ಮಂಗಳೂರು : ಲೇಖನಗಳು, ಮಾಹಿತಿಗಳ ಸಂಗ್ರಹ, ಆಶಯ, ಅವಲೋಕನ, ಸಾಹಿತ್ಯ, ಸಾಂಸ್ಕೃತಿಕ, ಕಥೆ, ಕವನ ಮುಂತಾದ ವೈವಿಧ್ಯಮಯ ಬರಹಗಳನ್ನು ಒಳಗೊಂಡ ಯುವವಾಹಿನಿಯ ಮುಖವಾಣಿ 2018 ರ ಸಿಂಚನ ವಾರ್ಷಿಕ ವಿಶೇಷಾಂಕವನ್ನು ಕನ್ನಡ ಮತ್ತು ಸಂಸ್ಕೃತಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ಸಚಿವರಾದ ಡಾ.ಜಯಮಾಲ ಬಿಡುಗಡೆಗೊಳಿಸಿದರು.
ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಜರುಗಿದ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶದಲ್ಲಿ ಸಿಂಚನ ವಾರ್ಷಿಕ ವಿಶೇಷಾಂಕವನ್ನು ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭದಲ್ಲಿ ಸಿಂಚನ ವಾರ್ಷಿಕ ವಿಶೇಷಾಂಕದ ಸಂಪಾದಕಿ ಶುಭಾ ರಾಜೇಂದ್ರ, ಕಾರ್ಯನಿರ್ವಾಹಕ ಸಂಪಾದಕ ದಿನಕರ್ ಡಿ.ಬಂಗೇರ , ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ್ ಪೂಜಾರಿ, ಮಂಗಳೂರು ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಡಿ.ಸುವರ್ಣ, ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ ಅಧ್ಯಕ್ಷ ಎಚ್.ಎಸ್.ಸಾಯಿರಾಮ್, ಉದ್ಯಮಿ ದಿವಾಕರ್, ಖ್ಯಾತ ರಂಗಭೂಮಿ, ಚಲನಚಿತ್ರ ನಟ ಅರವಿಂದ ಬೋಳಾರ್, ಯುವವಾಹಿನಿ(ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ, ಪ್ರಧಾನ ಕಾರ್ಯದರ್ಶಿ ರಾಜೇಶ್ ಸುವರ್ಣ, ಸಂಚಾಲಕ ನವೀನ್ ಚಂದ್ರ ಡಿ.ಸುವರ್ಣ, ನಿರ್ದೇಶಕ ಹರೀಶ್ ಕೆ.ಪೂಜಾರಿ ಹಾಗೂ ಯುವವಾಹಿನಿಯ 31 ಘಟಕಗಳ ಅಧ್ಯಕ್ಷರುಗಳು ಉಪಸ್ಥಿತರಿದ್ದರು.