Yuvavahini

AUG 27, 2018 2.55 PM IST

ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಗುರುಜಯಂತಿ

ನಾರಾಯಣ ಗುರುಗಳ ಚಿಂತನೆ ಹಾಗೂ ತತ್ವಾದರ್ಶ ಸಾರ್ವಕಲಿಕ ಸತ್ಯ : ಸಂದೀಪ್

ಬಂಟ್ವಾಳ: ಶೋಷಿತ ಕುಟುಂಬದಲ್ಲಿ ಹುಟ್ಟಿ ತನ್ನ ಪರಿಶ್ರಮದಿಂದಲೇ ಸಂತನಾಗಿ ಬೆಳೆದು ಸಮಾಜzಲ್ಲಿ ಬೇರೂರಿದ್ದ ಎಲ್ಲಾ ಅನಿಷ್ಠ ಪದ್ದತಿಗಳ ವಿರುದ್ದ ಅಹಿಂಸಾ ಮಾರ್ಗದಲ್ಲೇ ಹೋರಾಡಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಚಿಂತನೆ ಹಾಗೂ ತತ್ವಾದರ್ಶ ಸಾರ್ವಕಲಿಕ ಸತ್ಯ ಎಂದು ಪತ್ರಕರ್ತ ಸಂದೀಪ್ ಸಾಲ್ಯಾನ್ ಹೇಳಿದರು.
ಅವರು ದಿನಾಂಕ 27.08.2018 ರಂದು ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಬಿ.ಸಿ.ರೋಡಿನ ಸಮಾಜ ಕಲ್ಯಾಣ ಇಲಾಖಾ ವಸತಿ ಶಾಲೆಯಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣಗುರುವರ್ಯರ 164 ನೇ ಜನ್ಮದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
165 ವರ್ಷಗಳ ಹಿಂದೆ ಮೇಲ್ವರ್ಗದಿಂದ ಶೋಷಣೆಗೊಳಗಾಗಿ ಅಸಮಾನತೆ ತಾಂಡವವಾಡುತ್ತಿದ್ದ ಕಾಲದಲ್ಲಿ ಬ್ರಹ್ಮಶ್ರೀ ನಾರಯಣ ಗುರುಗಳು ಹುಟ್ಟಿ ಸಮಾಜಕ್ಕೆ ಜ್ಞಾನದ ಜ್ಯೋತಿ ನೀಡಿದವರು. ಬರೀ ಸಂತನಾಗಿ ಉಳಿಯದೆ ದೇಶ ಸೇವೆಯೇ ಈಶ ಸೇವೆÉನ್ನುವ ಕಲ್ಪನೆಯನ್ನಿಟ್ಟುಕೊಂಡು ತನ್ನ ಜೀವನವನ್ನು ಶೋಷಿತರ ಉದ್ದಾರಕ್ಕಾಗಿಯೇ ಮೀಸಲಿಟ್ಟವರು. ದೇವಸ್ಥಾನ ನಿರ್ಮಾಣ ಮಾಡಿ ಜನರ ಬಳಿಗೆ ದೇವರನ್ನು ಕರೆತಂದವರು, ಕೆಳವರ್ಗದ ಜನರಲ್ಲಿದ್ದ ಮೌಢ್ಯಗಳನ್ನು ದೂರ ಮಾಡಿ ಜ್ಞಾನದ ಬೆಳಕನ್ನು ನೀಡಿದವರು. ಆದರೆ ಬೇರೆ ಬೇರೆ ಕಾರಣಗಳಿಗೆ ಜಾತಿ, ಧರ್ಮ, ದೇವರ ಹೆಸರಿನಲ್ಲಿ ಇಂದಿಗೂ ಅಸಮಾನತೆಗಳು ಕಾಣುತ್ತಿದ್ದು ಬ್ರಹ್ಮಶ್ರೀ ನಾರಾಯಣ ಗುರುಗಳು ಅಂದು ಭೋದಿಸಿದ ಸಂದೇಶ ಈ ಕಾಲಘಟಕ್ಕೂ ಪ್ರಸ್ತುತ ಎಂದರು.

ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ಶಿವಾನಂದ ಎಮ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.
ಯುವವಾಹಿನಿ ಬಂಟ್ವಾಳ ಘಟಕದ ಸಲಹೆಗಾರರು ಬಿ.ತಮ್ಮಯ, ಅಣ್ಣು ಪೂಜಾರಿ, ನಾರಾಯಣಗುರು ತತ್ವಪ್ರಚಾರ ಅನುಷ್ಟಾನ ನಿರ್ದೇಶಕ ದಯಾನಂದ ತುಂಬೆ, ಸಮಾಜ ಕಲ್ಯಾಣ ಇಲಾಖಾ ವಸತಿ ಶಾಲಾ ಶಿಕ್ಕಕಿಯರಾದ ಸವಿತಾ, ಚೇತನಾ, ಯುವವಾಹಿನಿಯ ಮಾಜಿ ಅಧ್ಯಕ್ಷರಾದ ರಾಮಚಂದ್ರ ಸುವರ್ಣ, ಕಾರ್ಯದರ್ಶಿ ಕಿರ ಣ್ ರಾಜ್, ಕೋಶಾಧಿಕಾರಿ ಗಣೇಶ್ ಮಣಿ , ಲೋಕೇಶ್ ಸುವರ್ಣ ಅಲೆತ್ತೂರು, ಗಣೇಶ್ ಪೂಂಜರೆಕೋಡಿ, ಲೋಕೇಶ್ ಪಿ.ಜೆ, ಪ್ರವೀಣ್ ತುಂಬೆ, ಮಲ್ಲಿಕಾ ಪಚ್ಚಿನಡ್ಕ, ಭವಾನಿ ಅಮೀನ್ , ನಾರಾಯಣ ಅಮೀನ್ , ಶ್ರೀಧರ ಪೂಜಾರಿ, ಯೋಗೀಶ್ ಕಲ್ಲಡ್ಕ, ರಚನಾ, ನಾಗೇಶ್ ಏಲಾಬೆ, ಹರೀಶ್ ಕುದನೆ, ನಾಗೇಶ್ ನೈಬೇಲು, ಸುನಿಲ್ ಮರ್ದೋಳಿ , ಮತ್ತಿತರರು ಉಪಸ್ಥಿತರಿದ್ದರು.

ಮಾಜಿ ಅಧ್ಯಕ್ಷ ಪ್ರೇಮನಾಥ್ ಕೆ. ಸ್ವಾಗತಿಸಿದರು, ಉಪಾಧ್ಯಕ್ಷ ನಾಗೇಶ್ ಎಮ್ ವಂದಿಸಿದರು, ರಾಜೇಶ್ ಸುವರ್ಣ ಕಾರ್ಯಕ್ರಮ ನಿರೂಪಿಸಿದರು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!