Yuvavahini

NOV 04, 2018 3.19 PM IST

ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಪ್ರೇರಣಾ ಶಿಬಿರ

ನಮ್ಮ ಮಾತುಗಳು ಕೇಳುಗರ ಹೃದಯವನ್ನು ತಲುಪಬೇಕು : ಅಭಿಜಿತ್ ಕರ್ಕೇರ

ಬಂಟ್ವಾಳ : ದಿನನಿತ್ಯದ ವೈಯಕ್ತಿಕ ಮತ್ತು ವೃತ್ತಿ ಬದುಕಿನಲ್ಲಿ ವ್ಯವಹರಿಸುವಾಗ ಇತರರನ್ನು ಪ್ರೇರೇಪಿಸುವ ಮನವೊಪ್ಪಿಸುವ ಅಥವಾ ಒತ್ತಾಯಿಸುವ ಸಂದರ್ಭಗಳು ಸಹಜ, ಇಂತಹ ಸಂದರ್ಭಗಳಲ್ಲಿ ಸಂವಹನ ಅತ್ಯಂತ ಪರಿಣಾಮಕಾರಿಯಾಗಿದ್ದು , ಉದ್ದೇಶವನ್ನು ಸಾಧಿಸುವಂತೆ ಇರಬೇಕು. ಆದರೆ ಈ ಕೌಶಲ ಎಲ್ಲರಲ್ಲೂ ಒಂದೇ ಮಟ್ಟದಲ್ಲಿ ಇರುವುದಿಲ್ಲ ಉದಾಹರಣೆಗೆ ಜೀವನದಲ್ಲಿ ಯಾವ ಕೊರತೆ ಇಲ್ಲದಿದ್ದರೂ ಚೈತನ್ಯ ರಹಿತವಾದ ನಿರಾಶವಾದಿಗಳನ್ನು ನೋಡುತ್ತಿರುತ್ತೇವೆ. ಕೆಲವರು ಮಾತನಾಡುವ ಶೈಲಿಯಿಂದ ನಕಾರಾತ್ಮಕ ಅನಿಸಿಕೆ, ಅನುಭವಗಳು ಆಗುತ್ತವೆ. ನಾವು ಅಭಿಪ್ರಾಯವನ್ನು, ಭಾವನೆಗಳನ್ನು ವ್ಯಕ್ತಪಡಿಸುವ ರೀತಿಯಿಂದ ಇತರರಿಗೆ ಬೇಸರ ಕಿರಿಕಿರಿ ಉಂಟಾಗಿ ನಕಾರಾತ್ಮಕ ಪ್ರಕ್ರಿಯೆಗಳು ಮೂಡುತ್ತವೆ. ಈ ರೀತಿಯ ಸಂವಹನದಿಂದ ವ್ಯಕ್ತಿಗತ ಮತ್ತು ವ್ಯಾವಹಾರಿಕ ಸಮಸ್ಯೆಗಳು ಉಲ್ಬಣಗೊಂಡು, ನಾವು ಪರಿಣಾಮಕಾರಿಯಾಗಿ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ ಎಂದು ತರಬೇತುದಾರ ಅಭಿಜಿತ್ ಕರ್ಕೇರ ತಿಳಿಸಿದರು.
ಅವರು ದಿನಾಂಕ 04.11.2018 ರಂದು ಯುವವಾಹಿನಿ (ರಿ) ಬಂಟ್ವಾಳ ಘಟಕದ ಆಶ್ರಯದಲ್ಲಿ ಘಟಕದ ಸದಸ್ಯರಿಗೆ ನಡೆಸಿದ ಪ್ರೇರಣಾ ಶಿಬಿರದಲ್ಲಿ ಪರಿಣಾಮಕಾರಿ ಸಂವಹನ ಕಲೆ ಮತ್ತು ವ್ಯಕ್ತಿತ್ವ ವಿಕಸನ ಕಾರ್ಯಗಾರದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.
ಸಮುದಾಯದ ಜತೆಗಿನ‌ ನಮ್ಮ ಸಂಪರ್ಕವನ್ನು ನಾಲ್ಕು ವಿಧದಲ್ಲಿ ವಿಂಗಡಿಸಬಹುದು. ನಾವು ಏನು ಮಾಡುತ್ತೇವೆ, ಹೇಗೆ ಕಾಣಿಸಿಕೊಳ್ಳುತ್ತೇವೆ, ಏನು ಮಾತನಾಡುತ್ತೇವೆ, ಮತ್ತು ಹೇಗೆ ಮಾತನಾಡುತ್ತೇವೆ.
ಸಂವಹನ ಪ್ರಕ್ರಿಯೆಯಲ್ಲಿ ಎರಡು ಅಂಶಗಳೆಂದರೆ, ಸಂದೇಶಗಳನ್ನು ನೀಡುವುದು ಮತ್ತು ಸ್ವೀಕರಿಸುವುದು. ಈ ಪ್ರಕ್ರಿಯೆಯಲ್ಲಿ ನಾವು ಮುಖ್ಯವಾಗಿ ಬಳಸುವ ಭಾಷೆ ಮತ್ತು ಧಾಟಿಗೆ ಗಮನ ಹರಿಸಬೇಕು. ನಮ್ಮ ಮಾತುಗಳು ಕೇವಲ ಅರ್ಥ ಆದರೆ ಸಾಕಾಗದು ಅದು ಕೇಳುಗರ ಹೃದಯವನ್ನು ತಲುಪಬೇಕು ಆಗಲೇ ಸಂವಹನ ಪರಿಣಾಮಕಾರಿಯಾಗಲು ಸಾಧ್ಯ ಎಂದು ಅಭಿಜಿತ್ ಕರ್ಕೇರ ತಿಳಿಸಿದರು.

