Yuvavahini

JAN 13, 2019 4.06 PM IST

ಯುವವಾಹಿನಿಯ ವಿದ್ಯಾನಿಧಿ ಯೋಜನೆ ಶ್ಲಾಘನೀಯ : ಅನಿಲ್ ಕುಮಾರ್

ಕೂಳೂರು : ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ದಿನಾಂಕ 13-01-2019 ರಂದು ವಿದ್ಯಾನಿಧಿಯ ಬಲವರ್ಧನೆಗಾಗಿ ಶಾರದಾ ಕಲಾ ಆರ್ಟ್ಸ್ ಕಲಾವಿದೆರ್(ರಿ) ಮಂಜೇಶ್ವರ ಇವರ ಬತ್ತಿಯಿಂದ ‘ ನಿತ್ಯೆ ಬನ್ನಗ ‘ ಎಂಬ ನಾಟಕವನ್ನು ಆಯೋಜಿಸಲಾಗಿತ್ತು .ಯುವವಾಹಿನಿ ಕೂಳೂರು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಇವರು ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು .ಮುಖ್ಯ ಅತಿಥಿಗಳಾಗಿ ಅನಿಲ್ ಕುಮಾರ್ -ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ,ನವೀನ್ ಚಂದ್ರ ಬಿ ಪೂಜಾರಿ – ಬಿಜೆಪಿ ಉತ್ತರ ವಿಧಾನಸಭಾ ಕ್ಷೇತ್ರ ಹಿಂದುಳಿದ ಮೋರ್ಚಾ ಉಪಾಧ್ಯಕ್ಷರು, ಯುವವಾಹಿನಿ(ರಿ) ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ನರೇಶ್ ಕುಮಾರ್‍ ಸಸಿಹಿತ್ಲು ಆಗಮಿಸಿದ್ದರು. ಯುವವಾಹಿನಿ(ರಿ) ಕೂಳೂರು ಘಟಕದ ಗೌರವ ಸಲಹೆಗಾರರಾದ ನೇಮಿರಾಜ್, ಘಟಕದ ಉಪಾಧ್ಯಕ್ಷರು ಹಾಗೂ ಕಾರ್ಯಕ್ರಮದ ಸಂಚಾಲಕರಾದ ಭಾಸ್ಕರ್ ಕೋಟ್ಯಾನ್ ,ಘಟಕದ ಕಾರ್ಯದರ್ಶಿ ಪವಿತ್ರ ಅಂಚನ್ ಉಪಸ್ಥಿತರಿದ್ದರು .ರಾತ್ರಿ 8 ಗಂಟೆಗೆ ಸರಿಯಾಗಿ ಸಭಾ ಕಾರ್ಯಕ್ರಮವು ಪ್ರಾರ್ಥನೆಯ ಮೂಲಕ ಪ್ರಾರಂಭಗೊಂಡಿತು .ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಬಂದಿರುವ ಎಲ್ಲ ಅತಿಥಿಗಳನ್ನು ಸ್ವಾಗತಿಸಿದರು .ಮುಖ್ಯ ಅತಿಥಿಯಾದ ಅನಿಲ್ ಕುಮಾರ್ ಇವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ತಮ್ಮ ಉದ್ಘಾಟನಾ ಭಾಷಣದಲ್ಲಿ -ಯುವವಾಹಿನಿಯು ವಿದ್ಯಾ ನಿಧಿಗಾಗಿ ಉತ್ತಮ ಕಾರ್ಯಕ್ರಮವನ್ನು ಮಾಡುತ್ತಿರುವುದರ ಬಗ್ಗೆ ಅಭಿನಂದಿಸಿದರು .ಇದೇ ರೀತಿ ಬಿಲ್ಲವ ಸಮಾಜ ಒಗ್ಗಟ್ಟಿನಿಂದ ವಿದ್ಯೆಗೆ ಹೆಚ್ಚಿನ ಪ್ರೋತ್ಸಾಹ ನೀಡಿ ಇಂತಹ ಉತ್ತಮ ಕಾರ್ಯವನ್ನು ಮಾಡಬೇಕೆಂದು ತಿಳಿಸಿದರು .