Yuvavahini

JUN 06, 2019 7.52 AM IST

ಯುವವಾಹಿನಿ(ರಿ) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ : ಗುರು ಸಂದೇಶ

ಬಾಲ್ಯದಲ್ಲಿಯೇ ಅಸ್ಪೃಶ್ಯತೆಯ ವಿರುದ್ಧ ಹೋರಾಡಿದ ಸಂತ ನಾರಾಯಣ ಗುರು :ಸತ್ಯಾನಂದ ತೀರ್ಥ ಸ್ವಾಮೀಜಿ

ಬೆಳ್ತಂಗಡಿ:ಕೇರಳರಾಜ್ಯದಲ್ಲಿ ಜಾತಿ, ಮತಭೇದಗಳು ಹೆಚ್ಚಾಗಿದ್ದ ಕಾಲದಲ್ಲಿ ‘ನಾರಾಯಣ ಗುರು,’ ವೆಂಬ, ಒಬ್ಬ ಸಮಾಜಕ ಸುಧಾರಕ, ಉದಯಿಸಿ, ಸಮಾಜದ ತಾರತಮ್ಯಗಳನ್ನು ಕಡಿಮೆಮಾಡಲು ಇಡೀಜೀವನವನ್ನು ಮುಡಿಪಾಗಿಟ್ಟರು. ಎಂದು ಕೇರಳ ಶಿವಗಿರಿ ಮಠದ ಶ್ರೀ ಸತ್ಯಾನಂದ ತೀರ್ಥ ಸ್ವಾಮಿಜಿ ಹೇಳಿದರು

ಅವರು ಜೂ 6 ರಂದು ಯುವವಾಹಿನಿ(ರಿ.)ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಸುವರ್ಣ ಆರ್ಕೆಡ್ ನಲ್ಲಿ ನಡೆದ ಗುರು ಸಂದೇಶ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು .
ಕೇರಳದ ತೀಯಾ ಸಮಾಜ ದವರಾದ ಮದನ್ ಆಸನ್ ಹಾಗೂ ಕುಟ್ಟಿ ಅಮ್ಮಾಳ್ ಎಂಬ ದಂಪತಿಗಳಿಗೆ ಜನಿಸಿದ ಗುರುಗಳು . ಕೇರಳದಲ್ಲಿ ಅನೇಕ ಜಾತಿಪಂಥಗಳಿದ್ದವು. ಮೇಲ್ಜಾತಿ, ಕೆಳಜಾತಿ, ಅಸ್ಪೃಷ್ಯತೆ ಮುಂತಾದ ಸಾಮಾಜಿಕ ಸಮಸ್ಯೆಗಳು ಎಲ್ಲೆಡೆ ಜನರ ಮನಸ್ಸನ್ನು ಹರಿದು ತಿನ್ನುತ್ತಿದ್ದವು. ಆಗ ನಾರಾಯಣ ಗುರುಗಳು ಈ ಎಲ್ಲಾ ಬೇಧ ಭಾವ ನಿವಾರಣೆಗೆ ಪಣತೊಟ್ಟು ತಮ್ಮ ಜೀವನದ ಧ್ಯೇಯವೆಂದು ಶಪಥಮಾಡಿದರು. ದೇವರ ಹೆಸರಿನಲ್ಲಿ ಪ್ರಾಣಿಹತ್ಯೆ ಅವರಿಗೆ ಸರಿಬೀಳಲಿಲ್ಲ. ಹೀಗೆ ಸಮಾಜದ ವಿರೋಧಾಭಾಸಗಳಿಗೆ ಮುಟ್ಟುಗೋಲು ಹಾಕಲು ಅವರು ತೆಗೆದುಕೊಂಡ ಕ್ರಮಗಳು, ಆಂದೋಲನಗಳು ಅನನ್ಯ. ಕೆಳವರ್ಗದಲ್ಲಿ ಜನಿಸಿದ ಜನರಿಗೆ ದೇವಸ್ಥಾನಗಳಲ್ಲಿ ಪ್ರವೇಶಕ್ಕೆ ಅನುಮತಿಕೊಡಲು ಅವರು ಬೇಡಲಿಲ್ಲ. ಹಿಂಸಾಚಾರದ ಚಳುವಳಿಗಳನ್ನೂ ನಡೆಸದೆ, ತಾವೇ ದೇವಾಲಯಗಳನ್ನು ಸ್ಥಾಪಿಸುವುದರ ಮೂಲಕ ಒಂದು ಹೊಸ-ಅನನ್ಯ-ಆಲೋಚನಾಕ್ರಮವನ್ನು ಹುಟ್ಟುಹಾಕಿದರು ಈ ಮೂಲಕ ಹುಚ್ಚರ ಆಸ್ಪತ್ರೆಯಾಗಿದ್ದ ಕೇರಳವನ್ನು ದೇವರ ನಾಡಗಿ ಬದಲಾಯಿಸಿದರು .
ಯುವ ಸಮಾಜ ಗುರುಗಳ ತತ್ವ ಸಂದೇಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೇ ಸದೃಢ ಸಮಾಜ ನಿರ್ಮಾಣವಾಗುತ್ತದೆ ಎಂದು ತಿಳಿಸಿದರು.
ವೇದಿಕೆಯಲ್ಲಿ ಘಟಕ ಅಧ್ಯಕ್ಷರಾದ ಹರೀಶ್ ಸುವರ್ಣ ಕನ್ಯಾಡಿ
ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷರು ಘಟಕದ ಸಲಹೆಗಾರರದ ಸಂಪತ್ ಬಿ ಸುವರ್ಣ  ಘಟಕದ ಮಾಜಿ ಅಧ್ಯಕ್ಷರು ಶ್ರೀರಾಮ ಕ್ಷೇತ್ರ ಸೇವಾ ಸಮಿತಿ ಕನ್ಯಾಡಿ ಬೆಳ್ತಂಗಡಿ ತಾಲೂಕು ಸಮಿತಿಯ ಅಧ್ಯಕ್ಷರಾದ ಸದಾನಂದ ಪೂಜಾರಿ ಉಂಗಿಲಬೈಲು ಸಲಹೆಗಾರರಾದ ಗೋಪಾಲಕೃಷ್ಣ ಸಾಲ್ಯಾನ್ ಉಪಸ್ಥಿತರಿದ್ದರು ಘಟಕದ ಉಪಾಧ್ಯಕ್ಷ ಜಯರಾಜ್ ನಡಕ್ಕರ ಪ್ರಾರ್ಥಿಸಿ. ನಾರಾಯಣ ಗುರು ತತ್ವb ಪ್ರಚಾರ ನಿರ್ದೇಶಕರಾದ M.k ಪ್ರಸಾದ್ ಸ್ವಾಗತಿಸಿ ಕಾರ್ಯದರ್ಶಿ ವಿಜಯ್ ಕುಮಾರ್ ಶಿರ್ಲಾಲು ವಂದಿಸಿದರು ಸಂಘಟನ ಕಾರ್ಯದರ್ಶಿ ಗುರುಪ್ರಸಾದ್ ಗುರಿಪಳ್ಳ ಕಾರ್ಯಕ್ರಮ ನಿರೂಪಿಸಿದರು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!