Yuvavahini

NOV 14, 2018 2.14 PM IST

ಯುವವಾಹಿನಿ(ರಿ) ಕೂಳೂರು ಘಟಕದ ಆಶ್ರಯದಲ್ಲಿ ಮಕ್ಕಳ ದಿನಾಚರಣೆ

ಮುಗ್ಧ ಮನಸ್ಸಿನ ಸಮ್ಮಿಲನ

ಕೂಳೂರು : ಯುವವಾಹಿನಿ(ರಿ) ಕೂಳೂರು ಘಟಕದ ಮಕ್ಕಳ ದಿನಾಚರಣೆ -ಮುಗ್ಧ ಮನಸ್ಸಿನ ಸಮ್ಮಿಲನ ಕಾರ್ಯಕ್ರಮವನ್ನು ದಿನಾಂಕ 14/11/2018 ಬುಧವಾರ 4 ಗಂಟೆಗೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಮಂದಿರ ಕೂಳೂರು ಇಲ್ಲಿ ಏರ್ಪಡಿಸಲಾಯಿತು.ಮೂರು ಅಂಗನವಾಡಿ ಕೇಂದ್ರದ ಸುಮಾರು 60 ಮಂದಿ ಪುಟ್ಟ ಮಕ್ಕಳು ಹಾಗೂ ಅವರ ಪೋಷಕರು ಇಲ್ಲಿ ಭಾಗಿಯಾಗಿದ್ದು ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಸ್ಪರ್ಧೆಯ ನಂತರ ಮನರಂಜನೆಗಾಗಿ ಮಕ್ಕಳಿಂದ ಅಭಿನಯ ಗೀತೆ, ನೃತ್ಯ ಹಾಗೂ ಮಕ್ಕಳ ಪೋಷಕರಿಗೂ ಕೂಡ ಮಕ್ಕಳ ಜತೆ ನೃತ್ಯ ಸ್ಪರ್ಧೆ ನಡೆಸಲಾಯಿತು. ಮಕ್ಕಳ ಪೋಷಕರು, ಘಟಕದ ಸದಸ್ಯರು ಕೂಡ ಮಕ್ಕಳ ಜೊತೆ ಮಕ್ಕಳಂತೆ ಆಡಿ ನಲಿದಾಡಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಸಭಾ ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಇವರು ಅಧ್ಯಕ್ಷತೆ ವಹಿಸಿ ಎಲ್ಲರನ್ನು ಸ್ವಾಗತಿಸಿದರು ಮುಖ್ಯ ಅತಿಥಿಯಾಗಿ ಯುವವಾಹಿನಿ(ರಿ) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ರವಿಚಂದ್ರ ಇವರು ಉಪಸ್ಥಿತರಿದ್ದರು . ಘಟಕದ ಸಲಹೆಗಾರರಾದ ನೇಮಿರಾಜ್, ಕಾರ್ಯಕ್ರಮದ ಸಂಚಾಲಕರಾದ ವಿದ್ಯಾರ್ಥಿ ಸಂಘಟನೆ ನಿರ್ದೇಶಕ ವಿನೀತ್ ಕುಮಾರ್ ಹಾಗೂ ಕಾರ್ಯದರ್ಶಿ ಪವಿತ್ರ ಅಂಚನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು .

ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾದಂತಹ ರವಿಚಂದ್ರ ಇವರು ವಿದ್ಯಾನಿಧಿ ಸಹಾಯಾರ್ಥವಾಗಿ ಮಾಡಿರುವ ಲಕ್ಕಿ ಕೂಪನ್ ನನ್ನು ಬಿಡುಗಡೆ ಮಾಡಿ ಕೂಳೂರು ಘಟಕದ ಉತ್ತಮ ಕಾರ್ಯಕ್ರಮಕ್ಕಾಗಿ ಶುಭ ಹಾರೈಸಿದರು . ಘಟಕದ ಸಲಹೆಗಾರರಾದ ನೇಮಿರಾಜ್ ಇವರು ಮಾತನಾಡಿ ಮಕ್ಕಳನ್ನು ಕೇವಲ ಕಲಿಕೆಯಲ್ಲಿ ಮಾತ್ರ ಪ್ರೋತ್ಸಾಹಿಸದೆ ಅವರಲ್ಲಿ ಹುದುಗಿರುವ ಇನ್ನಿತರ ಪ್ರತಿಭೆಗಳನ್ನು ಗುರುತಿಸಿ ಅದನ್ನು ಪ್ರೋತ್ಸಾಹಿಸಬೇಕೆಂದು ಪೋಷಕರಿಗೆ ತಿಳಿಸಿದರು. ಆಟೋಟ ಸ್ಪರ್ಧೆಯಲ್ಲಿ ಗೆದ್ದಂತಹ ಮಕ್ಕಳಿಗೆ ಬಹುಮಾನ ನೀಡಲಾಯಿತು .ಹಾಗೂ ಭಾಗವಹಿಸಿದ ಎಲ್ಲ ಮಕ್ಕಳಿಗೂ ಘಟಕದ ವತಿಯಿಂದ ಪ್ರೋತ್ಸಾಹಕರ ಬಹುಮಾನ ನೀಡಿ ಗೌರವಿಸಲಾಯಿತು. ಸಭೆಯಲ್ಲಿ ನಿಕಟಪೂರ್ವ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್ , ಮಾರ್ಗದರ್ಶಕರಾದ ಜಯಾನಂದ ಅಮೀನ್ ಹಾಗೂ ಗಿರಿಧರ್ ಸನಿಲ್ ಉಪಸ್ಥಿತರಿದ್ದರು .
ಘಟಕದ ಸದಸ್ಯನಾದ ಪ್ರತೀಶ್ ಗೌರೀಶ್ ಕಾರ್ಯಕ್ರಮ ನಿರೂಪಿಸಿದರು. ಸಂಚಾಲಕರಾದ ವಿನೀತ್ ಕುಮಾರ್ ವಂದಿಸಿದರು . ಕಾರ್ಯಕ್ರಮದ ಕೊನೆಗೆ ಎಲ್ಲ ಮಕ್ಕಳಿಗೂ ಪೋಷಕರಿಗೂ ಸಿಹಿ ತಿಂಡಿ ಉಪಾಹಾರದ ವ್ಯವಸ್ಥೆ ಮಾಡಲಾಯಿತು .

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!