ಇನ್ನೋರ್ವ ಅತಿಥಿಯಾದ ನವೀನ್ ಚಂದ್ರ ಬಿ.ಪೂಜಾರಿ ಇವರು ಮಾತನಾಡಿ ಕೂಳೂರು ಘಟಕವು ವಿಶೇಷ ಕಾರ್ಯಕ್ರಮಗಳನ್ನು ಮಾಡಿಕೊಂಡು ಬಂದಿದ್ದು ಈ ಬಾರಿ ಮಾಡಿದಂತಹ ಫಲ್ಗುಣಿ ನದಿ ಸ್ವಚ್ಛತಾ ಕಾರ್ಯಕ್ರಮದ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಬಿಲ್ಲವ ಸಮಾಜ ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಕ್ಷೇತ್ರದಲ್ಲೂ ಮುಂದುವರಿಯಬೇಕೆಂದು ತಿಳಿಸಿದರು .ಬಳಿಕ ಭಾರತೀಯ ಸೈನ್ಯದಲ್ಲಿ ಸೇವೆ ಸಲ್ಲಿಸಿರುವಂತಹ ಘಟಕದ ನಿಕಟಪೂರ್ವ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್ ಹಾಗೂ ಕ್ರೀಡೆಯಲ್ಲಿ ಸಾಧನೆ ಗೈದಿರುವ ಮಾಸ್ಟರ್ ಸುಬಿತ್ ಇವರನ್ನು ಘಟಕದ ವತಿಯಿಂದ ಸನ್ಮಾನಿಸಲಾಯಿತು. ಬಳಿಕ ಊರಿನವರೇ ಆದ ಬಿಕೆ ಭಾಸ್ಕರ್ ಅವರನ್ನು ಇವರ ವೈಯಕ್ತಿಕ ಸಾಧನೆಯನ್ನು ಗುರುತಿಸಿ ಅಭಿನಂದಿಸಲಾಯಿತು ಹಾಗೂ ನಮ್ಮ ಘಟಕದ ಸದಸ್ಯರ ಮಕ್ಕಳಾದ ಮಾಸ್ಟರ್‌ ಯಶಸ್, ಕೌಶಿಕ್,ಗಗನ್ ಸೃಜನ್ ಇವರ ಕ್ರೀಡಾ ಸಾಧನೆ ಗುರುತಿಸಿ ಅಭಿನಂದಿಸಲಾಯಿತು ಹಾಗೂ ನಮ್ಮ ಘಟಕದ ಹಿರಿಯ ಸದಸ್ಯರಾದ ಸುಶೀಲ ಇವರನ್ನು ಇವರ ಯುವವಾಹಿನಿಯ ಬಗೆಗಿನ ಹೆಚ್ಚಿನ ಪ್ರೀತಿ ವಾತ್ಸಲ್ಯವನ್ನು ಗುರುತಿಸಿ ಅವರನ್ನು ಅಭಿನಂದಿಸಲಾಯಿತು .ಹಾಗೂ ಆರ್ಥಿಕ ಸಂಕಷ್ಟದಲ್ಲಿರುವ ಅತಿ ಬಡ ಕುಟುಂಬವೊಂದಕ್ಕೆ ಸಹಾಯ ಮಾಡುವ ನಿಟ್ಟಿನಲ್ಲಿ ಶಾರದಾ ಗುರುವಪ್ಪ ಬೋಂದೆಲ್ ಇವರ ಕುಟುಂಬಕ್ಕೆ ಆರ್ಥಿಕ ನೆರವು ಹತ್ತು ಸಾವಿರ ರೂಪಾಯಿಯನ್ನು ಘಟಕದ ವತಿಯಿಂದ ನೀಡಲಾಯಿತು. ನಂತರ ಯುವವಾಹಿನಿ(ರಿ) ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ನರೇಶ್ ಕುಮಾರ್ ಸಸಿಹಿತ್ಲು ಮಾತನಾಡಿ ಕೂಳೂರು ಘಟಕವು ಕೂಡು ಕುಟುಂಬದ ರೀತಿ ಇದ್ದು ವಿಭಿನ್ನ ಘಟಕವಾಗಿದ್ದು ವಿನೂತನ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳ ವಿದ್ಯೆಗಾಗಿ ನಡೆಸಿಕೊಂಡು ಬಂದಿರುತ್ತದೆ ಎಂದರು. ಹಾಗೂ ಮಂಗಳೂರಿನ DC ಮೆ ಚ್ಚುಗೆ ವ್ಯಕ್ತಪಡಿಸಿರುವ ಫಲ್ಗುಣಿ ನದಿ ಸ್ವಚ್ಛತಾ ಕಾರ್ಯಕ್ರಮವು ಯುವವಾಹಿನಿಯ ಒಂದು ಉತ್ತಮ ಕಾರ್ಯಕ್ಕೆ ಅಭಿನಂದಿಸಿದರು .