ಬೆಳ್ತಂಗಡಿ : ಸಂಘಟನೆಯ ಮೂಲಕ ಸಮಾಜಮುಖಿ ಕೆಲಸಗಳನ್ನು ಮಾಡುವುದರೊಂದಿಗೆ ಸಮಾಜ ಸೇವೆ ಮಾಡಬೇಕು ಎಂದು ಮಾಜಿ ಶಾಸಕ, ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಗೌರಾವಾಧ್ಯಕ್ಷ ಕೆ.ವಸಂತ ಬಂಗೇರ ಹೇಳಿದರು.
ಅವರು ಫೆ.24 ರಂದು ಸುವರ್ಣ ಆರ್ಕೇಡ್‌ನಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.)ಬೆಳ್ತಂಗಡಿ ಘಟಕದ ನೂತನ ಪದಾದಿಕಾರಿಗಳ ಪದಪ್ರಧಾನ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಬಿಲ್ಲವ ಸಂಘಟನೆ ತಾಲೂಕಿನಲ್ಲಿ 55 ವರ್ಷಗಳಿಂದ ಸಮಾಜಸೇವೆ ಮಾಡುತ್ತಿದ್ದು, ಯುವ ವಾಹಿನಿ ಕಳೆದ 5 ವರ್ಷಗಳಿಂದ ಉತ್ತಮ ಸೇವೆಯೊಂದಿಗೆ ಮುನ್ನಡೆಯುತ್ತಿದೆ, ಎಂದರು.ನೂತನ ಅಧ್ಯಕ್ಷ ಹರೀಶ್ ಕುಮಾರ್ ಕನ್ಯಾಡಿಯವರ ನೇತೃತ್ವದ ಪದಾಧಿಕಾರಿಗಳಿಗೆ ಪದಪ್ರಧಾನ ಬೊಧಿಸಿದ ಯುವವಾಹಿನಿ ಮಂಗಳೂರು ಕೇಂದ್ರ ಸಮಿತಿ ಅಧ್ಯಕ್ಷ ಜಯಂತ್ ನಡುಬೈಲ್ ಮಾತನಾಡುತ್ತಾ, ಬಿಲ್ಲವ ಸಮಾಜದ ಅಭಿವೃದ್ಧಿಗಾಗಿ ಶಿಕ್ಷಣ, ನಾಯಕತ್ವ, ಉದ್ಯೋಗದ ನಿಟ್ಟಿನಲ್ಲಿ ಕಳೆದ 31 ವರ್ಷಗಳ ಹಿಂದೆ ಪ್ರಾರಂಭವಾದ ಯುವವಾಹಿನಿ 33 ಘಟಕಗಳನ್ನು ಸ್ಥಾಪಿಸಿ, ಯುವಕರನ್ನು ಸಂಘಟಿಸುವ ಕೆಲಸ ಮಾಡುತ್ತಿದೆ. ಸಂಘಟನೆ ಬೇರೆ ಬೇರೆ ಇದ್ದರೂ ಬಿಲ್ಲವ ಸಂಘಟನೆಗಳು ಒಂದೇ ಎಂಬ ಭಾವನೆಯಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಪ್ರಶಾಂತ್ ಮಚ್ಚಿನ ವಹಿಸಿದ್ದರು. ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷ ನರೇಶ್ ಕುಮಾರ್ ಸಸಿಹಿತ್ಲು ದಿಕ್ಸೂಚಿ ಭಾಷಣ ಮಾಡಿದರ. ಈ ಸಂದರ್ಭದಲ್ಲಿ ಉತ್ತಮ ಸಹಕಾರಿ ಸೇವೆಗೈಯುತ್ತಿರುವ ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘ, ಶೈಕ್ಷಣಿಕ ಸಾಧನೆಗೈದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಗುರುವಾಯನಕೆರೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಚ್ಚಿನ ಸಾಧನಾ ಶ್ರೀ ಮತ್ತು ರಾಷ್ಟ್ರ ಮಟ್ಟದ ಕ್ರೀಡಾ ಕೂಟದಲ್ಲಿ ಭಾಗವಹಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂದಾರು ಹಾಗು ವಿದ್ಯಾರ್ಥಿಗಳನ್ನು ದೈಹಿಕ ಶಿಕ್ಷಣ ಶಿಕ್ಷಕರನ್ನು ಪುರಸ್ಕಾರ ನೀಡಿ ಗೌರವಿಸಲಾಯಿತು.
