Yuvavahini

OCT 07, 2018 3.41 PM IST

ಹಿಂದುಳಿದವರ ಪ್ರಗತಿಗೆ ನಾರಾಯಣಗುರುಗಳು ಪ್ರೇರಣೆ : ರಾಜೀವ ಪೂಜಾರಿ.

ಪಣಂಬೂರು : ಬ್ರಹ್ಮಶ್ರೀ ನಾರಾಯಣಗುರುಗಳು ಸನಾತನ ಪರಂಪರೆ, ಧ್ಯಾನ, ತಪಸ್ಸನ್ನು ಪ್ರತಿಪಾದಿಸಿದ್ದರು. ಈ ಮೂಲಕ ಸಮಾಜದಲ್ಲಿ ಆ ಕಾಲದಲ್ಲಿದ್ದ ಅಸ್ಪ್ರಶ್ಯತೆ, ಅಂಧಶ್ರದ್ಧೆ ಮೊದಲಾದ ಸಮಸ್ಯೆಗಳ ಬಗ್ಗೆ ಕ್ರಾಂತಿಕಾರಿ ಬದಲಾವಣೆ ತರಲು ಯತ್ನಿಸಿದ್ದರು. ತಪಸ್ಸನ್ನು ಆಚರಿಸಿ ಭಗವತ್ ಸಾಕ್ಷಾತ್ಕಾರವನ್ನು ಪಡೆದು ಸಮಾಜ ಪರಿವರ್ತನೆಯನ್ನು ಮಾಡುವ ಮೂಲಕ ಸಮಾಜದಲ್ಲಿ ಜಾಗೃತಿಯನ್ನು ಮೂಡಿಸಿದರು ಎಂದು ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ರಾಜೀವ ಪೂಜಾರಿ ತಿಳಿಸಿದರು.
ದಿನಾಂಕ 07.10.2018 ರಂದು ಯುವವಾಹಿನಿ (ರಿ) ಪಣಂಬೂರು ಘಟಕದ ಆಶ್ರಯದಲ್ಲಿ ಎಂ ಟಿ ಸಾಲ್ಯಾನ್ ಕುಳಾಯಿ ಅವರ ದೋಟ ಮನೆಯಲ್ಲಿ ಜರಗಿದ ಬಿಲ್ಲವ ಸಮಾಜ ಮತ್ತು ನಾರಾಯಣಗುರುಗಳ ತತ್ವಾದರ್ಶಗಳ ಅನುಷ್ಠಾನ ವಿಚಾರಗೋಸ್ಟಿಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಬಾಗವಹಿಸಿ ಮಾತನಾಡಿದರು. ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ ಕುಳಾಯಿ ಇದರ ಮಾಜಿ ಅಧ್ಯಕ್ಷ ಎಂ ಟಿ ಸಾಲ್ಯಾನ್ ದೋಟ ಮನೆ ಕುಳಾಯಿ ಇವರು ನಾರಾಯಣಗುರುಗಳ ಬಾವಚಿತ್ರಕ್ಕೆ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಬಿಲ್ಲವರು ಸೇರಿದಂತೆ ಹಿಂದುಳಿದ ವರ್ಗಗಳ ಪ್ರಗತಿಗೆ ಬ್ರಹ್ಮಶ್ರೀ ನಾರಾಯಣಗುರುಗಳು ಪ್ರೇರಣೆಯಾಗಿದ್ದಾರೆ. ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶ ಪ್ರಚಾರಕ್ಕೆ ಯುವವಾಹಿನಿ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಹೇಳಿದರು. ಯುವವಾಹಿನಿ ಕೇಂದ್ರ ಸಮಿತಿ ಮಾಜಿ ಅಧ್ಯಕ್ಷ ಪದ್ಮನಾಭ ಮರೋಳಿಯವರು ಪ್ರಸ್ತಾವಿಸಿದರು. ಯುವವಾಹಿನಿ ಮತ್ತು ಸಂಘಟನೆ ಎಂಬ ವಿಚಾರದಲ್ಲಿ ಮಾಹಿತಿ ನೀಡಿದರು.  ಯುವವಾಹಿನಿ ಕೇಂದ್ರ ಸಮಿತಿ ಮಾಜಿ ಅಧ್ಯಕ್ಷ ವಿಶ್ವನಾಥ ಹಾಗೂ ಸದಸ್ಯರಾದ ಗಿರಿಯಪ್ಪ ಪೂಜಾರಿ, ಮಾಜಿ ಕಾರ್ಪೊರೇಟರ್ ವೇದಾವತಿ ಮತ್ತತರರು ಉಪಸ್ಥಿತರಿದ್ದರು. ಯುವವಾಹಿನಿ (ರಿ) ಪಣಂಬೂರು ಘಟಕದ ಅದ್ಯಕ್ಷ ಜಗದೀಶ ಸುವರ್ಣ ಸ್ವಾಗತಿಸಿ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಪದ್ಮನಾಭ ಮರೋಳಿ ಕಾರ್ಯಕ್ರಮ ನಿರೂಪಿಸಿ ಧನ್ಯವಾದ ನೀಡಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!