ಘಟಕದ ಸಲಹೆಗಾರರಾದ ನೇಮಿರಾಜ್ ತಮ್ಮ ಪ್ರಾಸ್ತಾವಿಕ ಭಾಷಣದಲ್ಲಿ ತಮ್ಮ ಘಟಕದ ವಿವಿಧ ಕಾರ್ಯಕ್ರಮಗಳ ಉದ್ದೇಶವನ್ನು ತಿಳಿಸಿದರು. ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಮಾತನಾಡಿ ವಿದ್ಯಾನಿಧಿ ಬಲವರ್ಧನೆಗಾಗಿ ಈ ನಾಟಕ ಕಾರ್ಯಕ್ರಮ ನಡೆಯುತ್ತಿದ್ದು, ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು ಕೊಡಿಸುವ ಒಳ್ಳೆಯ ಉದ್ದೇಶ ಹೊಂದಿರುವುದಾಗಿ ತಿಳಿಸಿದರು . ಸಭೆಯಲ್ಲಿ ಕೂಳೂರು ಘಟಕದ ನಿಕಟಪೂರ್ವ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್ ಸ್ಥಾಪಕ ಅಧ್ಯಕ್ಷರಾದ ಸುಜಿತ್ ರಾಜ್ ,ಯುವವಾಹಿನಿ(ರಿ) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ರವಿಚಂದ್ರ ಇವರು ಸಭೆಯಲ್ಲಿ ಉಪಸ್ಥಿತರಿದ್ದರು .ಪ್ರತೀಶ್ ಗೌರೀಶ್ ಕಾರ್ಯಕ್ರಮ ನಿರೂಪಿಸಿದರು .ಸಂಚಾಲಕರಾದ ಭಾಸ್ಕರ್ ಕೋಟ್ಯಾನ್ ವಂದಿಸಿದರು .ಬಳಿಕ ರಿದಮ್ ಡ್ಯಾನ್ಸ್ ಸ್ಟುಡಿಯೋ ಕೂಳೂರು ಇವರ ವತಿಯಿಂದ ಮಕ್ಕಳು ನೃತ್ಯ ಪ್ರದರ್ಶನ ನಡೆಯಿತು .ನಂತರ ಶಾರದಾ ಕಲಾ ಆರ್ಟ್ಸ್ ಕಲಾವಿದೆರ್ (ರಿ)ಮಂಜೇಶ್ವರ ಅಭಿನಯಿಸುವ ನಿತ್ಯೆ ಬನ್ನಗ ಎಂಬ ನಾಟಕ ಪ್ರದರ್ಶನಗೊಂಡಿತು. ನಾಟಕದ ಮುಖ್ಯ ಹಾಸ್ಯ ಕಲಾವಿದರಾದ ದೀಪಕ್ ರೈ ಪಣಾಜೆ ಇವರನ್ನು ಕೂಳೂರು ಘಟಕದ ವತಿಯಿಂದ ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು . ಹಾಗೂ ವಿದ್ಯಾನಿಧಿ ಲಕ್ಕಿಡಿಪ್ ಡ್ರಾ ಅನ್ನು ವಿದ್ಯಾನಿಧಿ ನಿರ್ದೇಶಕರಾದ ನಯನಾ ರಮೇಶ್ ಇವರು ನಡೆಸಿಕೊಟ್ಟರು .ಪ್ರಥಮ ಬಹುಮಾನ ಯುವವಾಹಿನಿ(ರಿ) ಮಂಗಳೂರು ಘಟಕದ ಸದಸ್ಯರಾದ ಶ್ರೀಕಾಂತ್ ಇವರಿಗೆ ದೊರಕಿತು. ದ್ವಿತೀಯ ಬಹುಮಾನ ಸ್ಥಳೀಯರಾದ ನಾರಾಯಣ ಇವರಿಗೆ ದೊರಕಿತು.ಕಾರ್ಯಕ್ರಮದಲ್ಲಿ ಸುಮಾರು 500 ಕ್ಕಿಂತ ಹೆಚ್ಚಿನ ಜನ ಭಾಗವಹಿಸಿದ್ದರು .ಕಾರ್ಯಕ್ರಮದ ಕೊನೆಗೆ ಘಟಕದ ಸದಸ್ಯರಿಗೆ ಮತ್ತು ಕಲಾವಿದರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!