ಶ್ರೀ ಗುರುದೇವ ವಿವಿದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಮಾಣಿಂಜ ಗೌರವ ಸ್ವೀಕರಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಸೋಮನಾಥ ಬಂಗೇರ ವರ್ಪಾಳೆ, ಮಾಜಿ ಶಾಸಕ ಕೆ.ಪ್ರಭಾಕರ ಬಂಗೇರ, ಬಿಲ್ಲವ ಮಹಾ ಮಂಡಲದ ಉಪಾಧ್ಯಕ್ಷ ನಿವೃತ್ತ ಎಸ್.ಪಿ ಪೀತಾಂಬರ ಹೇರಾಜೆ, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್.ಬಿ.ಸುವರ್ಣ ಜಿ.ಪಂ ಮಾಜಿ ಸದಸ್ಯ ಕೆ. ಶೈಲೇಶ್ ಕುಮಾರ್, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಂಘಟನಾ ಕಾರ್ಯದರ್ಶಿ ಸಚಿನ್ ನೊಜೋಡಿ, ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಪ್ರೇಮನಾಥ್.ಕೆ, ಭಾಗವಹಿಸಿದ್ದರು.
ಬೆಳ್ತಂಗಡಿ ಯುವಬಿಲ್ಲವ ವೇದಿಕೆಯ ಅಧ್ಯಕ್ಷ ಸಂತೋಷ್ ಕುಮಾರ್ ಉಪ್ಪಾರು ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ರಾಜಶ್ರೀ ರಮಣ್, ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ ಅಧ್ಯಕ್ಷ ರಾಜೇಶ್ ಕೋಟ್ಯಾನ್, ಕೇಂದ್ರ ಸಮಿತಿಯ ನಾಮ ನಿರ್ದೇಶಿತ ಸದಸ್ಯ ಉಮನಾಥ್ ಕೋಟ್ಯಾನ್ ಗೌರವ ಉಪಸ್ಥಿತರಿದ್ದರು.
ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಜಯಂತ್ ಕೋಟ್ಯಾನ್, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಾಜಿ ಅಧ್ಯಕ್ಷ ಭಗೀರಥ ಜಿ, ಜಯರಾಮ ಬಂಗೇರ ಹೇರಾಜೆ, ಶ್ರೀ ಗುರುದೇವ ವಿವಿದೋದ್ದೇಶ ಸಹಕಾರಿ ಸಂಘದ ವಿಶೇಷ ಅಧಿಕಾರಿ ಮೋನಪ್ಪ ಪೂಜಾರಿ ಕಂಡೆಂತ್ಯಾರು, ಮತ್ತು ಸಿಬ್ಬಂದಿ ವರ್ಗದವರು ಇನ್ನಿತರ ಗಣ್ಯರು ಸಭೆಯಲ್ಲಿ ಉಪಸ್ಥಿತರಿದ್ದರು. ಸಮಾರಂಭದಲ್ಲಿ ರಾಷ್ಟ್ರಮಟ್ಟದ ಚಿತ್ರಕಲೆ ಸಾಧಕಿ ಅಕ್ಷರ, ರಿಯಾಲಿಟಿ ಶೋದಲ್ಲಿ ಮಿಂಚಿದ ಸೃಷ್ಟಿ,ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಯನ್ನು ಗುರುತಿಸಲಾಯಿತು . ಡೆನ್ನಾನ ಡೆನ್ನಾನ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ ಸದಸ್ಯರುಗಳನ್ನು ಗೌರವಿಸಲಾಯಿತು.
ಘಟಕದ ನಿಕಟಪೂರ್ವ ಅಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು, ನೂತನ ಪದಾಧಿಕಾರಿಗಳ ಪಟ್ಟಿ ವಾಚಿಸಿದರು. ಉಪನ್ಯಾಸಕ ಸ್ಮಿತೇಶ್ ಎಸ್.ಬಾರ್ಯ ಸ್ವಾಗತಿಸಿದರು. ಯುವವಾಹಿನಿ ಕಾರ್ಯದರ್ಶಿ ಜಯರಾಜ್ ನಡಕ್ಕರ ವರದಿ ವಾಚಿಸಿದರು. ಅಶ್ವತ್ಥ್ ಕುಮಾರ್, ಪ್ರಜ್ಞಾ ಒಡಿಲ್ನಾಳ ಕಾರ್ಯಕ್ರಮ ನಿರೂಪಿಸಿದರು. ನೂತನ ಕಾರ್ಯದರ್ಶಿ ವಿಜಯಕುಮಾರ್ ಶಿರ್ಲಾಲು ವಂದಿಸಿದರು. ಕಾರ್ಯಕ್ರಮದ ಮೊದಲು ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿ ಬೆಳ್ತಂಗಡಿ ಇವರಿಂದ ನೃತ್ಯ ವೈವಿಧ್ಯ ನಡೆಯಿತು.