ಮುಲ್ಕಿ : ಶಿಕ್ಷಕನಿಗೂ ವಿದ್ಯಾರ್ಥಿಗೂ ಅವಿನಾಭಾವ ಸಂಬಂಧವಿದೆ. ಮಗು ಮೊದಲು ಶಾಲೆಗೆ ಹೋದಾಗ ಶಿಕ್ಷಕ ಹೇಳಿದ್ದನೆಲ್ಲ ನಂಬುತ್ತದೆ. ಮಗುವಿನ ಜಗತ್ತಿನಲ್ಲಿ ಶಿಕ್ಷಕನೇ “ರೋಲ್ ಮಾಡೆಲ್”, ಅವರೇ “ಸೂಪರ್ ಮ್ಯಾನ್”. ತನ್ನ ಗುರುಗಳಿಗೆ ತಿಳಿಯದ ವಿಷಯವೇ ಇಲ್ಲ ಎಂದು ಭಾವಿಸಿಕೊಳ್ಳುತ್ತದೆ. ಇಂಥ ಕಾಲದಲ್ಲಂತೂ ಶಿಕ್ಷಕನ ಜವಾಬ್ದಾರಿ ನಿಜವಾಗಿಯೂ ಮಹತ್ವದ್ದಾಗಿರುತ್ತದೆ. ಎಲ್ಲ ವಿಷಯಗಳಲ್ಲೂ ಸಮಾನತೆ ಕಾಯ್ದುಕೊಂಡು ಆರೋಗ್ಯಪೂರ್ಣ ಸಮಾಜಕ್ಕಾಗಿ ಆರೋಗ್ಯ ಪೂರ್ಣ ಪ್ರಜೆಯನ್ನು ರೂಪಿಸುವ ಜವಾಬ್ದಾರಿ ಗುರುವಿನದು. ಈ ಹಂತದಲ್ಲಿ ನೀಡಿದ ಶಿಕ್ಷಣವೇ ಮಗುವನ್ನು ಜವಾಬ್ದಾರಿಯುತ ಪ್ರಜೆಯಾಗಿ ಬೆಳೆಸುತ್ತದೆ. ನಮ್ಮ ಭವಿಷ್ಯ ರೂಪಿಸುವ, ನಮ್ಮನ್ನು ಸತ್ಪಥದಲ್ಲಿ ಮುನ್ನಡೆಯುವಂತೆ ಮಾರ್ಗ ತೋರುವ ಗುರುವಿನ ಸ್ಮರಣೆ ಸದಾಕಾಲ ಇರಲಿ. ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಜಯಂತ್ ನಡುಬೈಲ್ ತಿಳಿಸಿದರು.
ಅವರು ದಿನಾಂಕ 5.09.2018 ರಂದು ಯುವವಾಹಿನಿ (ರಿ) ಮುಲ್ಕಿ ಘಟಕದ ಆಶ್ರಯದಲ್ಲಿ ಶ್ರೀ ನಾರಾಯಣ ಗುರು ಸಂಯುಕ್ತ ಪದವಿಪೂರ್ವ ಕಾಲೇಜು ಸಹಯೋಗದೊಂದಿಗೆ
ಮುಲ್ಕಿ ರುಕ್ಕರಾಮ ಸಭಾಗ್ರಹದಲ್ಲಿ ಜರುಗಿದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಹಿರಿಯ ಶಿಕ್ಷಕರಾದ ಶ್ರೀಮತಿ ಲೋಲಾಕ್ಷಿ .ಪಿ.ಸಾಲಿಯಾನ್ ಹಾಗೂ ಸಬಿತಾ ಇವರನ್ನು ಸನ್ಮಾನಿಸಲಾಯಿತು
ಸಭೆಯ ಅಧ್ಯಕ್ಷತೆಯನ್ನುಯುವವಾಹಿನಿ (ರಿ) ಮುಲ್ಕಿ ಘಟಕದ ಅಧ್ಯಕ್ಷೆ ಕುಶಲಾ. ಎಸ್ . ಕುಕ್ಯಾನ್ ವಹಿಸಿದ್ದರು , ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಗೋಪಿನಾಥ್ ಪಡಂಗ ಉದ್ಘಾಟಿಸಿದರು
ಶ್ರೀ ನಾರಾಯಣ ಗುರು ಸಂಸ್ಥೆಯ ಕಾರ್ಯದರ್ಶಿ ಬಾಲಚಂದ್ರ ಸನಿಲ್, ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಡಳಿತ ಮಂಡಲಿ ಸದಸ್ಯ ಹಾಗೂ ಯುವವಾಹಿನಿ (ರಿ) ಮುಲ್ಕಿ ಘಟಕದ ಮಾಜೀ ಅಧ್ಯಕ್ಷ ಯೋಗೀಶ್ ಕೋಟ್ಯಾನ್ ಪ್ರಾಂಶುಪಾಲರಾದ ಯತೀಶ್ ಅಮೀನ್ ,ಮುಖ್ಯಉಪಾದ್ಯಾಯ ಕೇಶವ ಕಟೀಲ, CPL ಶುಶ್ರುತ್, ASPL ಸುಜನ್ ಹಾಗೂ ಭವಿಶ್ ಹಾಗೂ SPL ಫಾತಿಮಾ ಹಿಬಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶಿಕ್ಷಕರಿಗೆ ತ್ರೋಬಾಲ್ ಹಾಗೂ ವಾಲಿಬಾಲ್ ಪಂದ್ಯಾಟ ನಡೆಸಲಾಯಿತು. ವಿಜೇತರಿಗೆ ವಿತರಿಸಲಾಯಿತು. ಶ್ರೀ ನಾರಾಯಣ ಗುರು ಸಂಸ್ಥೆಯ ಪ್ರಾಂಶುಪಾಲರು ಯತೀಶ ಅಮೀನ್ ಧನ್ಯವಾದ ಗೈದರು ಗಾಯತ್ರಿ ಹಾಗೂ ಪ್ರಣೀತ ನಿರೂಪಿಸಿದರು