Yuvavahini

SEP 15, 2018 2.28 AM IST

ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕದ ಸೋಣ ಸಂಭ್ರಮ

ಆಚರಣೆ ಆರಾಧನೆಗಳಲ್ಲಿ ಮನುಷ್ಯ ಸಂಬಂಧವನ್ನು ಕಾಪಾಡುವ, ನಿಸರ್ಗವನ್ನು ಗೌರವಿಸುವ ಜೀವನಾದರ್ಶಗಳಿವೆ : ಮಧುಮಾಲ

ಮಂಗಳೂರು : ಜಾಗತೀಕರಣದ ಪ್ರಭಾವ ಇಂದು ಎಲ್ಲೆಡೆ ವ್ಯಾಪಿಸುತ್ತಿದೆ. ಬದಲಾವಣೆ ಎಂಬುದು ಜೀವಂತ ಸಮಾಜದ ಲಕ್ಷಣ ಎಂಬುದನ್ನು ನಾವೆಲ್ಲಾ ಒಪ್ಪಿಕೊಳ್ಳಬೇಕು ಆದರೆ ಈ ಬದಲಾವಣೆಯ ಗತಿ ನಮ್ಮ ದೇಸಿ ನುಡಿ-ಸಂಸ್ಕೃತಿಯ ಬುಡ ಅಲುಗಾಡಿಸುವಂತಾಗಬಾರದು ಹೊಸತನ್ನು ಸ್ವೀಕರಿಸುತ್ತಲೇ ಈ ನೆಲದ ಜೀವನಮೌಲ್ಯ-ಕಲಾಮೌಲ್ಯಗಳು ಉಳಿಯುವಂತಾಗಬೇಕು. ತುಳುನಾಡಿನ ಹಬ್ಬ, ಆಚರಣೆ ಆರಾಧನೆಗಳಲ್ಲಿ ಮನುಷ್ಯ ಸಂಬಂಧವನ್ನು ಕಾಪಾಡುವ, ನಿಸರ್ಗವನ್ನು ಗೌರವಿಸುವ ಜೀವನಾದರ್ಶಗಳಿವೆ. ಎಂದು ಮೂಡಬಿದ್ರೆ ಆಳ್ವಾಸ್ ಕಾಲೇಜಿನ ಉಪನ್ಯಾಸಕಿ ಮಧುಮಾಲ ತಿಳಿಸಿದರು.

