Yuvavahini

SEP 21, 2018 3.46 PM IST

ಯುವವಾಹಿನಿ (ರಿ) ಮಂಗಳೂರು ಘಟಕದ ಆಶ್ರಯದಲ್ಲಿ

ಯುವಜನ ಜಾಗೃತಿ ಪ್ರಗತಿ ತರಬೇತಿ ಕಾರ್ಯಾಗಾರ

ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಘಟಕ ಹಾಗೂ ಲಯನ್ಸ್ ಕ್ಲಬ್ ಮಂಗಳಾದೇವಿ ಇದರ ಆಶ್ರಯದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಉದ್ಯಮಶೀಲತೆ, ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಅರ್ಹತಾ ಪರೀಕ್ಷೆಗಳ ಬಗ್ಗೆ ಕಾರ್ಯಗಾರವು ದಿನಾಂಕ ೨೧. ೦೯. ೨೦೧೮ ರಂದು ಇತ್ತೀಚೆಗೆ ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ನಡೆಯಿತು.
ಕಾರ್ಯಗಾರವನ್ನು ಉಧ್ಘಾಟಿಸಿದ ಲಕ್ಷ್ಮಣ ಕೋಟ್ಯಾನ್ ಪೂಜಾ ಕನ್‍ಸ್ಟ್ರಕ್ಷನ್ ಮೇರಿಹಿಲ್ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಲಯನ್ ಯಶವಂತ್ ಪೂಜಾರಿ ಕಾರ್ಯಾಗಾರಕ್ಕೆ ಶುಭಹಾರೈಸಿದರು. ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಜಯಂತ್ ನಡುಬೈಲು ಮಾತನಾಡಿ ಮಂಗಳೂರು ಘಟಕವು ಆಯೋಜಿಸಿದ ಕಾರ್ಯಕ್ರಮವು ಅತ್ಯುತ್ತಮವಾಗಿದೆ. ವಿದ್ಯಾರ್ಥಿಗಳಿಗೆ ಭವಿಷ್ಯವನ್ನು ರೂಪಿಸಲು ಸಹಕಾರಿಯಾಗಿದೆ. ವಿದ್ಯಾರ್ಥಿಗಳು ಗುರಿಯನ್ನು ಇಟ್ಟುಕೊಂಡು ಆ ದಿಕ್ಕಿನೆಡೆಗೆ ಪ್ರಯತ್ನಿಸಬೇಕು ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ಯುವವಾಹಿನಿ ಮಂಗಳೂರು ಘಟಕದ ಅಧ್ಯಕ್ಷ ನವೀನ್ ಚಂದ್ರ ವಹಿಸಿ ಸ್ವಾಗತಿಸಿದರು ವೇದಿಕೆಯಲ್ಲಿ ಘಟಕದ ಕಾರ್ಯದರ್ಶಿ ರಾಜೇಶ್ ಅಮೀನ್ ಉಪಸ್ಥಿತರಿದ್ದರು. ಮಾಜಿ ಅಧ್ಯಕ್ಷ ಶ್ರೀ ಅಶೋಕ್ ಇಂಜಿನಿಯರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಂಚಾಲಕರಾದ ಜೈ ಕುಮಾರ್ ವಂದಿಸಿ, ಜಗನ್ನಾಥ್ ಶಿರ್ಲಾಲ್ ನಿರೂಪಿಸಿದರು.


ನಂತರ ಉದ್ಯಮಶೀಲತೆ ವಿಷಯದ ಬಗ್ಗೆ ಪ್ರದೀಪ್ ರಾಜ್, ಹಾಗೂ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಉದ್ಯೋಗವಕಾಶದ ಬಗ್ಗೆ ಹಿರಿಯಡ್ಕ ಪ್ರಥಮ ದರ್ಜೆ ಕಾಲೇಜಿನ ಪ್ರಾದ್ಯಾಪಕರಾದ ಸುಮನ ಮತ್ತು ಅರ್ಹತಾ ಪರೀಕ್ಷೆ ಬಗ್ಗೆ ಸಹ್ಯಾದ್ರಿ ಕಾಲೇಜಿನ ಸಹಾಯಕ ಪ್ರಾದ್ಯಾಪಕರಾದ ಮಿಥುನ್ ಉಳ್ಳಾಲ್ ತರಬೇತಿ ನೀಡಿದರು. ಸಮನ್ವಯಕಾರರಾಗಿ ಅಲೋಶಿಯಸ್ ಕಾಲೇಜಿನ ಸಹಪ್ರಾದ್ಯಾಪಕರಾದ ರಾಕೇಶ್ ಕುಮಾರ್, ಮತ್ತು ರಥಬೀದಿ ಕಾಲೇಜಿನ ಸಹಾಯಕ ಪ್ರಾದ್ಯಾಪಕರಾದ ಶೇಷಪ್ಪ ಅಮೀನ್ ಹಾಗೂ ಸಹ್ಯಾದ್ರಿ ಕಾಲೇಜಿನ ಸಹಾಯಕ ಪ್ರಾದ್ಯಾಪಕರಾದ ಪದ್ಮನಾಭ.ಬಿ ಕಾರ್ಯಾಗಾರ ನಡೆಸಿಕೊಟ್ಟರು. ಕಾರ್ಯಾಗಾರದಲ್ಲಿ ಸುಮಾರು 70 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸಮಾರೋಪ ಸಮಾರಂಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ನರೇಶ್ ಸಸಿಹಿತ್ಲು ಸಮಾರೋಪ ಭಾಷಣ ಮಾಡಿದರು. ಯುವಜನ ಸೇವಾಸಮಿತಿ ಕಾರ್ಯದರ್ಶಿ ಗಣೇಶ್.ವಿ. ಯುವರು ವಂದನಾರ್ಪಣೆ ಸಲ್ಲಿಸಿದರು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!