ಯುವವಾಹಿನಿ ಕಾಪು ಘಟಕದ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

ತುಳುನಾಡ ಸಂಪ್ರದಾಯ, ಪದ್ಧತಿ, ಆಚರಣೆಯನ್ನು ಮುಂದಿನ ಪೀಳಿಗೆಗೂ ಉಳಿಸಿ ಕೊಡೋಣ : ಸುಧಾಕರ್ ಅಮೀನ್

ಕಾಪು, ಜು. 29 :ತುಳುವರ ಆಚರಣೆ, ಸಂಪ್ರದಾಯ ಮತ್ತು ಪದ್ಧತಿ ಗಳು ಸರ್ವರಿಗೂ ಅನುಕರಣೀವಾಗಿದೆ. ಅದನ್ನು ಮತ್ತಷ್ಟು ಗಟ್ಟಿಗೊಳಿಸಿ ಮುಂದಿನ ಪೀಳಿಗೆಗೂ ಉಳಿಸಿಕೊಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಧಾರ್ಮಿಕ ಚಿಂತಕ ಸುಧಾಕರ ಡಿ. ಅಮೀನ್ ಹೇಳಿದರು.

ಯುವವಾಹಿನಿ ಕಾಪು ಘಟಕದ ವತಿಯಿಂದ ರವಿವಾರ ಕಾಪು ಬಿಲ್ಲವರ ಸಹಾಯಕ ಸಂಘದಲ್ಲಿ ಹಮ್ಮಿಕೊಳ್ಳಲಾಗಿದ್ದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಆಟಿ ತಿಂಗಳನ್ನು ಅನಿಷ್ಟದ ತಿಂಗಳು ಎಂಬ ಅರ್ಥವನ್ನು ಕಲ್ಪಿಸಲಾಗುತ್ತಿದೆ. ಆದರೆ ಇದು ಅನಿಷ್ಡದ ತಿಂಗಳು ಅಲ್ಲವೇ ಅಲ್ಲ. ಆಟಿ ತಿಂಗಳಲ್ಲೇ ನಾವು ಅತ್ಯಂತ ಪೂಜನೀಯವಾಗಿ ಆಚರಿಸುವ ನಾಗರಪಂಚಮಿ ನಡೆಯಲಿದ್ದು, ಅದರೊಂದಿಗೆ ಹಬ್ಬಗಳಿಗೆ ಚಾಲನೆ ಕೊಡಲಾಗುತ್ತದೆ ಎಂದರು.

ಕಾಪು ಬಿಲ್ಲವರ ಸಹಾಯಕ ಸಂಘದ ಗೌರವಾಧ್ಯಕ್ಷ ಪ್ರಭಾಕರ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉಡುಪಿ ಜಿಲ್ಲಾ ಬಿಲ್ಲವರ ಪರಿಷತ್ ನ ಮಹಿಳಾ ಅಧ್ಯಕ್ಷೆ ಆಶಾ ಅಂಚನ್ ಸಾಂಕೇತಿಕವಾಗಿ ಚೆನ್ನಮಣೆ ಆಡುವ ಮೂಲಕ ಕಾರ್ಯಕ್ರಮ ಕ್ಕೆ ಚಾಲನೆ ನೀಡಿದರು.

ಹೆಜಮಾಡಿ ಬಿಲ್ಲವರ ಸಂಘದ ಅಧ್ಯಕ್ಷ ಲೋಕೇಶ್ ಅವರನ್ನು ಸಮ್ಮಾನಿಸಿ, ಗೌರವಿಸಲಾಯಿತು. ಯುವವಾಹಿನಿ ಸದಸ್ಯರು ಮನೆಯಲ್ಲೇ ತಯಾರಿಸಿ ತಂದ ತಿಂಡಿ – ತಿನಿಸುಗಳೊಂದಿಗೆ ಊಟೋಪಚಾರ ನಡೆಸಲಾಯಿತು.

ಯುವವಾಹಿನಿ ಕಾಪು ಘಟಕದ ಅಧ್ಯಕ್ಷ ದೀಪಕ್ ಕುಮಾರ್ ಎರ್ಮಾಳ್ ಅಧ್ಯಕ್ಷತೆ ವಹಿಸಿದ್ದರು. ಕಾಪು ಬಿಲ್ಲವರ ಸಂಘದ ಅಧ್ಯಕ್ಷ ವಿಕ್ರಂ ಕಾಪು, ಮಾಜಿ ಅಧ್ಯಕ್ಷ ಮಾಧವ ಆರ್. ಪಾಲನ್ ಅತಿಥಿಗಳಾಗಿ ಭಾಗವಹಿಸಿದ್ದರು.

ಐತಪ್ಪ ಕೋಟ್ಯಾನ್, ಸೋಮನಾಥ ಸಾಲ್ಯಾನ್, ಸುಕೇಶ್ ಎರ್ಮಾಳ್, ಶಶಿಧರ್ ಸುವರ್ಣ, ಯೋಗೀಶ್ ಕೋಟ್ಯಾನ್ ಉಪಸ್ಥಿತರಿದ್ದರು.

ಯುವವಾಹಿನಿ ಅಧ್ಯಕ್ಷ ದೀಪಕ್ ಕುಮಾರ್ ಎರ್ಮಾಳ್ ಸ್ವಾಗತಿಸಿದರು. ಪದಾಧಿಕಾರಿಗಳಾದ ನಾಗೇಶ್ ಸುವರ್ಣ ವಂದಿಸಿದರು‌. ಸುಧಾಕರ ಸಾಲ್ಯಾನ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!