Yuvavahini

JUN 27, 2018 2.29 AM IST

ಯುವವಾಹಿನಿ (ರಿ) ಕೂಳೂರು ಘಟಕದ ಆಶ್ರಯದಲ್ಲಿ ಜರಗಿದ ಯೋಗದ ಬಗ್ಗೆ ಮಾಹಿತಿ ಕಾರ್ಯಾಗಾರ

ಯೋಗ ವಿಶ್ವದಲ್ಲಿ ಮಹತ್ತರ ಪಾತ್ರ ವಹಿಸಿದೆ : ರವೀಶ್ ಕುಮಾರ್

 ಕೂಳೂರು : ಹಿಂದಿನ ಕಾಲದಲ್ಲಿ ನಮ್ಮ ಪೂರ್ವಜರ ದಿನ ನಿತ್ಯದ ಕೆಲಸವೇ ಒಂದು ಯೋಗ ಆಗಿತ್ತು.ಬೆಳಿಗ್ಗೆ ಬೇಗ ಏಳುವುದು ಯೋಗ.ಶ್ರೀ ಕೃಷ್ಣ ಪರಮಾತ್ಮನು ಭಗವದ್ಗೀತೆಯಲ್ಲಿ ಈ ರೀತಿ ಹೇಳಿದ್ದಾರೆ – ನಮ್ಮ ಪಂಚೇಂದ್ರಿಯಗಳು 5 ಕುದುರೆಗಳು ಇದ್ದಂತೆ ಅವುಗಳನ್ನು ಕಡಿವಾಣ ಹಾಕಿ ಹತೋಟಿಯಲ್ಲಿ ಇಟ್ಟು ಕೊಳ್ಳುವುದೇ ಯೋಗ ,ಮುಖ್ಯವಾಗಿ ನಾವು ತಿನ್ನುವ ಆಹಾರದಲ್ಲಿ ಸಮತೋಲನ ಇರಬೇಕು. ಆಗ ಆರೋಗ್ಯವಂತರಾಗಿ ಇರುತ್ತೇವೆ ಎಂದರು . ಮನಸ್ಸನ್ನು ಹತೋಟಿಯಲ್ಲಿ ಇಟ್ಟು ಕೊಳ್ಳುವುದು ಮುಖ್ಯ .ಯೋಗವೇ ಆರೋಗ್ಯ ಆದ್ದರಿಂದ ಎಲ್ಲರೂ ಯೋಗ ಮಾಡಿ ಆರೋಗ್ಯವಂತರಾಗಿ ಇರೋಣ ಎಂದರು ಯೋಗ ವಿಶ್ವದಲ್ಲಿ ಮಹತ್ತರ ಪಾತ್ರ ವಹಿಸಿದೆ.. ಎಂದು ಯುವವಾಹಿನಿ (ರಿ) ಮಂಗಳೂರು ಘಟಕದ ನಿಕಟಪೂರ್ವ ಅಧ್ಯಕ್ಷರಾದ ಹಾಗೂ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ(ರಿ) ಕರ್ಣಾಟಕ ಮಂಗಳೂರು ವಲಯ ಇದರ ಸ್ಥಾಪಕರಾದ ರವೀಶ್ ಕುಮಾರ್ ತಿಳಿಸಿದರು
ಅವರು ದಿನಾಂಕ 27.06.2018 ರಂದು ಯುವವಾಹಿನಿ (ರಿ) ಕೂಳೂರು ಘಟಕದ ಆಶ್ರಯದಲ್ಲಿ ಜರಗಿದ ಯೋಗದ ಬಗ್ಗೆ ಮಾಹಿತಿ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು . ಯುವವಾಹಿನಿ(ರಿ) ಕೂಳೂರು ಘಟಕದ ಅಧ್ಯಕ್ಷ ರಾದ ಲೋಕೇಶ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು . ಸಲಹೆಗಾರರಾದ ನೇಮಿರಾಜ್ ,ಉಪಾಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ ,ನಿಕಟಪೂರ್ವ ಅಧ್ಯಕ್ಷರಾದ ಪುಷ್ಪ ರಾಜ್ ಕುಮಾರ್ ,ಗೋಪಾಲಕೃಷ್ಣ ಭಜನಾ ಮಂಡಳಿಯ ಅಧ್ಯಕ್ಷರಾದ ಗಿರಿಧರ್ ಸನಿಲ್ ,ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಅಧ್ಯಕ್ಷರಾದ ಜಯಾನಂದ ಅಮೀನ್, ಸ್ಥಾಪಕ ಅಧ್ಯಕ್ಷರಾದ ಸುಜಿತ್ ರಾಜ್,ಮಂಗಳೂರು ಮಹಿಳಾ ಘಟಕದ ನಿಕಟ ಪೂರ್ವ ಅಧ್ಯಕ್ಷರಾದ ಸುಪ್ರೀತಾ ಪೂಜಾರಿ ಇವರು ಉಪಸ್ಥಿತರಿದ್ದರು .ಅಧ್ಯಕ್ಷರು ಎಲ್ಲರನ್ನು ಸ್ವಾಗತಿಸಿದರು . ವಿನೀತ್ ಕುಮಾರ್ ಇವರು ಸಂಪನ್ಮೂಲ ವ್ಯಕ್ತಿಯಾದ ರವೀಶ್ ಕುಮಾರ್ ಇವರ ಪರಿಚಯವನ್ನು ಸಭೆಯ ಮುಂದಿಟ್ಟರು
ಮಾಹಿತಿ ಕಾರ್ಯಾಗಾರದ ನಂತರ ಮಂಗಳೂರು ವಿಶ್ವವಿದ್ಯಾನಿಲಯದ ಪಿ.ಜಿ.ಡಿಪ್ಲೋಮಾ ಇನ್ ಯೋಗಿಕ್ ಸೈನ್ಸ್ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಯುವ ವಾಹಿನಿ(ರಿ) ಮಹಿಳಾ ಘಟಕದ ಉಪಾಧ್ಯಕ್ಷರಾದ ಉಮಾ ಶ್ರೀಕಾಂತ್ ಇವರನ್ನು ಘಟಕದ ವತಿಯಿಂದ ಅಭಿನಂದಿಸಲಾಯಿತು . ಬಳಿಕ ಉಮಾ ಶ್ರೀಕಾಂತ್ ಇವರು ಮಾತನಾಡಿ ತಮ್ಮನ್ನು ಅಭಿನಂದಿಸಿದ ಯುವ ವಾಹಿನಿ ಕೂಳೂರು ಘಟಕಕ್ಕೆ ಧನ್ಯವಾದ ಸಲ್ಲಿಸಿದರು .ಕಾರ್ಯದರ್ಶಿ ಪವಿತ್ರ ಅಂಚನ್ ಧನ್ಯವಾದ ನೀಡಿದರು .

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!