Yuvavahini

OCT 30, 2016 5.28 AM IST

ಯುವವಾಹಿನಿ(ರಿ) ಕೂಳೂರು ಘಟಕ

ಕೂಳೂರು: ನಮ್ಮ ಮನೆ ಹಬ್ಬ ದೀಪಾವಳಿ

ದಿನಾಂಕ 30-10-2106 ರಂದು ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ನಮ್ಮ ಮನೆ ಹಬ್ಬ ದೀಪಾವಳಿ ಎಂಬ ವಿನೂತನ ಕಾರ್ಯಕ್ರಮ ಜರಗಿತು. ಈ ಕಾರ್ಯಕ್ರಮವು ಘಟಕದ ಸದಸ್ಯ ಭಾಸ್ಕರ್ ಕೋಟ್ಯಾನ್‌ರವರ ಸಂಚಾಲಕತ್ವದಲ್ಲಿ ಅವರ ಮನೆಯಲ್ಲಿ ಘಟಕದ ಅಧ್ಯಕ್ಷ ಐ. ಸುಜಿತ್‌ರಾಜ್ ಹಾಗೂ ಸರ್ವಸದಸ್ಯರ ಉಪಸ್ಥಿತಿಯೊಂದಿಗೆ ಬಹಳ ವಿಜೃಂಭಣೆಯಿಂದ ನೆರವೇರಿತು.

ಭಾಸ್ಕರ್ ಕೋಟ್ಯಾನ್‌ರವರ ಹೆತ್ತವರಾದ ಸದಾಶಿವ ಅಮೀನ್ ಮತ್ತು ಶ್ರೀಮತಿ ಜಾನಕಿ ಇವರ ಉಪಸ್ಥಿತಿಯಲ್ಲಿ ದೀಪವನ್ನು ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ನಿತೇಶ್ ಎಕ್ಕಾರ್ ಇವರು ದೀಪಾವಳಿ ಹಬ್ಬದ ಆಚರಣೆಯ ಮಹತ್ವ ಹಾಗೂ ಬಲೀಂದ್ರ ಪೂಜೆಯನ್ನು ಹೇಗೆ ನಡೆಸುವುದು ಎಂಬುವುದು ತಿಳಿಸಿದ್ದು ಮಾತ್ರವಲ್ಲದೆ ಎಲ್ಲಾ ಸದಸ್ಯರ ಸಹಕಾರದಿಂದ ಬಲೀಂದ್ರ ಪೂಜಾ ವಿಧಿವಿಧಾನವನ್ನು ನೆರವೇರಿಸಿದರು. ಘಟಕದ ಮಹಿಳೆಯರೆಲ್ಲಾ ಸೇರಿ ರಂಗವಲ್ಲಿ ಬಿಡಿಸಿ ಹಣತೆಯನ್ನು ಬೆಳಗಿಸಿ, ಪಟಾಕಿಗಳನ್ನು ಸಿಡಿಸಿ ದೀಪಾವಳಿ ಹಬ್ಬವನ್ನು ಬಹಳ ಸಂಭ್ರಮದಿಂದ ಕುಟುಂಬ ಸಮೇತ ಹಾಗೂ ಸದಸ್ಯರೊಂದಿಗೆ ಆಚರಿಸಿದರು. ದೀಪಾವಳಿ ಹಬ್ಬಕ್ಕೆ ಬಂದ ಎಲ್ಲಾ ಸದಸ್ಯರಿಗೆ ಹಾಗೂ ಮಕ್ಕಳಿಗೆ ವಿವಿಧ ರೀತಿಯ ಸ್ಪರ್ಧೆಯನ್ನು ಏರ್ಪಡಿಸಿ ಗೆದ್ದವರಿಗೆ ಬಹುಮಾನವನ್ನು ನೀಡಿ ಗೌರವಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ ಅಧ್ಯಕ್ಷ ಸುನಿಲ್ ಕೆ. ಅಂಚನ್, ಕಾರ್ಯದರ್ಶಿ ನವೀನ್‌ಚಂದ್ರ, ಕೇಂದ್ರ ಸಮಿತಿಯ ಉಪಾಧ್ಯಕ್ಷ ಯಶವಂತ್ ಪೂಜಾರಿ, ಸಲಹೆಗಾರರಾದ ಜಿ. ಪರಮೇಶ್ವರ್ ಪೂಜಾರಿ ಹಾಗೂ ಸ್ಥಾಪಕ ಅಧ್ಯಕ್ಷ ಸಂಜೀವ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಚಾಲಕ ಭಾಸ್ಕರ್ ಕೋಟ್ಯಾನ್ ಸ್ವಾಗತಿಸಿದರು. ಕುಮಾರಿ ಪವಿತ್ರ ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!