Yuvavahini

SEP 15, 2018 2.33 AM IST

ಯುವವಾಹಿನಿ(ರಿ.) ಬಜ್ಪೆ ಘಟಕದ ಆಶ್ರಯದಲ್ಲಿ

ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಬಜಪೆ : ಶ್ರೀ ನಿರಂಜನ ಸ್ವಾಮಿ ಪ್ರಥಮ ದರ್ಜೆ ಕಾಲೇಜು ಸುಂಕದಕಟ್ಟೆ, ರಾಷ್ಟ್ರೀಯ ಸೇವಾ ಯೋಜನಾ ಘಟಕ, ಯುವ ರೆಡ್ ಕ್ರಾಸ್ ಘಟಕ, ರೆಡ್ ರಿಬ್ಬನ್ ಕ್ಲಬ್, ಕಾಲೇಜು ಅಭಿವೃದ್ಧಿ ಸಮಿತಿ, ಶಿಕ್ಷಕ ರಕ್ಷಕ ಸಂಘ, ಹಳೆ ವಿದ್ಯಾರ್ಥಿ ಸಂಘ, ಸುಂಕದಕಟ್ಟೆ ಬಜ್ಪೆ, ಶ್ರೀ ನಿರಂಜನ ಸ್ವಾಮಿ ಅನಿದಾನಿತ ತಾಂತ್ರಿಕ ವಿದ್ಯಾಲಯ ಸುಂಕದಕಟ್ಟೆ ಹಾಗೂ ರೋಟರಿ ಕ್ಲಬ್ ಬಜ್ಪೆ ಇವರೆಲ್ಲರ ಸಹಭಾಗಿತ್ವದಲ್ಲಿ ಯುವವಾಹಿನಿ (ರಿ.) ಬಜ್ಪೆ ಘಟಕ ಇವರ ಆಶ್ರಯದಲ್ಲಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಇವರ ಸಹಯೋಗದೊಂದಿಗೆ ‘ಸ್ವಯಂ ಪ್ರೇರಿತ ರಕ್ತದಾನ ಶಿಬಿರ’ ವು ದಿನಾಂಕ 15.09.2018 ರಂದು ಬೆಳಿಗ್ಗೆ 09.00ರಿಂದ ಮಧ್ಯಾಹ್ನ 12.00ರತನಕ ನಡೆಯಿತು. ಯುವವಾಹಿನಿ (ರಿ.) ಬಜ್ಪೆ ಘಟಕದ ಅಧ್ಯಕ್ಷರಾದ ದೇವರಾಜ್ ಅಮೀನ್ ಕಾರ್ಯಕ್ರಮ ಉದ್ಘಾಟಿಸಿ ರಕ್ತದಾನದ ಮಹತ್ವವನ್ನು ಸಭೆಗೆ ವಿವರಿಸಿದರು. ಡಾ. ಶರತ್, ವೆನ್ಲಾಕ್ ಆಸ್ಪತ್ರೆ ಬ್ಲಡ್ ಬ್ಯಾಂಕ್ ವಿಭಾಗದ ಮುಖ್ಯಸ್ಥರು ಈ ಸಂದರ್ಭದಲ್ಲಿ ರಕ್ತದಾನದ ಬಗ್ಗೆ ಸವಿವರ ಮಾಹಿತಿಯನ್ನು ನೀಡಿದರು. ರೋಟರಿ ಕ್ಲಬ್ ಬಜ್ಪೆ ಇದರ ಮಾಜಿ ಅಧ್ಯಕ್ಷರಾದ ಪಿ.ಎಚ್.ಎಫ್. ರೋಬರ್ಟ್ ಎಫ್. ರೇಗೊ ಇವರು ಸಾಂದರ್ಭಿಕವಾಗಿ ಮಾತನಾಡಿದರು. ಸದರಿ ಇವರು ಸೋದಾಹರಣವಾಗಿ ಮಾತನಾಡಿದರು. ವೇದಿಕೆಯಲ್ಲಿ ಶ್ರೀ ನಿರಂಜನ ಸ್ವಾಮಿ ಪಾಲಿಟೆಕ್ನಿಕ್‌ನ ರಾ.ಸೇ.ಯೋ. ಇದರ ಯೋಜನಾಧಿಕಾರಿ ದೇವರಾಜ್ ಎಸ್. ನಾಯ್ಕ್, ಪದವಿ ಕಾಲೇಜಿನ ರಾ.ಸೇ.ಯೋ. ಯೋಜನಾಧಿಕಾರಿ ಶಾಲಿನಿ ಕಾಲೇಜಿನ ಪ್ರಾಚಾರ್ಯರಾದ ಲತಾ. ಕೆ.ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎಸ್.ಎನ್.ಎಸ್. ಶಿಕ್ಷಣ ಸಂಸ್ಥೆಯ ಟ್ರಸ್ಟಿ, ಹಾಗು ಶ್ರೀ ದೇವಳದ‌ ಆಡಳಿತ ಮೊಕ್ತೇಸರರಾದ ಶ್ರೀ ನಾರಾಯಣ ಎನ್. ಪೂಜಾರಿ ಕಾರ್ಯಕ್ರಮದ‌ ಅಧ್ಯಕ್ಷತೆ ವಹಿಸಿದ್ದರು. ಸುಮಾರು 60 ಜನ ಈ ಶಿಬಿರದಲ್ಲಿ ರಕ್ತದಾನ ಮಾಡಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!