ಕೂಳೂರು : ಯುವವಾಹಿನಿ ಕೂಳೂರು ಘಟಕದ ವತಿಯಿಂದ ಕಿಟ್ಟೆಲ್ ಪ್ರೌಢಶಾಲೆ ಗೋರಿಗುಡ್ಡೆ ಇಲ್ಲಿಯ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮವು ದಿನಾಂಕ 13.06.19 ರಂದು ಮಧ್ಯಾಹ್ನ 3 ಗಂಟೆಗೆ ಸರಿಯಾಗಿ ಶಾಲೆಯಲ್ಲಿ ನಡೆಯಿತು.
ಶಾಲಾ ಪ್ರಾಂಶುಪಾಲರು ವಿಠ್ಠಲ್ ರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿ ಯುವವಾಹಿನಿ ಎಂಬುದು ಅತ್ಯುತ್ತಮ ಸಂಘಟನೆಯಾಗಿದ್ದು, ಅತ್ಯುತ್ತಮ ಸಮಾಜಮುಖಿ ಕಾರ್ಯಗಳ ಮೂಲಕ ಯುವಜನತೆಯಲ್ಲಿ ಸ್ಪೂರ್ತಿ ನೀಡಿದೆ. ಹಾಗೂ ಶಾಲಾ ಮಕ್ಕಳಿಗೆ ಮಾದರಿಯಾಗಿದೆ ಎಂದರು.ಮುಂದಿನ ದಿನಗಳಲ್ಲಿ ಯುವವಾಹಿನಿ ಕೂಳೂರು ಘಟಕವು ಸಾಧನೆಯ ಶಿಖರವನ್ನೇರುವಂತಾಗಲಿ ಎಂದು ಶುಭ ಹಾರೈಸಿದರು. ಗೋರಿಗುಡ್ಡೆ ಕಿಟ್ವೆಲ್ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುವ ಹೆಚ್ಚಿನ ವಿದ್ಯಾರ್ಥಿಗಳು ಅನಾಥರಾಗಿದ್ದು ಶೇಕಡಾ 90 ರಷ್ಟು ಮಕ್ಕಳಿಗೆ ಉಚಿತ ಶಿಕ್ಷಣ ನೀಡಲಾಗುತ್ತಿದೆ, ಇಂತಹ ಮಕ್ಕಳಿಗೆ ಸಹಾಯಹಸ್ತ ಚಾಚಿದ ಯುವವಾಹಿನಿ ಕೂಳೂರು ಘಟಕದ ಸದಸ್ಯರು ಅಭಿನಂದಾನಾರ್ಹರು ಎಂದರು.
ಕೂಳೂರು ಘಟಕದ ಸಲಹೆಗಾರರಾದ ನೇಮಿರಾಜ್ ಯುವವಾಹಿನಿ ಸಂಸ್ಥೆಯ ಬಗ್ಗೆ ಮಾಹಿತಿ ನೀಡಿದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಯುವವಾಹಿನಿ ಕೂಳೂರು ಘಟಕದ ಅಧ್ಯಕ್ಷರಾದ ಭಾಸ್ಕರ್ ಮಾತನಾಡಿ ಕಲಿತ ಶಾಲೆಯ ಋಣ ತೀರಿಸುವ ಅವಕಾಶಕ್ಕಾಗಿ ಕೃತಜ್ಞತೆ ಸಲ್ಲಿಸಿದರು. ತಮ್ಮ ಶಾಲೆಯ ಹಳೆ ವಿದ್ಯಾರ್ಥಿ ಯುವವಾಹಿನಿಯಂತಹ ಶ್ರೇಷ್ಠ ಸಂಘಟನೆಯ ಅಧ್ಯಕ್ಷರಾಗಿರುವುದು ನಮಗೆಲ್ಲರಿಗೂ ಹೆಮ್ಮೆಯ ಮತ್ತು ಸಂತಸದ ವಿಚಾರ ಎಂದು ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಜ್ಯೋತಿರವರು ತಿಳಿಸಿದರು.
ರೂ 60,000/- ಮೊತ್ತದ ಪುಸ್ತಕವನ್ನು 200 ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಕೇಂದ್ರ ಸಮಿತಿಯ ಸ್ಥಾಪಕ ಅಧ್ಯಕ್ಷರಾದ ಸಂಜೀವ ಪೂಜಾರಿ, ನಿಕಟಪೂರ್ವ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಮಾಜಿ ಅಧ್ಯಕ್ಷರು ಪುಷ್ಪರಾಜ್ ಕುಮಾರ್, ಕಾರ್ಯದರ್ಶಿ ಮಧುಶ್ರೀ ಪ್ರಶಾಂತ್, ಉಪಾಧ್ಯಕ್ಷರಾದ ಪವಿತ್ರ ಅಮೀನ್, ಮಾರ್ಗದರ್ಶಕರಾದ ಗಿರಿಧರ್ ಸನಿಲ್, ಸಂಘಟನಾ ಕಾರ್ಯದರ್ಶಿ ನಿಶಿತ್, , ಅಧ್ಯಾಪಕ ಕೃಷ್ಣ ಭಟ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಬಬಿತಾ ಹಾಗೂ ಎಲ್ಲಾ ಅಧ್ಯಾಪಕರು, ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಅಧ್ಯಾಪಕ ಕೃಷ್ಣ ಭಟ್ ಸ್ವಾಗತಿಸಿದರು. ಪ್ರಾಧ್ಯಾಪಕ ರಂಗನಾಥ್ ಭಟ್ ವಂದಿಸಿದರು.