ಮಂಗಳೂರು : ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ನವರಾತ್ರಿ ಉತ್ಸವದ ಜಗದ್ವಿಖ್ಯಾತ ಮಂಗಳೂರು ದಸರಾ ಶೋಭಾ ಯತ್ರೆಯು ದಿನಾಂಕ 19.10. 2018 ರಂದು ವೈಭವದಿಂದ ಸಂಪನ್ನಗೊಂಡಿತು. ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಜರುಗಿದ ಮಂಗಳೂರು ದಸರಾ ಶೋಭಾಯಾತ್ರೆಗೆ ವಿವಿಧ ಸಂಘ ಸಂಸ್ಥೆಗಳ ಪ್ರವರ್ತಿತ ಧಾರ್ಮಿಕ ,ಸಾಂಸ್ಕೃತಿಕ, ಹುಲಿವೇಷ ನೃತ್ಯ ರೂಪಕಗಳು, ದೇಶದ ಪರಂಪರೆಯ ಟ್ಯಾಬ್ಲೋಗಳು, ತೃಶ್ಯೂರಿನ ಬಣ್ಣದ ಕೊಡೆಗಳು, ಕೇರಳದ ಚೆಂಡೆ ವಾದ್ಯ, ಕಲ್ಲಡ್ಕದ ಶಿಲ್ಪಾ ಬೊಂಬೆ ಬಳಗ, ಬೆಂಗಳೂರಿನ ಬ್ಯಾಂಡ್ ಬಳಗ, ಸೋಮನ ಕುಣಿತ, ಪೂಜಾ ಕುಣಿತಗಳು, ರಾಜ್ಯದ ವಿವಿಧ ಸಾಂಸ್ಕೃತಿಕ ಕಲಾ ತಂಡಗಳು, ವೈವಿಧ್ಯಮಯ ಟ್ಯಾಬ್ಲೋಗಳು ಮೆರವಣಿಗೆಗೆ ಮೆರುಗು ನೀಡಿದವು.
ಈ ವೈಭವದ ಮೆರವಣಿಗೆ ಸಂದರ್ಭದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ ಆಶ್ರಯದಲ್ಲಿ ಸಾವಿರಾರು ಭಕ್ತರಿಗೆ ಪಾನೀಯ ನೀಡುವ ಮೂಲಕ ಭಕ್ತರ ಬಾಯಾರಿಕೆ ನಿವಾರಿಸಿದ ಸೇವಾ ಕಾರ್ಯವು ಸರ್ವರ ಪ್ರಶಂಸೆಗೆ ಪಾತ್ರವಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ ನಡುಬೈಲು , ಉಪಾಧ್ಯಕ್ಷರಾದ ನರೇಶ್ ಕುಮಾರ್ ಸಸಿಹಿತ್ಲು, ಪ್ರಧಾನ ಕಾರ್ಯದರ್ಶಿ ಸುನಿಲ್ ಕೆ. ಅಂಚನ್ ಯುವವಾಹಿನಿ (ರಿ) ಮಂಗಳೂರು ಘಟಕದ ಅಧ್ಯಕ್ಷರಾದ ನವೀನ ಚಂದ್ರ , ಕಾರ್ಯದರ್ಶಿ ರಾಜೇಶ್ ಅಮೀನ್ , ಉಪಾಧ್ಯಕ್ಷರಾದ ಲಕ್ಷ್ಮೀನಾರಾಯಣ , ಕಾರ್ಯಕ್ರಮದ ಸಂಚಾಲಕರಾದ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.