Yuvavahini

NOV 07, 2018 2.59 PM IST

ಯುವವಾಹಿನಿ ಉಪ್ಪಿನಂಗಡಿ ಘಟಕದ ಆಶ್ರಯದಲ್ಲಿ

ಯುವ ತುಡರ್ – 2018

ಉಪ್ಪಿನಂಗಡಿ : ಯುವವಾಹಿನಿ ಉಪ್ಪಿನಂಗಡಿ ಘಟಕದ ಆಶ್ರಯದಲ್ಲಿ ಯುವತುಡರ್ -2018 ಕಾರ್ಯಕ್ರಮವು ಘಟಕದ ಉಪಾಧ್ಯಕ್ಷರಾದ ಚಂದ್ರಶೇಖರ ಕೆ. ಸನಿಲ್  ಇವರ ಮನೆ “ಯಮುನಾ” ಇಲ್ಲಿ ದಿನಾಂಕ ೦೭. ೧೧. ೨೦೧೮ ರಂದು ನಡೆಯಿತು. ಘಟಕದ ಅಧ್ಯಕ್ಷರಾದ ಅಜಿತ್ ಕುಮಾರ್ ಪಾಲೇರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ ನಡುಬೈಲು ಭಾಗವಹಿಸಿ ಮಾತನಾಡಿ ದೀಪಾವಳಿಯು ತುಳುನಾಡಿನ ವಿಶಿಷ್ಟ ಹಬ್ಬವಾಗಿದ್ದು, ಕತ್ತಲೆಯನ್ನು ಹೋಗಲಾಡಿಸಿ ಬೆಳಕನ್ನು ಪಸರಿಸುವ ಸಂಸ್ಕೃತಿಗಳ ಪ್ರತೀಕವಾದ ದೀಪಾವಳಿಯು ಎಲ್ಲರ ಬದುಕಿನಲ್ಲಿ ದೀಪದಂತೆ ಬೆಳಗಲಿ ಎಂದು ಶುಭ ಹಾರೈಸಿದರು.
ಉಪ್ಪಿನಂಗಡಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶಯನಾ ಜಯಾನಂದ, ಬಾಲಕೃಷ್ಣ ಪೂಜಾರಿ, ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಡಾ.ರಾಜರಾಮ್ ಕೆ.ಬಿ,  ಸಲಹೆಗಾರರಾದ ವರದ್ರಾಜ್. ಎಂ,  ಡಾ.ಸದಾನಂದ ಕುಂದರ್, ಚಂದ್ರ ಶೇಖರ ಕೆ ಸನಿಲ್ ಶುಭ ಹಾರೈಸಿದರು.
ತುಡರ್ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಶಯಾನ ಜಯಾನಂದ್ ಮತ್ತು ರೂಪಲತಾ ಚಂದ್ರಶೇಖರ್ ಇವರು ನೆರವೇರಿಸಿದರು. ನಂತರ ಎಲ್ಲಾ ಯುವವಾಹಿನಿ ಸದಸ್ಯರು ಹಣತೆಯೊಂದಿಗೆ ದೀಪ ಹಚ್ಚುವ ಮೂಲಕ ದೀಪಗಳನ್ನು ಬೆಳಗಿಸಿದರು.
ಈ ಕಾರ್ಯಕ್ರಮದಲ್ಲಿ ಮರ ಹಾಕುವ ಬಲೀಯೇಂದ್ರ ಪೂಜೆಯನ್ನು ಮಾಡಲಾಯಿತು. ಇದನ್ನು ಹಿರಿಯರಾದ ಶೇಖರ ಪೂಜಾರಿ ಶಿಬಾರ್ಲ ಇವರು ನೇರವರಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸದಸ್ಯರಿಗೆ ಲೋಕೇಶ್ ಬೆತ್ತೊಡಿ ರಸಪ್ರಶ್ನೆಗಳನ್ನು ನಡೆಸಿಕೊಟ್ಟರು. ಡಾ.ರಾಜರಾಮ್ ಇವರ ಮಗ ಮಾಸ್ಟರ್ ರಿತೇಶ್ ಇವರು ಕೀ ಬೋರ್ಡ್ ಮೂಲಕ ಹಲವು ಹಾಡುಗಳನ್ನು ನುಡಿಸಿ ಮನರಂಜನೆ ನೀಡಿದರು. ಯುವ ತುಡರ್ ಕಾರ್ಯಕ್ರಮ ಆಯೋಜನೆ ಮಾಡಿದ ಚಂದ್ರಶೇಖರ ಸನಿಲ್ ದಂಪತಿಗಳನ್ನು ಈ ಸಂದರ್ಭದಲ್ಲಿ ಗೌರವಿಸಿ ಅಭಿನಂದಿಸಲಾಯಿತು. ಪೂರ್ವಾಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಸ್ವಾಗತಿಸಿ, ಘಟಕದ ಕಾರ್ಯದರ್ಶಿ ಅನಿಲ್ ಕುಮಾರ್ ದಡ್ಡು ಧನ್ಯವಾದಗೈದರು. ಘಟಕದ ವ್ಯಕ್ತಿತ್ವ ವಿಕಸನ ನಿರ್ದೇಶಕರಾದ ನಾಣ್ಯಪ್ಪ ಪೂಜಾರಿ ಇವರು ಕಾರ್ಯಕ್ರಮ ನಿರೂಪಿಸಿದರು. ಸುಮಾರು 150 ಮಂದಿ ಸದಸ್ಯರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!