ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು.
ಈ ಸಂದರ್ಭದಲ್ಲಿ ಹಲವು ವಿಭಾಗದಲ್ಲಿ ಸಾಧನೆ ಮಾಡಿದ ಸಾಧಕರು ಹಾಗೂ ಸಂಘ, ಸಂಸ್ಥೆಗಳಿಗೆ ಗೌರವ ಅಭಿನಂದನೆ, ಯುವವಾಹಿನಿ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ, ಸಾಧನಾ ಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಠ ಪ್ರಶಸ್ತಿ ಪ್ರದಾನ ಮಾಡಲಾಯಿತು.
49 ಕ್ಕೂ ಅಧಿಕ ಬಾರಿ ರಕ್ತದಾನ ಮಾಡಿ ನೂರಾರು ಬಾಳಿಗೆ ಬೆಳಕಾದ ಬಿ.ಟಿ.ಮಹೇಶ್ಚಂದ್ರ, ಡಿಪ್ಲೊಮಾ ಇನ್ ಯೋಗ ವಿಜ್ಞಾನದಲ್ಲಿ ಪ್ರಥಮ ಸ್ಥಾನ ಪಡೆದ ಉಮಾಶ್ರೀಕಾಂತ್, ಭಾರತ ಸರಕಾರ ನಡೆಸಿದ ಭಾಷಣ ಸ್ಪರ್ಧೆಯಲ್ಲಿ 32 ಸಾವಿರ ಸ್ಪರ್ಧಿಗಳನ್ನು ಹಿಂದಿಕ್ಕಿ ರಾಷ್ಟ್ರ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಶ್ರೇಯಸ್ ಇವರಿಗೆ ಯುವವಾಹಿನಿ ಸಾಧಕ ಪುರಸ್ಕಾರ ಪ್ರದಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ಸಚಿವರಾದ ಡಾ.ಜಯಮಾಲ , ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ್ ಪೂಜಾರಿ, ಮಂಗಳೂರು ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಡಿ.ಸುವರ್ಣ, ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ ಅಧ್ಯಕ್ಷ ಎಚ್.ಎಸ್.ಸಾಯಿರಾಮ್, ಉದ್ಯಮಿ ದಿವಾಕರ್, ಖ್ಯಾತ ರಂಗಭೂಮಿ, ಚಲನಚಿತ್ರ ನಟ ಅರವಿಂದ ಬೋಳಾರ್, ಯುವವಾಹಿನಿ(ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ, ಪ್ರಧಾನ ಕಾರ್ಯದರ್ಶಿ ರಾಜೇಶ್ ಸುವರ್ಣ, ಸಂಚಾಲಕ ನವೀನ್ ಚಂದ್ರ , ನಿರ್ದೇಶಕ ಹರೀಶ್ ಕೆ.ಪೂಜಾರಿ ಹಾಗೂ ಯುವವಾಹಿನಿಯ 31 ಘಟಕಗಳ ಅಧ್ಯಕ್ಷರುಗಳು ಉಪಸ್ಥಿತರಿದ್ದರು.