ಅವರು ದಿನಾಂಕ 15.09.2018 ರಂದು ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ಯುವವಾಹಿನಿ ಸಭಾಂಗಣ ಉರ್ವಾಸ್ಟೋರ್ ಮಂಗಳೂರು ಇಲ್ಲಿ ನಡೆದ ಸೋಣ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಹೆತ್ತವರ ಪ್ರೀತಿಯಿಂದ ವಂಚನೆ ಒತ್ತಡದ ಶಿಕ್ಷಣ ಪದ್ದತಿ ಅನಾಯಾಸವಾಗಿ ದೊರೆಯುವ ಸೌಲಭ್ಯಗಳು ಇವುಗಳಿಂದ ಮಕ್ಕಳು ತಮ್ಮ ಭವಿಷ್ಯವನ್ನು ಕಂಡು ಕೊಳ್ಳುವಲ್ಲಿ ವಿಫಲರಾಗುತ್ತಿದ್ದಾರೆ. ಎಳೆತನದಲ್ಲಿಯೇ ಹತಾಶ ಭಾವನೆ ತಳೆಯುತ್ತಿದ್ದು ಅಪರಾದಿ ಮನೋಭಾವ ಹೆಚ್ಚುತ್ತಿದೆ.ಮಕ್ಕಳಿಗೆ ಕೇವಲ ಸೌಲಭ್ಯ ಒದಗಿಸಿ ಉಡುಗೊರೆ ಕೊಟ್ಟು ಬೆಳೆಸಿದರೆ ಅವರು ಬದುಕನ್ನು ಎದುರಿಸಲು ಸನ್ನದ್ಧರಾಗುವುದಿಲ್ಲ. ಅದರ ಬದಲಾಗಿ ಪ್ರೌತ್ಸಾಹ, ಪ್ರೀತಿ ಉತ್ತಮ ಸಂಸ್ಕಾರ ನೈತಿಕ ಮೌಲ್ಯಗಳನ್ನು ಧಾರೆ ಎರೆದು ಬೆಳೆಸಬೇಕಾದ ಅವಶ್ಯಕತೆ ಇದೆ ಎಂಬುದನ್ನು ತಿಳಿಯಬೇಕು. ಸಾಮಾಜಿಕ ಜಾಗೃತಿಯೊಂದೇ ಮಕ್ಕಳನ್ನು ಚೆನ್ನಾಗಿ ಬೆಳೆಸುವ ಕಾಳಜಿಯನ್ನು ಉಂಟು ಮಾಡುತ್ತದೆ. ಮಕ್ಕಳ ಶಿಕ್ಷಣ ಮತ್ತು ಭವಿಷ್ಯದ ಬಗ್ಗೆ ಚಿಂತಿಸುವ ಮನಸ್ಸುಗಳಿಂದು ಬೇಕಾಗಿವೆ. ಮಕ್ಕಳು ಹೆಚ್ಚಾಗಿ ಅನುಕರಣೆ ಮೂಲಕ ಕಲಿಯುತ್ತಾರೆ.
ಜಂಕ ಫುಡ್ ಸೇವನೆ ಹೆಚ್ಚಿದ್ದು ಮಕ್ಕಳಲ್ಲಿ ಪೌಷ್ಠಿಕಾಂಶಗಳ ಕೊರತೆ ಹೆಚ್ಚಾಗಿ ಸದೃಢತೆ ಮೂಡುತ್ತಿಲ್ಲ. ಉದ್ಯೌಗಕ್ಕೆ ಹೋಗುವ ಅಪ್ಪ ಅಮ್ಮಂದಿರು ಟಿವಿ , ಮೊಬೈಲ್ ನೋಡುವ ಹಿರಿಯರ ಚಾಳಿ, ಆಳಿನೊಂದಿಗೆ ಹೆಚ್ಚಿನ ಸಮಯ ಕಳೆಯುವ ಪರಿಸ್ಥಿತಿ ಅವಿಭಕ್ತ ಕುಟುಂಬ ಇಲ್ಲದಿರುವುದು. ಹೀಗೆ ಹಲವಾರು ಕಾರಣಗಳಿಂದ ಮಕ್ಕಳ ಪ್ರೀತಿಯಿಂದ ವಂಚಿತರಾಗುತ್ತಿದ್ದಾರೆ ಎಂದರು.

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಜಯಂತ್ ನಡುಬೈಲು, ಘಟಕದ ಸಲಹೆಗಾರ ಜಿತೇಂದ್ರ ಜೆ.ಸುವರ್ಣ, ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಕಳೆದೊಂದು ವರ್ಷದಿಂದ ಮಂಗಳೂರು ಮಹಿಳಾ‌ ಘಟಕದ ಸಲಹೆಗಾರರಾಗಿ ಸೇವೆ ಸಲ್ಲಿಸಿದ ಮಾಜಿ ಅಧ್ಯಕ್ಷ ಪರಮೇಶ್ವರ ಪೂಜಾರಿ ಇವರನ್ನು ಸನ್ಮಾನಿಸಲಾಯಿತು. ಸಭಾ ಕಾರ್ಯಕ್ರಮದ ಬಳಿಕ ಮಂಗಳೂರು ಮಹಿಳಾ ಘಟಕದ ಸದಸ್ಯೆಯರಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.
ಯುವವಾಹಿನಿ ಮಂಗಳೂರು ಮಹಿಳಾ‌ ಘಟಕದ ಅಧ್ಯಕ್ಷೆ ರಶ್ಮಿ.ಸಿ.ಕರ್ಕೇರ ಪ್ರಸ್ತಾವನೆ ಮೂಲಕ ಸ್ವಾಗತಿಸಿದರು. ಕಾರ್ಯದರ್ಶಿ ರವಿಕಲಾ ವೈ.ಅಮೀನ್ ವಂದಿಸಿದರು. ಕಾರ್ಯಕ್ರಮ ಸಂಚಾಲಕಿ ವಿದ್ಯಾ ರಾಕೇಶ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!