Yuvavahini

DEC 18, 2018 4.46 PM IST

ಯುವವಾಹಿನಿ(ರಿ) ಬೆಳ್ತಂಗಡಿ ಘಟಕ

ಕೆ ವಸಂತ ಬಂಗೇರರಿಂದ ಯುವವಾಹಿನಿ ಸಾಂತ್ವಾನ ನಿಧಿ ಹಸ್ತಾಂತರ

ಬೆಳ್ತಂಗಡಿ : ಮೂಂಡೂರು ಗ್ರಾಮದ ಪರನೀರು ಯೋಗೀಶ್ ಯಾನೆ ಗೋಪಾಲ್ ಇವರು ಬಸ್ ಅಪಘಾತಕ್ಕಿಡಾಗಿ ಬಲ ಕಾಲನ್ನು ಕಳೆದುಕೊಂಡಿದ್ದು ಇವರ ಚಿಕಿತ್ಸೆಗೆ ನೆರವಾಗುವ ದೃಷ್ಟಿಯಿಂದ ಯುವವಾಹಿನಿ(ರಿ) ಬೆಳ್ತಂಗಡಿ ಘಟಕ ಕ್ರಿಕೆಟ್ ಪಂದ್ಯಾಟವನ್ನು ಆಯೋಜಿಸಿ ಅತಿಥಿಗಳು ಹಾಗೂ ಪಂದ್ಯಾಟದಲ್ಲಿ ಉಳಿಕೆಯಾದ ಮೊತ್ತ ಮತ್ತು ಮಾಜಿ ಶಾಸಕರಾದ ಕೆ ವಸಂತ ಬಂಗೇರರು ನೀಡಿದ 10000.00 ಮೊತ್ತವನ್ನು ಒಟ್ಟು ಸೇರಿಸಿ 50000.00 ರೂಪಾಯಿ ಸ್ವಾಂತ್ವನ ನಿಧಿಯನ್ನು ದಿನಾಂಕ 18.12.2018 ರಂದು ಮಾಜಿ ಶಾಸಕರು ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಮಾಜಿ ಶಾಸಕರು ಯುವವಾಹಿನಿ ಸಂಘಟನೆಯು ಬೆಳ್ತಂಗಡಿ ತಾಲ್ಲೂಕಿನಲ್ಲಿ ಉತ್ತಮ ಕೆಲಸಗಳನ್ನು ಮಾಡುತ್ತ ಬಡವರ ಕಷ್ಟಗಳಿಗೆ ಸ್ಪಂದಿಸುವ ಯುವ ಸಂಘಟನೆಯಾಗಿರುತ್ತದೆ.
ಮತ್ತು ಯೋಗಿಶ್ ರವರ ಅರೋಗ್ಯವು ಬೇಗ ಸುದರಿಸಲಿ ಎಂದು ಹಾರೈಸಿದರು

ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಪ್ರಶಾಂತ್ ಮಚ್ಚಿನ ನಿಕಟಪೂರ್ವ ಅಧ್ಯಕ್ಷರಾದ ಸದಾನಂದ ಪೂಜಾರಿ ಉಂಗಿಲಬೈಲು. ಘಟಕದ ಸಲಹೆಗಾರದ ರಮಾನಂದ ಸಾಲಿಯಾನ್ ಮೂಂಡೂರು ರಘುನಾಥ ಶಾಂತಿ ಕಾರ್ಯದರ್ಶಿ ಜಯರಾಜ್ ನಡಕ್ಕರ ಕೋಶಾಧಿಕಾರಿ ಉಮೇಶ್ ಸುವರ್ಣ ಶಿರ್ಲಾಲು, ಜತೆ ಕಾರ್ಯದರ್ಶಿ ಗುರುಪ್ರಸಾದ್ ಕೋಟ್ಯಾನ್ ಉಜಿರೆ ಉಪಾಧ್ಯಕ್ಷರಾದ ಯಶೋಧರ ಚಾರ್ಮಾಡಿ, ನಿರ್ದೇಶಕರಾದ ಹರೀಶ್ ಕನ್ಯಾಡಿ ಅಶ್ವಥ್ ಕುಮಾರ್, ವಿಜಯ್ ಕುಮಾರ್ ಶಿರ್ಲಾಲ್, ಸುನೀಲ್ ಕನ್ಯಾಡಿ, ಸದಾಶಿವ ಊರ, ನವೀನ್ ಇಂದಬೆಟ್ಟು, ಸಂದೀಪ್ ಎಸ್ ಎನ್ ಅರ್ವ. ಮೂಂಡುರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾದ ಗುರುವಪ್ಪ ಸಾಲಿಯಾನ್ ಕೇರಿಯರ್ ಹಾಗೂ ರಾಜೀವ್‌ ಸಾಲಿಯಾನ್ ಉದಯ ಬಂಗೇರ ಜಯನಂದ ಪರನೀರು ಅಶೋಕ ರಾಘವೇಂದ್ರ ಮತ್ತು ಮನೆಯವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!