ಲೋಹಿತ್ ಕುಮಾರ್ ಇವರು ಯುವಜನರ ಮಾನಸಿಕ ಆರೋಗ್ಯದ ಬಗ್ಗೆ ಮಾತನಾಡಿ, ನಾವೆಲ್ಲರೂ ವೈಯಕ್ತಿಕ ಮತ್ತು ವೃತ್ತಿಜೀವನದಲ್ಲಿ ಹಲವಾರು ಸವಾಲುಗಳನ್ನು ಎದುರಿಸುತ್ತೇವೆ ಮತ್ತು ಇದರಿಂದ ತಾತ್ಕಾಲಿಕ ವಾದ ಒತ್ತಡ, ಖಿನ್ನತೆ ಮತ್ತು ಆತಂಕಕ್ಕೆ ಒಳಗಾಗುತ್ತೇವೆ. ಆದರೆ ಯಾವಾಗ ನಮ್ಮ ಸಹಜ ನಡವಳಿಕೆಯಲ್ಲಿಯೂ ತೊಂದರೆ ಕಾಣಿಸುತ್ತದೆಯೋ, ಆಗ ಅದನ್ನು ಮಾನಸಿಕ ಸಮಸ್ಯೆಯ ಲಕ್ಷಣ. ಮಾನಸಿಕ ಆರೋಗ್ಯದ ಕುರಿತು ನಮ್ಮ ಅಜ್ಞಾನ ಮತ್ತು ಅದಕ್ಕೆ ಅಂಟಿಕೊಂಡಿರುವ ಕಳಂಕದಿಂದಾಗಿ ಎಷ್ಟೋ ಬಾರಿ ಅಗತ್ಯವಾದ ಸಹಾಯ ಪಡೆಯುವುದೇ ಅಸಾಧ್ಯವಾಗುತ್ತದೆ.
ಮಾನಸಿಕ ಕಾಯಿಲೆಗಳ ಬಗ್ಗೆ ಇರುವ ತಪ್ಪು ತಿಳಿವಳಿಕೆಯ ಬಗ್ಗೆ ಅರಿತುಕೊಂಡು , ಮಾನಸಿಕ ಅಸ್ವಸ್ಥತೆಗೆ ಸರಿಯಾದ ರೀತಿಯಲ್ಲಿ ಚಿಕಿತ್ಸೆ ಪಡೆದುಕೊಂಡಾಗ ಮಾತ್ರ ಉತ್ತಮ ಮಾನಸಿಕ ಆರೋಗ್ಯವನ್ನು ಪಡೆದುಕೊಳ್ಳಲು ಸಾದ್ಯವಾಗುತ್ತದೆ ಎಂದು ಅವರು ತಿಳಿಸಿದರು.

ಉಪನ್ಯಾಸಕ ಚೇತನ್ ಮುಂಡಾಜೆ ಇವರು ಸಂಘಟನೆಯ ಉದ್ದೇಶ ಮತ್ತು ಚಟುವಟಿಕೆಗಳ ಬಗ್ಗೆ ಕಾರ್ಯಾಗಾರ ನಡೆಸಿಕೊಟ್ಟರು.

ಉಪನ್ಯಾಸಕ ಶಿವಪ್ರಸಾದ್ ಇವರು ಜೀವನ ಕೌಶಲಗಳ ಬಗ್ಗೆ ಮಾತನಾಡಿ, ಉತ್ತಮ ಸಂಭಾಷಣೆ, ಸಮಯ ನಿರ್ವಹಣೆ, ಸಂಬಂಧಗಳು, ತೆಗೆದುಕೊಳ್ಳುವ ನಿರ್ಧಾರ, ಸಮಸ್ಯೆ ಪರಿಹರಿಸುವ ಕೌಶಲ್ಯ, ತಾಳ್ಮೆ ಮತ್ತು ನಂಬಿಕೆ, ಇಂತಹ ಜೀವನ ಮೌಲ್ಯಗಳು ಪ್ರತಿಯೊಬ್ಬ ವ್ಯಕ್ತಿಯ ಬದುಕಿನ ಅಂಗವಾದರೆ ಮಾತ್ರ ಆತ ಆರೋಗ್ಯಕರ ವ್ಯಕ್ತಿತ್ವವನ್ನೊಳಗೊಂಡು ಆರೋಗ್ಯಕರ ಸಮಾಜದ ನಿರ್ಮಾಣಕ್ಕೆ ಕಾರಣನಾಗುತ್ತಾನೆ ಮತ್ತು ತನ್ನ ಜೀವನ ದಲ್ಲೂ ಯಶಸ್ಸನ್ನೂ ಪಡೆಯುತ್ತಾನೆ ಎಂದು ತಿಳಿಸಿದರು.

ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ಶಿವಾನಂದ ಎಮ್ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಸಲಹೆಗಾರರಾದ ಬಿ.ತಮ್ಮಯ ದೀಪ ಬೆಳಗುವುದರ ಮೂಲಕ ಪ್ರೇರಣಾ ಶಿಬಿರ ಉದ್ಘಾಟಿಸಿದರು. ವ್ಯಕ್ತಿತ್ವ ವಿಕಸನ ನಿರ್ದೇಶಕ ನಿತಿನ್.ಎಚ್.ಯು ಸ್ವಾಗತಿಸಿದರು. ಕಾರ್ಯದರ್ಶಿ ಕಿರಣ್ ರಾಜ್ ಪೂಂಜರೆಕೋಡಿ ವಂದಿಸಿದರು. ಮಾಜಿ ಅಧ್ಯಕ್ಷ ಪ್ರೇಮನಾಥ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!