Yuvavahini

DEC 16, 2018 4.19 PM IST

ಯುವವಾಹಿನಿ(ರಿ) ಬೆಳ್ತಂಗಡಿ ಘಟಕದಿಂದ ನಡೆದ ಸಾಂತ್ವನ ನಿಧಿಯ ಸಹಾಯಾರ್ಥ ನಡೆದ ಕ್ರಿಕೆಟ್ ಪಂದ್ಯಾಟದ ಸಮಾರೋಪ ಸಮಾರಂಭ

ನುಡಿದಂತೆ ನಡೆದ ಸಂಘಟನೆ ಯುವವಾಹಿನಿ : ಭಗೀರಥ ಜಿ

ಬೆಳ್ತಂಗಡಿ : ಯುವ ಸಮುದಾಯವನ್ನು ಒಟ್ಟುಗೂಡಿಸಿಕೊಂಡು ಕಳೆದ ನಾಲ್ಕು ವರ್ಷಗಳಿಂದ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತ ಅಶಕ್ತರಿಗೆ ಸಂಜೀವಿನಿಯಾಗಿ.ಇಂತಹ ಕ್ರೀಡಾಕೂಟದ ಮೂಲಕ ನೊಂದವರಿಗೆ ನೆರವನ್ನು ನೀಡುತ್ತಾ ನುಡಿದಂತೆ ನಡೆಯುತ್ತಿರುವ ಸಂಘಟನೆ ಅದು ಯುವವಾಹಿನಿ ಬೆಳ್ತಂಗಡಿ ಘಟಕ ಎಂದು ಶ್ರೀ ಗುರುನಾರಯಣ ಸ್ವಾಮಿ ಸೇವಾ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಭಗೀರಥ ಜಿ ಹೇಳಿದರು.
ಅವರು ದಿನಾಂಕ 16.12.2018 ರಂದು  ಬೆಳ್ತಂಗಡಿ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಯುವವಾಹಿನಿ(ರಿ) ಬೆಳ್ತಂಗಡಿ ಘಟಕದಿಂದ ನಡೆದ ಸಾಂತ್ವನ ನಿಧಿಯ ಸಹಾಯಾರ್ಥ ನಡೆದ ಕ್ರಿಕೆಟ್ ಪಂದ್ಯಾಟದ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಾಜಿ ಶಾಸಕರಾದ ಕೆ ಪ್ರಭಾಕರ ಬಂಗೇರ ಮಾತನಾಡಿ ಸಂಘಟನೆಗಳು ಈ ರೀತಿಯ ಕೆಲಸ ಕಾರ್ಯಗಳ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ತಲುಪಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಬಿಲ್ಲವ ಮಹಾಮಂಡಲದ ಉಪಾಧ್ಯಕ್ಷರಾದ ಪಿತಾಂಬರ ಹೇರಾಜೆ ಮಾತನಾಡಿ ಪಂದ್ಯಾಟದಲ್ಲಿ ಸೋಲು ಗೆಲುವು ಮುಖ್ಯವಲ್ಲ. ಕ್ರೀಡಾಪಟುಗಳು ಕ್ರೀಡೆಗಳಲ್ಲಿ ಭಾಗವಹಿಸಿ ಕ್ರೀಡಾ ಸ್ಫೂರ್ತಿಯಿಂದ ಆಡುವುದು ಮುಖ್ಯ ಎಂದು ಹೇಳಿದರು.
ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶೈಲೇಶ್ ಕುಮಾರ್ ಕುರ್ತೊಡಿ ಮಾತನಾಡಿ ಸಂಘಟನೆಗಳು ಈ ರೀತಿಯ ಕೆಲಸ ಕಾರ್ಯಗಳ ಮೂಲಕ ಅಶಕ್ತರಿಗೆ ನೆರವನ್ನು ನೀಡುತ್ತಿರುವುದು ಅಭಿನಂದನೀಯ ಕೆಲಸ ಎಂದು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಗುರುದೇವ ಬ್ಯಾಂಕಿನ ವಿಶೇಷ ಅಧಿಕಾರಿ ಮೋನಪ್ಪ ಪೂಜಾರಿ ಕಂಡೆಂತ್ಯಾರು, ಜಿಲ್ಲಾ ಯುವಜನ ಒಕ್ಕೂಟದ ಗೌರವಅಧ್ಯಕ್ಷರಾದ ರಾಜೀವ್ ಸಾಲಿಯನ್ ಮೂಂಡುರು,ತಾಲ್ಲೂಕು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಮನೋಹರ್ ಇಳಂತಿಲ, ಸಂದರ್ಭೋಚಿತವಾಗಿ ಮಾತನಾಡಿದರು ಘಟಕದ ಅಧ್ಯಕ್ಷ ಪ್ರಶಾಂತ್ ಮಚ್ಚಿನ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಯುವ ಕಾಂಗ್ರೆಸ್ ಬೆಳ್ತಂಗಡಿ ಇದರ ಅಧ್ಯಕ್ಷರಾದ ಅಭಿನಂದನ್ ಹರೀಶ್ ಕುಮಾರ್, ನಿಕಟಪೂರ್ವ ಪ್ರಾಂತೀಯ ಅಧ್ಯಕ್ಷರು ಲಯನ್ಸ್ ಜಿಲ್ಲೆ 317D ನಿತ್ಯಾನಂದ ನಾವರ, ನಗರ ಪಂಚಾಯತ್ ಸದಸ್ಯರಾದ  ತುಳಸಿ ಕರುಣಾಕರ್ ,ಯುವ ಬಿಲ್ಲವ ವೇದಿಕೆ ಬೆಳ್ತಂಗಡಿ ಇದರ ಅಧ್ಯಕ್ಷರಾದ ಸಂತೋಷ್ ಕುಮಾರ್ ಉಪ್ಪಾರು. ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ರಾಜೇಶ್ ಕೋಟ್ಯಾನ್. ಕ್ರೀಡಾ ಸಂಚಾಲಕರಾದ ಉಮೇಶ್ ಸುವರ್ಣ ಶಿರ್ಲಾಲು, ಶಶಿಧರ್ ಅದೇಲು ಉಮಾನಾಥ್ ಕೋಟ್ಯಾನ್ ಬೆಳಾಲು, ಪವನ್ ಕುಮಾರ್ ಕಟ್ಟೆ, ರಾಕೇಶ್ ಬಂಗೇರ, ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಜಯರಾಜ್ ನಡಕ್ಕರ ವಂದಿಸಿ , ನಿರ್ದೇಶಕ ಅಶ್ವತ್ಥ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!