ಕೂಳೂರು : ಬೆಳಕಿನ ಒಂದು ಸೆಲೆ ಸಾಕು ಬದುಕಿನಲ್ಲಿ ಜೀವನೋತ್ಸಾಹ ತುಂಬಲು .ಹಣತೆಯ ಬೆಳಕಿನಲ್ಲಿ ಒಬ್ಬರ ಕಷ್ಟ, ನೋವು,ನಲಿವನ್ನು ಕ್ಷಣಕಾಲ ಕಂಡು ಅರ್ಥೈಸಿಕೊಳ್ಳಲು ಇದೊಂದು ಸದಾವಕಾಶ ಎನ್ನುವಂತೆ ಶ್ರೀ ಗುರುವರ್ಯರ ಆಶೀರ್ವಾದದೊಂದಿಗೆ, ಕೂಳೂರು ಘಟಕದ ಆಶಯದಂತೆ ದೀಪಾವಳಿ ಹಬ್ಬದಂದು ಇಡೀ ಜಗತ್ತೇ ಬೆಳಕಿನಲ್ಲಿ ಜಗಮಗಿಸುವಾಗ ಕೆಲವೊಂದು ಮನೆಯಲ್ಲಿ ಹಣತೆ ಹಚ್ಚಲು ಸಾಧ್ಯವೇ ಇಲ್ಲ ಎನ್ನುವ ದಯನೀಯ ಕುಟುಂಬಗಳು ನಮ್ಮ ಸಮಾಜದಲ್ಲಿ ಇರುವುದನ್ನು ಗುರುತಿಸಿ ಅವರಿಗೆ ಒಂದು ತಿಂಗಳ ದಿನಬಳಕೆಯ ಎಲ್ಲ ಸಾಮಗ್ರಿಗಳನ್ನು ಒದಗಿಸಿಕೊಟ್ಟು ದೀಪಾವಳಿಯ ಅರ್ಥಪೂರ್ಣ ಆಚರಣೆಯಲ್ಲಿ ಪಾಲ್ಗೊಂಡು, ಅಜ್ಞಾನದಿಂದ ಸುಜ್ಞಾನದೆಡೆಗೆ ,ಅಂಧಕಾರದಿಂದ ಬೆಳಕಿನೆಡೆಗೆ ಸಿಗುವಲ್ಲಿ ನಾವೆಲ್ಲರೂ ಕೈ ಜೋಡಿಸಿ ಇಂತಹ ಕಾರ್ಯದಲ್ಲಿ ಭಾಗಿಯಾಗೋಣ ಎನ್ನುವ ಆಶಯದಲ್ಲಿ ದಿನಾಂಕ 5/11/2018 ಸೋಮವಾರ ಸಂಜೆ 3 ಗಂಟೆಗೆ ಸರಿಯಾಗಿ ಕೂಳೂರು ಘಟಕವು ದೀಪಾವಳಿ ಪ್ರಯುಕ್ತ ನಾಲ್ಕು ತೀರಾ ಬಡ ಕುಟುಂಬಗಳನ್ನು ಗುರುತಿಸಿ, ಅವರಿಗೆ ದೀಪಾವಳಿ ಹಬ್ಬ ಆಚರಣೆ ಹಾಗೂ ಮುಂದಿನ ದಿನಗಳನ್ನು ನಡೆಸುವುದಕ್ಕಾಗಿ ರೂ. 15,000/- ಮೊತ್ತದ ವಸ್ತುಗಳನ್ನು ದೇಣಿಗೆ ರೂಪದಲ್ಲಿ ಘಟಕದ ಸದಸ್ಯರು ನಾಲ್ಕು ಮನೆಗಳಿಗೂ ಭೇಟಿ ನೀಡಿ ವಸ್ತುಗಳನ್ನು ಹಸ್ತಾಂತರಿಸಿದರು .ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ,ಉಪಾಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್, ಮಾರ್ಗದರ್ಶಕರಾದ ಜಯಾನಂದ ಅಮೀನ್, ಕೂಳೂರು ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಅಧ್ಯಕ್ಷರಾದ ಹರೀಶ್ ಅಮೀನ್ ಇವರು ಉಪಸ್ಥಿತರಿದ್ದರು .ಕಾರ್ಯಕ್ರಮದ ಸಂಚಾಲಕತ್ವವನ್ನು ಕ್ರೀಡಾ ಮತ್ತು ಸಮಾಜ ಸೇವಾ ನಿರ್ದೇಶಕರಾದ ರೋಹಿತ್ ಅವರು ವಹಿಸಿದ್ದರು .
A Noble work. A good deed indeed.
Well done Super work