತಿ ಪಡೆದು ಅಲ್ಲಿಂದ ಹೊರಟು 3 ಗಂಟೆಗೆ ಸರಿಯಾಗಿ ಶಂಕರನಾರಾಯಣ ದೇವರ ಸನ್ನಿಧಾನಕ್ಕೆ ತಲುಪಿ ಅಲ್ಲಿ 1ಗಂಟೆಯ ಸಮಯದಲ್ಲಿ ಎಲ್ಲಾ ಸದಸ್ಯರ ಪರಿಚಯವನ್ನು ಮಾಡಲಾಯಿತು ಹಾಗೂ ಅಲ್ಲಿ ಎರಡು ತಂಡ ರಚನೆ ಮಾಡಿ ಕಿರು ನಾಟಕ ನಡೆಸಲಾಯಿತು ತದನಂತರ 4 ಗಂಟೆಗೆ ಸರಿಯಾಗಿ ದೇವರ ದರ್ಶನ ಮಾಡಿ ಅಲ್ಲಿಂದ ಹೊರಟು 5.30ಕ್ಕೆ ಮಂದಾರ್ತಿ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ತಲುಪಿದೆವು.ಇನ್ನೊಮ್ಮೆ ಎಲ್ಲಾ ಸದಸ್ಯರ ದೇಣಿಗೆ ಪಡೆದು 2500 ಸಾವಿರ ಹಣವನ್ನು ದೇಣಿಗೆ ರೂಪದಲ್ಲಿ ಅನ್ನದಾನಕ್ಕೆ ನೀಡಲಾಯಿತು .ಅಲ್ಲಿಂದ ದೇವರ ದರ್ಶನದ ನಂತರ ಏಳುವರೆಗೆ ಸರಿಯಾಗಿ ಅನ್ನ ಪ್ರಸಾದವನ್ನು ಸ್ವೀಕರಿಸಿ ಅಲ್ಲಿಂದ 8 ಗಂಟೆಗೆ ಸರಿಯಾಗಿ ಮಂಗಳೂರಿಗೆ ಹಿಂತಿರುಗಿ 9.15 ಕ್ಕೆ ಕೂಳೂರಿಗೆ ತಲುಪಿದೆವು.ಈ ಕಾರ್ಯಕ್ರಮದ ಸಂಚಾಲಕತ್ವವನ್ನು ವಿನೀತ್ ಕುಮಾರ್ ಇವರು ವಹಿಸಿದ್ದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!